ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ, ಹೈಕಮಾಂಡ್​​​ನಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ

Karnataka: ಕಾಂಗ್ರೆಸ್ 136 ಸ್ಥಾನದಿಂದ ಬಹುಮತ ಸಾಧಿಸಿ ಗೆದ್ದು ಬೀಗಿದ್ದು ಸಿಎಂ ಆಯ್ಕೆ ಕಗ್ಗಂಟಾಗಿಯೇ ಮುಂದುವರೆದಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ (cm opportunity for siddaramaiah)

ಮತ್ತು ಡಿಕೆ ಶಿವಕುಮಾರ್ (D.K.Shivakumar) ನಡುವೆ ಪೈಪೋಟಿ ನಡೆಯುತ್ತಿದೆ. ಈ ಗೊಂದಲಕ್ಕೆ ಇಂದು ತೆರೆ ಬೀಳುವ ಸಾಧ್ಯತೆ ಹೆಚ್ಚಿದ್ದು ಕ್ಷಣ ಕ್ಷಣದ ಅಪ್​ಡೇಟ್ಸ್​ಗಳನ್ನು ಇಲ್ಲಿ ಪಡೆಯಿರಿ.

ಸಿದ್ದರಾಮಯ್ಯರಿಗೆ ರಾಜ್ಯದ ಸಿಎಂ ಸ್ಥಾನ, ಡಿಕೆ ಶಿವಕುಮಾರ್​ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ . ಡಿಕೆ ಶಿವಕುಮಾರ್ ಕೆಪಿಸಿಸಿ (KPCC) ಅಧ್ಯಕ್ಷರಾಗಿಯೂ

ಮುಂದುವರಿಯುವ ಜೊತೆಗೆ ಎರಡು ಪ್ರಮುಖ ಖಾತೆಗಳನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂಬ ಬಗ್ಗೆ ಈಗಾಗಲೇ ಮಾಹಿತಿ ಸಿಕ್ಕಿದೆ.ಡಿಕೆ ಶಿವಕುಮಾರ್ ಇಂಧನ ಮತ್ತು ನೀರಾವರಿ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ನಿವಾಸದ ಮುಂದೆ ಹೆಚ್ಚಿದ ಪೊಲೀಸ್ ಭದ್ರತೆ:
ಅಭಿಮಾನಿಗಳು ಸಿದ್ದರಾಮಯ್ಯ ನಿವಾಸದ ಬಳಿ ಬರುವ ಮುನ್ಸೂಚನೆ ಸಿಕ್ಕಿರುವುದರಿಂದ ಭದ್ರತೆ ಹೆಚ್ಚಿಸಲಾಗಿದೆ. 70 ಕ್ಕೂ ಹೆಚ್ಚು ಪೊಲೀಸರು ಮತ್ತು ಒಂದು ಕೆಎಸ್ಆರ್​ಪಿ ವ್ಯಾನ್ (KSRP Van),ನಿಯೋಜಿಸಲಾಗಿದೆ.

ಸಿದ್ದು ಸರ್ಕಾರಿ ನಿವಾಸ ಕುಮಾರಕೃಪಾ ಬಳಿ ಇದೆ, ಇಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ.

ಇದನ್ನು ಓದಿ: RTO ಖತರ್ನಾಕ್ ದಂಧೆ ! ಕದ್ದ ಅಥವಾ ಗುಜರಿ ಹಾಕಬೇಕಾದ ಗಾಡಿಗಳು ಹೊಸ ಮಾಡೆಲ್‌ ಆಗಿ ರಿಜಿಸ್ಟ್ರೇಷನ್‌

ಸಿದ್ದರಾಮಯ್ಯ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಬಹುತೇಕ ಪಕ್ಕಾ

ಸಿದ್ದರಾಮಯ್ಯ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಬಹುತೇಕ ಪಕ್ಕಾ ಆಗಿದೆ. ಅಧಿಕೃತ ಘೋಷಣೆ ಕಾಂಗ್ರೆಸ್ ಹೈಕಮಾಂಡ್​​​ನಿಂದ ಆಗಬೇಕಾಗಿದೆ. ರಾಹುಲ್ ಗಾಂಧಿಯವರನ್ನು (Rahul Gandhi) ಭೇಟಿ ಆದ ಬಳಿಕ

