ಬೆಂಗಳೂರು, ಜು. 20: ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಬಿಜೆಪಿಯಲ್ಲಿ ಭಾರೀ ಕಸರತ್ತು ನಡೆಯುತ್ತಿದ್ದರೆ. ಮತ್ತೊಂದೆಡೆ ಯಡಿಯೂರಪ್ಪಗೆ ಬೆಂಬಲ ಸೂಚಿಸಿರುವ 30ಕ್ಕೂ ಹೆಚ್ಚು ಮಠಾಧೀಶರು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ಸಿಎಂ ಬದಲಾವಣೆ ವದಂತಿಗಳ ನಡುವೆ ರಾಜ್ಯದಲ್ಲಿ ಈಗಾಗಲೇ ರಾಜಕೀಯ ಚಟುವಟಿಗೆಗಳು ಗರಿಗೆದರಿದೆ. ಇದರ ಬೆನ್ನಲ್ಲೇ ರಾಜ್ಯದ ಮಠಾಧೀಶರು ಸಿಎಂ ಬೆನ್ನಿಗೆ ನಿಂತಿದ್ದು, ಇದೀಗ ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, 30ಕ್ಕೂ ಹೆಚ್ಚು ಸ್ವಾಮೀಜಿಗಳು ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬಾಲೇಹೊಸೂರಿನ ದಿಂಗಾಲೆಶ್ವರ ಶ್ರೀ ನೇತೃತ್ವದಲ್ಲಿ ಬೋವಿ ಮಠದ ಇಮ್ಮಡಿ ಸಿದ್ದೇಶ್ವರ ಸ್ವಾಮೀಜಿ, ಮಾದಾರ ಮಠದ ಬಸವಮೂರ್ತಿ ಸ್ವಾಮೀಜಿ, ಶಿವಯೋಗಾಶ್ರಮದ ಶರಣಬಸವ ಸ್ವಾಮೀಜಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಸ್ವಾಮೀಜಿಗಳು ಸೇರಿದಂತೆ ಹಲವು ಮಠಾಧೀಶರು ಸಿಎಂ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಜೊತೆ ಚರ್ಚೆ ನಡೆಸಿದ್ದಾರೆ.