ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ: ಬೆಂಕಿ ಇಲ್ಲದೆ ಹೊಗೆಯಾಡುತ್ತಾ?; ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಜೂ. 10: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ಪ್ರತಿಕ್ರಿಯಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ ಎಂದು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಮಾಡಬೇಕು ಎಂಬುದು ನಮ್ಮ ಬೇಡಿಕೆಯಲ್ಲ. ಅವರ ಪಕ್ಷದಲ್ಲೇ ನಡೆಯುತ್ತಿರುವ ಚರ್ಚೆ. ದೆಹಲಿ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ಮುಖ್ಯಮಂತ್ರಿ ಬದಲಾವಣೆ ಇಲ್ಲ ಅನ್ನುವುದಾದರೆ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ವಿಶ್ವನಾಥ್, ರೇಣುಕಾಚಾರ್ಯ ಹಾಗೂ ಸಚಿವ ಸಿ.ಪಿ. ಯೋಗೇಶ್ವರ ವಿರುದ್ಧ ಬಿಜೆಪಿ ಹೈ ಕಮಾಂಡ್  ಏತಕ್ಕೆ ಕ್ರಮ ಕೈಗೊಂಡಿಲ್ಲ ಪ್ರಶ್ನಿಸಿದ್ದಾರೆ.

ಬಿಜೆಪಿ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ಎರಡೂ ದುರ್ಬಲವಾಗಿದೆ. ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬೇಡಿ ಎಂದು ಅರುಣ್ ಸಿಂಗ್ ನಿರ್ದೇಶನ ನೀಡಿದ್ದಾರೆ. ಹಾಗಿದ್ದಲ್ಲಿ ಬದಲಾವಣೆ ಆಗಬೇಕು ಅಂದವರ  ವಿರುದ್ಧ ಏಕೆ ಕ್ರಮ ಏತಕ್ಕೆ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

Exit mobile version