ಬಜೆಟ್ ಮಂಡನೆ ಮುನ್ನವೇ ಜನರಿಗೆ ಮಹತ್ವದ ಸಂದೇಶ
ನಿಮ್ಮ ನಿರೀಕ್ಷೆಗಳ ಹುಸಿಗೊಳಿಸುವುದಿಲ್ಲವೆಂದ ಸಿಎಂ
ಅಭಿವೃದ್ಧಿಯ ಬಜೆಟ್ ಇದು ಎಂದ ಸಿಎಂ (CM made a promise to the people)
ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು
ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಇಂದು 16ನೇ ಬಜೆಟ್ ಮಂಡನೆಗೆ ಸಜ್ಜಾಗಿದ್ದಾರೆ. ಈ ಮೂಲಕ ಅತಿ ಹೆಚ್ಚು ಬಾರಿ ಬಜೆಟ್ ಮಂಡನೆ ಮಂಡಿಸಿರುವ ಸಿಎಂ ಎಂಬ ಖ್ಯಾತಿಗೂ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ಸದ್ಯ ಸಿದ್ದರಾಮಯ್ಯ ಅವರ ಆರೋಗ್ಯ ಸರಿಯಾಗಿಲ್ಲ. ನಡೆದಾಡಲು ಸಾಧ್ಯವಾಗದ ಅವರು ವೀಲ್ಚೇರ್ನಲ್ಲೇ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ.
ಇಂದಿನ ರಾಜ್ಯ ಬಜೆಟ್ (State budget) ಮೇಲೆ ಜನರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಹಿನ್ನೆಲೆ ಅವರು ಬಜೆಟ್ ಮಂಡನೆಗೂ ಮುನ್ನ ಅವರು ರಾಜ್ಯದ ಜನರಿಗೆ ಮಹತ್ವದ ಸಂದೇಶವನ್ನು ರವಾನಿಸಿದ್ದಾರೆ.
ನನ್ನ ರಾಜಕೀಯ ಜೀವನದ (Political life) 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ (Karnataka) ಸಮಸ್ತ ಜನತೆಗೆ ನಾನು ಕೃತಜ್ಞ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢ ಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ (For holistic development) ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದು ಹೇಳಿದ್ದಾರೆ

16ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಕಳೆದ ಬಾರಿ 3.71 ಲಕ್ಷ ಕೋಟಿ ರೂಪಾಯಿ ಲೆಕ್ಕಾಚಾರದ ಬಜೆಟ್ ಮಂಡಿಸಿದ್ದರು. ಇನ್ನು ಈ ಬಾರಿಯ ಬಜೆಟ್ 4 ಲಕ್ಷ ಕೋಟಿ ರೂಪಾಯಿಗೂ ಮೀರಲಿದೆ ಎಂದು ಹೇಳಲಾಗುತ್ತಿದೆ.
ಕಳೆದ ಬಜೆಟ್ಗಳಲ್ಲಿ ನೀರಾವರಿ, ಲೋಕೋಪಯೋಗಿ, ಮೂಲಸೌಕರ್ಯ, ನಗರಾಭಿವೃದ್ಧಿ ಸೇರಿದಂತೆ ಹಲವು ಇಲಾಖೆಗಳಿಗೆ ಕಡಿಮೆ ಅನುದಾನ ನೀಡಲಾಗಿತ್ತು. ಹಾಗಾಗಿ ಈ ಬಾರಿ ನಿರೀಕ್ಷೆಗಳು ಕೂಡ ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಗೆ ಹಣ ಸರಿದೂಗಿಸುವ ಸವಾಲಿನೊಂದಿಗೆ ಅವರು ಈ ಬಜೆಟ್ನಲ್ಲಿ ಕೆಲವೊಂದು ಪ್ರಮುಖ ಘೋಷಣೆಗಳನ್ನು ಮಾಡುತ್ತಾರಾ? ಇಲ್ಲವಾ? ಎನ್ನುವ ಗೊಂದಲವೂ ಇದೆ.
ಇದನ್ನು ಓದಿ: ಮಾರ್ಚ್ 3 ರಿಂದ ಬಜೆಟ್ ಅಧಿವೇಶನ ಅರಂಭ: ಚರ್ಚೆಗೆ ಕೇವಲ 15 ದಿನಗಳ ಕಾಲಾವಕಾಶ ನೀಡಿರುವ ಸರ್ಕಾರದ ವಿರುದ್ಧ ಮುಗಿಬೀಳಲು BJP ಸಜ್ಜು
ಆದರೆ ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತರು, ಶೋಷಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ (CM made a promise to the people) ನಡೆಸಿದ್ದಾರೆ.
ಪಕ್ಷಾತೀತವಾಗಿ ಸಮಾಜದ ಎಲ್ಲ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಈ ಬಜೆಟ್ ಮೂಲಕ ಮಾಡಿದ್ದೇನೆ ಎಂದು ಹೇಳಿದ್ದಾರೆ.