Visit Channel

ರಾಜ್ಯದಲ್ಲಿರುವ `ಮಂಗಳಮುಖಿ ಸರ್ಕಾರ’ಕ್ಕೆ ಮುಕ್ತಿ ನೀಡಬೇಕಿದೆ : ಸಿ.ಎಂ.ಇಬ್ರಾಹಿಂ!

JDS

ಸದ್ಯ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮಂಗಳಮುಖಿ(Transgender) ಸರ್ಕಾರಕ್ಕೆ ರಾಜ್ಯರ ಜನರೇ ಮುಕ್ತಿ ನೀಡಬೇಕಿದೆ.

JDS

ಗಂಡಸರಾದರೇ ಬಡಿದಾಡಲು ಗಂಡಸರನ್ನ ಕಳುಹಿಸಬಹುದು, ಹೆಂಗಸರಾದರೆ ಬಡಿದಾಡಲು ಹೆಂಗಸರನ್ನ ಕಳುಹಿಸಬಹುದು. ಆದರೆ ಈಗಿರುವ ಸರ್ಕಾರ ಗಂಡು ಅಲ್ಲ, ಹೆಣ್ಣು ಅಲ್ಲ. ಹೀಗಾಗಿ ಈ ಸರ್ಕಾರದ ವಿರುದ್ದ ಬಡಿದಾಡಲು ಸಾಧ್ಯವಿಲ್ಲ. ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನರೇ ಈ ಮಂಗಳಮುಖಿ ಸರ್ಕಾರಕ್ಕೆ ಮುಕ್ತಿ ಕಾಣಿಸಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ(JDS President) ಸಿ.ಎಂ.ಇಬ್ರಾಹಿಂ(CM Ibrahim) ವ್ಯಂಗ್ಯವಾಡಿದರು.

ಬೆಂಗಳೂರಿನಲ್ಲಿ(Bengaluru) ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರಕ್ಕೆ ಮಾನಮರ್ಯಾದೆ ಇಲ್ಲ. 40% ಕಮಿಷನ್ ಹಗರಣ, ಪಿಎಸ್‍ಐ ನೇಮಕಾತಿ ಹಗರಣ ಸೇರಿದಂತೆ ಸಾಲು ಸಾಲು ಹಗರಣಗಳು ಹೊರಬಂದರು ಸರ್ಕಾರಕ್ಕೆ ನಾಚಿಕೆಯಾಗುತ್ತಿಲ್ಲ. ಆದರೆ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಜನತಾದಳ ಸರ್ಕಾರ ರಚನೆಯಾಗುವ ಸೂಚನೆ ಇದೆ. ಈಗಾಗಲೇ ‘ಜನತಾ ಜಲಧಾರೆ’ ಯಾತ್ರೆ ಮೂಲಕ ರಾಜ್ಯಾಧ್ಯಂತ ಪ್ರವಾಸ ಮಾಡಿದಾಗ ರಾಜ್ಯದಲ್ಲಿ ಜೆಡಿಎಸ್ ಪರವಾದ ಅಲೆಯಿರುವುದು ಸ್ಪಷ್ಟವಾಗಿದೆ.

JDS

ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ವಿಧಾನಪರಿಷತ್ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿ ಉದಾತ್ತ ಮನೋಭಾವವನ್ನು ಹೊಂದಿರಬೇಕು. ಹೀಗಾಗಿ ನಮ್ಮ ಪಕ್ಷದ ಇತರ ನಾಯಕರಿಗೆ ಟಿಕೆಟ್ ನೀಡಿದ್ದೇವೆ. ಮುಂದೆ ವಿಧಾನಸಭೆ ಚುನಾವಣೆ ಸೇರಿದಂತೆ ಅನೇಕ ಅವಕಾಶ ಸಿಗುತ್ತವೆ. ಆದರೆ ರಾಜ್ಯದಲ್ಲಿ ಜೆಡಿಎಸ್ ಸರ್ಕಾರವನ್ನು ರಚನೆ ಮಾಡುವುದು ನನ್ನ ಮುಖ್ಯ ಉದ್ದೇಶ.

ಇನ್ನು ನಾನು ಕಾಂಗ್ರೆಸ್ ಬಿಟ್ಟ ನಂತರ ವಿಧಾನಪರಿಷತ್‍ಗೆ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಾರೆ. ಈಗ ಕಾಂಗ್ರೆಸ್‍ಗೆ ನನ್ನ ಬೆಲೆ ಗೊತ್ತಾಗಿದೆ ಎಂದರು.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.