Maharashtra: ಮಹಾರಾಷ್ಟ್ರ (Maharashtra) ಹಾಗೂ ಜಾರ್ಖಂಡ್ (Jharkhand) ಚುನಾವಣಾ ಅಖಾಡ ರಂಗೇರುತ್ತಿದೆ. ಈ ನಡುವೆ ಪ್ರಧಾನಿ ಮೋದಿ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನ ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸುತ್ತಿದ್ದಾರೆ. ಈ ಹಿಂದೆ ನಡೆದ ಹರಿಯಾಣ ವಿಧಾನಸಭೆ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ( Narendra Modi), ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವಾಗ್ದಾಳಿ ನಡೆಸಿದ್ರು. ಅಲ್ಲದೇ ಹರಿಯಾಣ ಪ್ರಚಾರ ಸಭೆಗಳಲ್ಲೂ ಮೋದಿ ಮುಡಾ ಹಗರಣವನ್ನ ಪ್ರಸ್ತಾಪಿಸಿದ್ರು. ಕೊನೆಯ ಹಂತದ ಪ್ರಚಾರ ಸಭೆಗಳಲ್ಲಿ ಕಾಂಗ್ರೆಸ್‌ಗೆ ಇದು ಭಾರೀ ಹೊಡೆತವನ್ನೇ ಕೊಟ್ಟಿತ್ತು. ಸದ್ಯ ಮಹರಾಷ್ಟ್ರ ಚುನಾವಣಾ ಅಖಾಡದಲ್ಲಿ ಮೋದಿ ಹೂಡಿದ 700 ಕೋಟಿ ಅಸ್ತ್ರ ರಾಜ್ಯ ಕಾಂಗ್ರೆಸ್ ನಾಯಕರಿಗೆ ನುಂಗಲಾರದ ತುತ್ತಾಗಿದೆ.
ಕಾಂಗ್ರೆಸ್ ಸರ್ಕಾರ ಕರ್ನಾಟಕದ ಅಬಕಾರಿ ಇಲಾಖೆಯಿಂದ 700 ಕೋಟಿ ರೂ. ಲೂಟಿ ಮಾಡಿದೆ ಎಂಬ ಆರೋಪವನ್ನು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿಯಾಗುವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಶಿಗ್ಗಾವಿ ಕಾಂಗ್ರೆಸ್ (Early Congress) ಸಮಾವೇಶದಲ್ಲಿ ಮಾತನಾಡಿದ ಅವರು, ಒಂದು ವೇಳೆ ಆರೋಪ ಸಾಬೀತು ಪಡಿಸಲು ಆಗದಿದ್ದರೆ ನೀವು ರಾಜಕೀಯ (Political) ನಿವೃತ್ತಿಯಾಗಬೇಕು ಎಂದು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ನೇರ ಸವಾಲು ಹಾಕಿದ್ದಾರೆ.
ಭಾರತದ ಪ್ರಧಾನಿ ಸ್ಥಾನಕ್ಕೆ ಅದರದೇ ಆದ ಗೌರವವಿದೆ. ಅದನ್ನು ಬಿಟ್ಟು ದೇಶದ ಪ್ರಧಾನಿಯಾಗಿ ಇಷ್ಟು ಸುಳ್ಳು ಹೇಳ್ತಾರಲ್ಲ ಎಂದು ಆಶ್ಚರ್ಯವಾಗುತ್ತೆ. ಇಂತಹ ಸುಳ್ಳು ಹೇಳುವಂತಹ ಪ್ರಧಾನಿ (Prime) ಇತಿಹಾಸದಲ್ಲಿ ಬಂದಿರಲಿಲ್ಲ ಎಂದಿದ್ದಾರೆ. ಇನ್ನು ನಿನ್ನೆ ಇದೇ ವಿಚಾರವಾಗಿ (Election) ಟ್ವೀಟ್ ಮಾಡಿರುವ ಸಿಎಂ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅನುಭವಿಸಿದ ಸೋಲಿನ ದು:ಸ್ವಪ್ನದಿಂದ ಪ್ರಧಾನಿ ಮೋದಿ ಅವರು ಇನ್ನೂ ಹೊರಬಂದಿಲ್ಲ ಎಂದು ಕಾಣಿಸುತ್ತದೆ. ಹೋದಲ್ಲಿ ಬಂದಲ್ಲಿ ಮೋದಿಯವರು ಕರ್ನಾಟಕವನ್ನು ಮತ್ತೆ ಮತ್ತೆ ತಮ್ಮ ಭಾಷಣದಲ್ಲಿ ಎಳೆದು ತರುತ್ತಿದ್ದಾರೆ. ಕರ್ನಾಟಕದ ಮದ್ಯ (Liquor of Karnataka) ಮಾರಾಟಗಾರರು ನೀಡಿರುವ ರಾಜಕೀಯ ಪ್ರೇರಿತ (Politically motivated) ದೂರು ಅಷ್ಟು ಬೇಗ ಮೋದಿಯವರನ್ನು ತಲುಪಿ ಬಿಟ್ಟಿದೆ ಎಂದು ಕಿಡಿಕಾರಿದ್ದಾರೆ.