ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!

ಬೆಂಗಳೂರು : ಮುಖ್ಯಮಂತ್ರಿ(ChiefMinister) ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗೆ ಕೋವಿಡ್-19(Covid 19) ಪಾಸಿಟಿವ್(Positive) ದೃಢಪಟ್ಟಿದೆ. ಹೀಗಾಗಿ ಅವರು ಮನೆಯಲ್ಲೇ ಐಸೋಲೇಷನ್‌ಗೆ ಒಳಗಾಗಲಿದ್ದು, ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ. ಹೀಗಾಗಿ ಅವರ ಭೇಟಿಗೆ ಸಾರ್ವಜನಿಕರು ಸೇರಿದಂತೆ ಯಾರಿಗೂ ಅವಕಾಶವಿರುವುದಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿಯ ಮೂಲಗಳು ತಿಳಿಸಿವೆ.


ಈ ಕುರಿತು ಟ್ವೀಟ್‌(Tweet) ಮಾಡಿರುವ ಅವರು, “ನನಗೆ ಕೋವಿಡ್-19 ಲಕ್ಷಣಗಳಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ ನಾನು ಮನೆಯಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ. ಅದೇ ರೀತಿ ನೀವು ಕೂಡಾ ಮನೆಯಲ್ಲೇ ಪ್ರತ್ಯೇಕವಾಗಿದ್ದು, ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ” ಎಂದು ಮನವಿ ಮಾಡಿದ್ದಾರೆ. ಇನ್ನು ಮುಖ್ಯಮಂತ್ರಿಗಳ ದೆಹಲಿ ಪ್ರವಾಸವನ್ನು ರದ್ದು ಮಾಡಲಾಗಿದೆ ಎಂದು ಕಚೇರಿಯ ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ರಾಜ್ಯಕ್ಕೆ ಭೇಟಿ ನೀಡಿ ಬಿಜೆಪಿ ನಾಯಕ ಅಮಿತ್‌ ಶಾ(Amit Shah), ನಮ್ಮ ಕಾರ್ಯಕರ್ತರ ಸರಣಿ ಹತ್ಯೆಗಳಾಗುತ್ತಿದ್ದರು, ನೀವು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಎಡವಿದ್ದೀರಿ. ವಿಪಕ್ಷಗಳು ಇದರ ಲಾಭ ಪಡೆದುಕೊಳ್ಳುತ್ತಿವೆ. ಚುನಾವಣೆ ವರ್ಷದಲ್ಲಿ ಈ ರೀತಿಯ ಘಟನೆಗಳು ನಡೆದರೆ, ಅದರಿಂದ ಪಕ್ಷಕ್ಕೆ ಭಾರೀ ನಷ್ಟ ಉಂಟಾಗಲಿದೆ. ಹೀಗಾಗಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಿ, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ತಯಾರಿ ನಡೆಸಿ, ವಿಧಾನಸಭಾ ಕ್ಷೇತ್ರವಾರು ಪಕ್ಷವನ್ನು ಬಲಪಡಿಸುವ ಸಂಬಂಧ ರೂಪರೇಷಗಳನ್ನು ಸಿದ್ದಪಡಿಸಿ,

ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಪಡಿಸುವ ಮತ್ತು ಚುನಾವಣೆ ದೃಷ್ಟಿಯಿಂದ ಮಾಡಿಕೊಳ್ಳಬೇಕಾದ ಸಿದ್ದತೆಗಳ ಸಂಪೂರ್ಣ ವರದಿಯೊಂದಿಗೆ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಭೇಟಿ ನೀಡಲು ಸಿದ್ದತೆ ಮಾಡಿಕೊಂಡಿದ್ದರು.

Exit mobile version