ಜೆಡಿಎಸ್ ಸೇರುವುದು ಖಚಿತ – ಸಿ.ಎಂ. ಇಬ್ರಾಹಿಂ!

congress

ಕಾಂಗ್ರೆಸ್ ವಿರುದ್ದ ಬಂಡಾಯ ಎದ್ದಿದ್ದ ಅಲ್ಪಸಂಖ್ಯಾತರ ನಾಯಕ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಸೇರುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಾತನಾಡಿದ ಅವರು ಪಕ್ಷ ತೊರೆದು ಜೆಡಿಎಸ್ ಸೇರುವ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ನನ್ನ ದಾರಿ ಕಂಡುಕೊಂಡಿದ್ದೇನೆ ಮತ್ತು ಫೆಬ್ರವರಿ 13 ರಂದು ಹುಬ್ಬಳ್ಳಿಯಿಂದ ನನ್ನ ಹಿತೈಷಿಗಳ ಸಭೆಯೊಂದಿಗೆ ಉತ್ತರ ಕರ್ನಾಟಕ ಪ್ರವಾಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಬಂಡಾಯ ನಾಯಕ ಸಿಎಂ ಇಬ್ರಾಹಿಂ ಅವರು ಇತ್ತೀಚೆಗೆ ಪಕ್ಷದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಾ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಅವರು ಪಕ್ಷದಲ್ಲಿಯೇ ಉಳಿಯಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪರವಾಗಿ ಮಾಜಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಅವರು ಸೋಮವಾರ ಇಬ್ರಾಹಿಂ ಅವರ ನಿವಾಸಕ್ಕೆ ತೆರಳಿ ಮನವೊಲಿಸುವ ಕಾರ್ಯ ಮಾಡಿದ್ದಾರೆ. ಹಲವು ತಾಸಿನ ಸಭೆಯ ಬಳಿಕ ಇಬ್ರಾಹಿಂ ಮನಸ್ಸು ಬದಲಾಯಿಸಿದ್ದಾರೆ. ಫೆಬ್ರವರಿ 10 ರವರೆಗೆ ಅವರು ಸಮಯಾವಕಾಶ ಕೋರಿದ್ದಾರೆ ಎಂದು ಎಚ್.ಸಿ ಮಹಾದೇವಪ್ಪ ಹೇಳಿದ್ದಾರೆ. ಎಂದು ಹೇಳಲಾಗುತ್ತಿದೆ. ಕೆಲವು ದಿನಗಳ ಹಿಂದೆ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಿ.ಎಂ. ಇಬ್ರಾಹಿಂ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಟೀಮ್ ಒಟ್ಟಿಗೆ ಕೆಲಸ ಮಾಡಲು ಇದು ಸಹಾಯ ಆಗುತ್ತೆ

.

ನಮ್ಮ ಮೇಲೆ ಇದ್ದ ಭಾರವನ್ನ ಸೋನಿಯಾ ಗಾಂಧಿ ಕಡಿಮೆ ಮಾಡಿದ್ದಾರೆ. ಈಗ ನಿರ್ಧಾರ ತೆಗೆದುಕೊಳ್ಳಲು ನಾವು ಸ್ವತಂತ್ರವಾಗಿದ್ದೇವೆ. ಕಾಂಗ್ರೆಸ್ ಹಾಗೂ ನಮ್ಮ ಸಂಬಂಧ ಮುಗಿದ ಅಧ್ಯಾಯ ಎಂದು ತಿಳಿಸಿದ್ದರು. ಫೆ 14 ರಂದು ನಿರ್ಧಾರ. ಫೆ.14ರಂದು ಪ್ರೇಮಿಗಳ ದಿನ. ಅದೇ ದಿನ ನನ್ನ ಮುಂದಿನ ರಾಜಕೀಯ ಜೀವನದ ಬಗ್ಗೆ ನಿರ್ಧಾರ ಮಾಡುತ್ತೇನೆ. ಲವರ್ಸ್ ಡೇ ಅಂತ ಹೇಳಿ ಹೂವಿನ ಹಾರ ಹಾಕಿ ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಕಥೆ ಮುಗಿದ ಅಧ್ಯಾಯ ಮಂಚ, ಬೆಡ್, ದಿಂಬು ಯಾರಿಗೆ ಏನ್ ಬೇಕು ಅದನ್ನೆಲ್ಲಾ ತೆಗೆದುಕೊಂಡು ಹೊರ ಹೋಗುತ್ತಿದ್ದಾರೆ ಎಂದು ಹೇಳಿದರು.

Exit mobile version