Bangalore : ರವಿಯವರ (C T Ravi) ಮಾತಿನಿಂದ ನೊಂದು ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರು ದೂರು ದಾಖಲಿಸಿದ್ದಾರೆ. ಇದು ಲೈಂಗಿಕ ದೌರ್ಜನ್ಯದಂತಹ ಪ್ರಕರಣವಾಗಿರುವುದರಿಂದ (Case of sexual assault) ಪೊಲೀಸರು ಕ್ರಿಮಿನಲ್ ಪ್ರೊಸಿಜರ್ ರೀತ್ಯಾ ಕ್ರಮ (Rules of Criminal Procedure) ವಹಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಹೇಳಿದ್ದಾರೆ.

ಬಿಜೆಪಿ (BJP) ನಾಯಕ ಸಿಟಿ ರವಿ (CT Ravi) ಬಂಧನದ ಕುರಿತು ಪ್ರತಿಕ್ರಿಯಿಸಿರುವ ಅವರು, ವಿಧಾನ ಪರಿಷತ್ ಸದಸ್ಯ ಸಿಟಿ ರವಿ (Vidhan Parishad Member C T Ravi ) ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ ಅಪರಾಧವಾಗಿದೆ. ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರು ಸಭಾಪತಿಗಳಿಗೆ ಮತ್ತು ಪೊಲೀಸರಿಗೆ ದೂರು ನೀಡಿದ್ದಾರೆ. ಕಾನೂನಾತ್ಮಕವಾಗಿ ಏನು ಕ್ರಮ ಕೈಗೊಳ್ಳುತ್ತಾರೆ ನೋಡೋಣ. ಸಿ.ಟಿ.ರವಿಯವರು ಹತ್ತಕ್ಕೂ ಹೆಚ್ಚು ಬಾರಿ ಅತ್ಯಂತ ಕೀಳು ಪದದಿಂದ ನಿಂದನೆ ಮಾಡಿದ್ದಾರೆ ಎಂದು ಅಲ್ಲಿ ಸುತ್ತಲೂ ಇದ್ದ ನಮ್ಮ ಪರಿಷತ್ ಸದಸ್ಯರು ಹೇಳುತ್ತಿದ್ದಾರೆ. ರವಿಯವರ (Ravi’s) ಮಾತಿನಿಂದ ನೊಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರು ದೂರು ದಾಖಲಿಸಿದ್ದಾರೆ. ಇದು ಲೈಂಗಿಕ ದೌರ್ಜನ್ಯದಂತಹ ಪ್ರಕರಣವಾಗಿರುವುದರಿಂದ (Case of sexual assault) ಪೊಲೀಸರು ಕ್ರಿಮಿನಲ್ ಪ್ರೊಸಿಜರ್ ರೀತ್ಯಾ ಕ್ರಮ ವಹಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಇನ್ನು ಸಿಟಿ ರವಿ ಅವರ ಮೇಲೆ ನಡೆದ ಹಲ್ಲೆಯ ಕುರಿತು ಡಿಸಿಎಂ ಡಿಕೆ ಶಿವಕುಮಾರ್ (DCM DK Sivakumar) ನೀಡಿರುವ ಹೇಳಿಕೆಯನ್ನು ಖಂಡಿಸಿರುವ ವಿಪಕ್ಷ ನಾಯಕ ಆರ್. ಅಶೋಕ (R. Ashoka) ಅವರು, ಡಿಸಿಎಂ ಶಿವಕುಮಾರ್ ಅವರೇ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲಿ ಸಿ.ಟಿ.ರವಿ ಅವರನ್ನ ಬಿಟ್ಟಿದ್ದೇ ಪುಣ್ಯ ಅಂದರೆ ತಮ್ಮ ಮಾತಿನ ಅರ್ಥವೇನು? ಜೀವಂತವಾಗಿ ಬಿಟ್ಟಿದ್ದೇ ಪುಣ್ಯ ಅಂತಲಾ? ಇನ್ನೂ ಪ್ರಾಣ ತೆಗೆಯದೆ ಉಳಿಸಿರುವುದೇ ಪುಣ್ಯ ಆಂತಲಾ?ಅಥವಾ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರ ತಾಲಿಬಾನಿಗೆ ಸೇರಿದ್ದು ಅಂತಲಾ? ಅಥವಾ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ತಾಲಿಬಾನಿಗಳು ಅಂತಲಾ? ಕಾನೂನು ಕೈಗೆತ್ತುವ ರೌಡಿಗಳಿಗೆ, ಗೂಂಡಾಗಳಿಗೆ ನಿಮ್ಮ ಮಾತಿನಿಂದ ಏನು ಸಂದೇಶ ಹೋಗುತ್ತದೆ ಎನ್ನುವ ಪ್ರಜ್ಞೆ ತಮಗಿದೆಯೇ? ತಾವೊಂದು ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರು. ರಾಜ್ಯದ ಉಪಮುಖ್ಯಮಂತ್ರಿಗಳು. ಮುಂದೊಂದು ದಿನ ಮುಖ್ಯಮಂತ್ರಿ ಆಗಬೇಕು ಎಂದು ಕನಸು ಕಾಣುತ್ತಿರುವವರು. ತಮ್ಮಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡಬಾರದು. ತಾವು ಮುಖ್ಯಮಂತ್ರಿ (Chief Minister) ಆದರೆ ರಾಜ್ಯದ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಏನಾಗುತ್ತೆ ಅಂತ ತಮ್ಮ ಮಾತುಗಳೇ ಸೂಚನೆ ಕೊಡುತ್ತಿವೆ. ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎನ್ನುವುದನ್ನ ಮರೆಯಬೇಡಿ. ತಮ್ಮ ಸ್ಥಾನಕ್ಕೆ ತಕ್ಕಂತೆ ನಡೆದುಕೊಳ್ಳಿ. ಕನಿಷ್ಠ ಪಕ್ಷ ಸಾರ್ವಜನಿಕವಾಗಿ ಮಾತನಾಡುವಾಗಲಾದರೂ ತಮ್ಮ ಸ್ಥಾನಕ್ಕೆ ತಕ್ಕಂತೆ ಮಾತನಾಡಿ ಎಂದು ವಾಗ್ದಾಳಿ ನಡೆಸಿದ್ದಾರೆ.