Bengaluru: ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) 5 ಲಕ್ಷ ರೂಪಾಯಿಗಳ ಬಹುಮಾನವನ್ನು ಘೋಷಿಸಿದ್ದಾರೆ.
![Siddaramaiah SSLC](https://sp-ao.shortpixel.ai/client/to_webp,q_glossy,ret_img,w_384,h_216/https://vijayatimes.com/wp-content/uploads/2024/05/siddaramaiah-2-1715737512.jpg)
ಈ ಕುರಿತು ಟ್ವೀಟ್ ಮಾಡಿರುವ ಅವರು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂ ಕ್ ಪಡೆದ ಬಾಗಲಕೋಟೆ (Bagalakote) ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ (Ankita) ಹಾಗೂ ದ್ವಿತೀಯ ರ್ಯಾಂ ಕ್ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ (Navneet K C) ಅವರನ್ನು ಇಂದು ಸನ್ಮಾನಿಸಿ, ಈ ಇಬ್ಬರು ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಶುಭ ಕೋರಿದ್ದೇನೆ. ಅಮೋಘ ಸಾಧನೆ ಮಾಡಿದ ಈ ವಿದ್ಯಾರ್ಥಿಗಳ ಮುಂದಿನ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ನೀಡುತ್ತಿದ್ದೇನೆ.
ಗ್ರಾಮೀಣ ಮಕ್ಕಳು ಇನ್ನಷ್ಟು ಶೈಕ್ಷಣಿಕ ಸಾಧನೆಗಳನ್ನು ಮಾಡುವಂತಾಗಲಿ, ಈ ಮಕ್ಕಳು ಓದಿದ ಶಾಲೆ ಮತ್ತಷ್ಟು ಸರ್ಕಾರಿ ಶಾಲೆಗಳಿಗೆ ಸ್ಪೂರ್ತಿಯಾಗಲಿ ಎಂದು ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೊರಾರ್ಜಿ ದೇಸಾಯಿ ಶಾಲೆ ನನ್ನ ಕಲ್ಪನೆ :
ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆಯಾಗಿದೆ. 1994ರಲ್ಲಿ ನಾನು ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು. ಇದೇ ಶಾಲೆಗಳು ಇಂದು ಗ್ರಾಮೀಣ ಪ್ರದೇಶದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.