Bengaluru: ಕಳೆದ ಅನೇಕ ದಿನಗಳಿಂದ ಸ್ವಪಕ್ಷದ ವಿರುದ್ದವೇ ಟೀಕಾಪ್ರಹಾರ ನಡೆಸುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (C M Ibrahim) ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಿ ಜಾತ್ಯಾತೀತ ಜನತಾದಳದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.

ಕಳೆದ ಒಂದು ವಾರದಿಂದ ಜೆಡಿಎಸ್ ನಾಯಕ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (H D Kumaraswamy) ಮತ್ತು ಬಿಜೆಪಿಯೊಂದಿಗೆ ಮಾಡಿಕೊಂಡಿರುವ ಮೈತ್ರಿಯ ವಿಚಾರವಾಗಿ ಸ್ವಪಕ್ಷದ ವಿರುದ್ದ ಸಾರ್ವಜನಿಕವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಬೇಕೆಂಬ ಒತ್ತಾಯ ಕೇಳಿ ಬಂದ ಹಿನ್ನಲೆಯಲ್ಲಿ, ಬೆಂಗಳೂರಿನಲ್ಲಿ (Bengaluru) ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ
ಮೂಲಗಳ ಪ್ರಕಾರ, ಸಿಎಂ ಇಬ್ರಾಹಿಂ ಜಾಗಕ್ಕೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಆಯ್ಕೆ ಆಗುವ ಸಾಧ್ಯತೆಯಿದೆ.. ಜಾತ್ಯಾತೀತ ಜನತಾದಳದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು (H D Devegowda) ಉಚ್ಛಾಟನೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಯಿದೆ.

ಇಬ್ರಾಹಿಂ ಹೇಳಿಕೆಗಳನ್ನು ನಾನು ಪ್ರಸ್ತಾಪ ಮಾಡಲು ಹೋಗಲ್ಲ. ಕೆಲವು ಘಟಕಗಳ ಜೊತೆ ಚರ್ಚಿಸಿ ಒಂದು ನಿರ್ಣಯ ಮಾಡಿದ್ದೇವೆ. ಪಕ್ಷದ ನಿಯಮಾವಳಿ ಕೂಡ ಇದೆ. ನಾವು ಬಿಜೆಪಿ (BJP) ಜೊತೆ ಹೋಗುವ ಸನ್ನಿವೇಶ ಸೃಷ್ಟಿಸಿದ್ದು ಯಾರು ? ನಾವು ಭಾರತೀಯ ಜನತಾ ಪಕ್ಷದ ಸರ್ಕಾರದಲ್ಲಿ ಭಾಗಿಯಾಗಿಲ್ಲ.
ಲೋಕಸಭಾ ಚುನಾವಣೆ ಪೂರ್ವದಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ ಅಷ್ಟೇ. ಇದರಿಂದ ಜೆಡಿಎಸ್ (JDS) ಸಿದ್ಧಾಂತ ಅಥವಾ ನಾಯಕರಿಗೆ ಯಾವುದೇ ಸಮಸ್ಯೆಯಿಲ್ಲ. ಮುಸ್ಲಿಂ ನಾಯಕರನ್ನು ನಮ್ಮ ಪಕ್ಷದಲ್ಲಿ ಕಡೆಗಣನೆ ಮಾಡಿಲ್ಲ. ಪಕ್ಷ ಉಳಿಸಿಕೊಳ್ಳಬೇಕಾಗಿರುವುದರಿಂದ ಮೈತ್ರಿಮಾಡಿಕೊಂಡಿದ್ದೇವೆ ಎಂದರು.
2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಹಿನ್ನಲೆ, ಪಕ್ಷದ ನಿರ್ಧಾರದ ವಿರುದ್ದ ತೀವ್ರ ಅಸಮಾಧಾನಗೊಂಡಿರುವ ಸಿಎಂ ಇಬ್ರಾಹಿಂ ಜೆಡಿಎಸ್ ಗುಡ್ ಬೈ ಹೇಳಿ, ಕಾಂಗ್ರೆಸ್ (Congress) ಪಕ್ಷ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜೆಡಿಎಸ್ ಇಂದ ಅಧಿಕೃತವಾಗಿ ಉಚ್ಚಾಟನೆಯಾಗುವ ಸಿಎಂ ಇಬ್ರಾಹಿಂ ಮುಂದಿನ ನಡೆ ಏನಾಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.
ಮಹೇಶ್