ಲೋಕಸಭಾ ಚುನಾವಣೆ ಮೇಲೆ ಸಿಎಂ ಕಣ್ಣು: ರಾಜ್ಯ ಸರ್ಕಾರದ ಮುಂದಿರುವ ಸವಾಲುಗಳೇನು?

Bengaluru: ಇತ್ತೀಚಿಗಷ್ಟೇ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗಿದೆ. ನಾಳೆ (CM Eyes on Loksabha Election) ಮುಖ್ಯಮಂತ್ರಿ ಸಿದ್ದರಾಮಯ್ಯ

ದಾಖಲೆಯ 15ನೇ ಬಜೆಟ್ ಮಂಡಿಸುತ್ತಿದ್ದು 2024- 25 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇದೀಗ ಲೋಕಸಭೆ ಚುನಾವಣೆಯ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ

(Siddaramaiah) ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ ಶತಾಯಗತಾಯ ಅತ್ಯಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಪ್ರಮುಖ ಗುರಿ ಹೊಂದಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಜೆಟ್ ನಲ್ಲಿ

ಅತ್ಯಂತ ಮಹತ್ವದ ಘೋಷಣೆಗಳನ್ನು ಘೋಸಿಸುವ ಸಾಧ್ಯತೆ ಇದೇ ಎನ್ನಲಾಗಿದೆ. ಆದರೆ ಅದಕ್ಕೂ ಮುನ್ನ ಸರ್ಕಾರದ ಮುಂದೆ ಹಲವು ಸವಾಲುಗಳಿವೆ.

ಬರದ ಬರೆ- ಗ್ಯಾರಂಟಿ ಹೊರೆ
ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ದಾಟಿರಲಿಲ್ಲ. ಆದರೆ, ಈ ಬಾರಿ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ. ಇದರೊಂದಿಗೆ ಈ

ಬಾರಿ ಬಜೆಟ್​ ಗಾತ್ರ 3.80 ಲಕ್ಷ ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. ಪಂಚ ಗ್ಯಾರಂಟಿ (Guarantee) ಹೊರೆ ಹಾಗೂ ಬರದ ಬರೆ ಸರ್ಕಾರಕ್ಕೆ ಸವಾಲಾಗಿದೆ. ಪ್ರಸಕ್ತ ವರ್ಷದಲ್ಲಿ

ರಾಜಸ್ವ ಸಂಗ್ರಹ ನಿಗದಿತ ಗುರಿ ತಲುಪದೇ ಇರುವುದು ಗಾಯದ (CM Eyes on Loksabha Election) ಮೇಲೆ ಬರೆ ಎಳೆದಂತಾಗಿದೆ.

7ನೆ ವೇತನ ಆಯೋಗದ ವರದಿ ಜಾರಿಯಾಗುವ ಸಾಧ್ಯತೆ
ಹಳೆ ಮೈಸೂರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ (Kitturu Karnataka), ಕರಾವಳಿ ಕರ್ನಾಟಕ, ಮಧ್ಯಕರ್ನಾಟಕ ಹೀಗೆ ಪ್ರಾದೇಶಿಕವಾರು ನೀರಾವರಿ ಸೇರಿ ವಿವಿಧ

ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವ ನಿರೀಕ್ಷೆಯಿದೆ. ಇನ್ನು ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಜಾರಿಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸಮತೋಲನ ಕಾಯ್ದುಕೊಳ್ಳಲೇ ಬೇಕಿದೆ
2024-25 ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗಾಗಿ ಸಮಾರು 58,000 ಕೋಟಿ ರೂ. ಅನುದಾನ ಮೀಸಲಿಡುವ ಅನಿವಾರ್ಯತೆ ಇದೆ. ಹೀಗಾಗಿ ಗ್ಯಾರಂಟಿ ವೆಚ್ಚದ ಮಧ್ಯೆ ಅಭಿವೃದ್ಧಿಗೆ

ವೇಗ ಕೊಡುವ ಸಮತೋಲಿತ ಬಜೆಟ್ ಮಂಡಿಸಬೇಕಿದೆ. ಆದ್ರೂ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯದ ಜನತೆಗೆ ಒಂದಷ್ಟು ಬಂಪರ್ ಕೊಡುವೆ ಕೊಡುವ ನಿರೀಕ್ಷೆ

ಹೊಂದಲಾಗಿದೆ.

ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ ಸಿಎಂ ಸಿದ್ದರಾಮಯ್ಯ
ಟ್ವಿಟರ್​ನಲ್ಲಿ (Tweeter) ‘ನನ್ನ ತೆರಿಗೆ ನನ್ನ ಹಕ್ಕು’ ಅಭಿಯಾನ ನಡೆಸಿದ ಸಿಎಂ ಸಿದ್ದರಾಮಯ್ಯ, ಅಭಿಯಾನ ಕುರಿತು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ನಾವು ಪ್ರಜಾಪ್ರಭುತ್ವ,

ಒಕ್ಕೂಟ ವ್ಯವಸ್ಥೆ ಪರವಾಗಿರುವವರೆಂದು ಸಿಎಂ ಹೇಳಿದ್ದಾರೆ. ಮೋದಿ ಸರ್ಕಾರ ಕಾರ್ಪೊರೇಟ್ ಕಂಪನಿಗಳ ಮೇಲಿನ ತೆರಿಗೆ ಪ್ರಮಾಣ ಶೇ 22.5ಕ್ಕೆ ಇಳಿಸಿದ್ದಾರೆ .ಆದ್ರೆ ಜನಸಾಮಾನ್ಯರ

ಮೇಲೆ ತೆರಿಗೆ ಪ್ರಮಾಣ ಹೆಚ್ಚಳ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನು ಓದಿ: ಸೌತ್ ಈಸ್ಟರ್ನ್ ಕೋಲ್ಫೀಲ್ಡ್ನಲ್ಲಿ 1425 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Exit mobile version