ಅಧಿಕೃತ ಘೋಷಣೆ ಸಾಧ್ಯತೆ. ರಾಹುಲ್ ಗಾಂಧಿಯವರು ಸಿದ್ದರಾಮಯ್ಯ,ಮತ್ತು ಡಿಕೆಶಿ ಜತೆ ಸ್ವಲ್ಪ ಹೊತ್ತು ಮಾತುಕತೆ ನಡೆಸಿ ಚರ್ಚೆ ಬಳಿಕ ಘೋಷಣೆ ಮಾಡುವ ಸಾಧ್ಯತೆ ಇದೆ.

ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್​​ನಿಂದ ಎಚ್ಚರಿಕೆ ಸಂದೇಶ

BJP ನಾಯಕರು ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸುವ ಎಲ್ಲಾ ಸಾಧ್ಯತೆ ಇದೆಯಂದು ಸಿದ್ದರಾಮಯ್ಯ ಸುರ್ಜೇವಾ (Surjewala) ಜತೆ ಚರ್ಚೆ ನಡೆಸಿದ್ದಾರೆ.ಬೀದರ್​​ನಿಂದ ಚಾಮರಾಜನಗರವರೆಗೂ ಶಾಸಕರ ಬಗ್ಗೆ

ಸುರ್ಜೇವಾಲ ಮಾಹಿತಿ ಕಲೆ ಹಾಕಿದ್ದಾರೆ.ನಾವು ಮೈಮರೆತರೆ ಯಾವುದೇ ಸಮಸ್ಯೆ ಎದುರಾಗಬಹುದು,ಈಗಾಗಲೇ ಅನೇಕ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸಂಪರ್ಕಿಸಿರುವ ಮಾಹಿತಿ ಸಿಕ್ಕಿದೆ ಎಂದು ಕಾಂಗ್ರೆಸ್

ಉಸ್ತುವಾರಿ ರಣದೀಪ್ ಸುರ್ಜೇವಾಲ ಸಿದ್ದರಾಮಯ್ಯ, ಮತ್ತು ಡಿಕೆಶಿಗೆ (cm opportunity for siddaramaiah) ಎಚ್ಚರಿಕೆ ನೀಡಿದ್ದಾರೆ.

ಮೇ18ರ ಮಧ್ಯಾಹ್ನ 3.30 ಕ್ಕೆ ಪ್ರಮಾಣ ವಚನ

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಈಗಾಗಲೇ ತಯಾರಿ ನಡೆಯುತ್ತಿದೆ.ಒಂದು ವೇಳೆ ನಾಳೆ ತಪ್ಪಿದರೆ ಶನಿವಾರ ಕಾರ್ಯಕ್ರಮ ನಿಗದಿ ಮಾಡುವ ಬಗ್ಗೆ ಕಾಂಗ್ರೆಸ್ (Congress) ನಲ್ಲಿ ಈಗಾಗಲೇ ಚರ್ಚೆಗಳಾಗುತ್ತಿವೆ.

ಶುಕ್ರವಾರದಂದು ಅಮಾವಾಸ್ಯೆ ಇದೆ ಆದ್ದರಿಂದ ಈ ಹಿನ್ನಲೆ ಪ್ರಮಾಣ ವಚನ ಬೇಡ ಎಂದು ಕೆಲವರು ಸಲಹೆ ನೀಡುತ್ತಿದ್ದಾರೆ,ನಾಯಕರಿಂದ ಈಗಾಗಲೇ ತಯಾರಿ ಬಗ್ಗೆ ಸೂಚನೆ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.

ರಶ್ಮಿತಾ ಅನೀಶ್

Exit mobile version