Haveri: ಎಲ್ಲರ ಗಮನ ಸೆಳೆದಿದ್ದ ಮೂಡಾ ಪ್ರಕರಣದಿಂದಾಗಿ (Muda case) ಮುಖ್ಯಮಂತ್ರಿ ಸಿದ್ದರಾಮಯ್ಯ (C M Siddaramaiah) ಅವರು ಲೋಕಾಯುಕ್ತರ ತನಿಖೆಗೆ (Lokayukta to investigate) ಒಳಗಾದರು.ಮುಂದಿನ ದಿನಗಳಲ್ಲಿ ಇಡಿ ಅಧೀಕಾರಿಗಳ (ED officials) ತನಿಖೆಗೂ ಕೂಡ ಉತ್ತರ ನೀಡಬೇಕಾಗುತ್ತದೆ.ಹಾಗಾಗಿ ಅವರು ಇನ್ನು ಬಹಳಷ್ಟು ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ, ಹೀಗಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ (Congress) ಹೈಕಮಾಂಡ್ (High Command) ಮುಹೂರ್ತ ಫಿಕ್ಸ್ ಮಾಡಿದೆ. ಇದನ್ನು ನಾನು ಹುಡುಗಾಟಕ್ಕೆ ಹೇಳುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BJP State President B.Y. Vijayendra) ಹೇಳಿದ್ದಾರೆ.
ಇನ್ನು ಈ ಕುರಿತಾಗಿ ಬಂಕಾಪುರದಲ್ಲಿ (Bankapur) ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್ಸಿಗರೇ (Congressmen) ಪಟ್ಟು ಹಿಡಿದಿದ್ದಾರೆ. ಅಧಿಕಾರದಿಂದ ಇಳಿಸುವ ಸಂಬಂಧ ಹೈಕಮಾಂಡ್ನಲ್ಲಿ (High Command) ಚರ್ಚೆ ಆಗಿದ್ದು ನಮ್ಮ ಕಿವಿಗೆ ಬಿದ್ದಿದೆ. ಸಿದ್ದರಾಮಯ್ಯ (Siddaramaiah) ಅವರು ಅಧಿಕಾರದಿಂದ ಕೆಳಗಿಳಿಯೋದು ಖಚಿತ. ಬೇಕಿದ್ದರೆ ಮುಖ್ಯಮಂತ್ರಿ ಆಗಿ ಐದು ವರ್ಷ (5 years) ಅವಧಿ ಪೂರ್ಣ ಮಾಡುತ್ತೇನೆಂದು ಸಿದ್ದರಾಮಯ್ಯ ಅವರು ಹೇಳಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಮುಡಾ (Muda Case) ಹಗರಣದಲ್ಲಿ ಸಿದ್ದರಾಮಯ್ಯ ಅವರು ಆರೋಪಿ ನಂಬರ್ ಒನ್ (Accused number 1) . ಚುನಾವಣೆ (Election) ಸಂದರ್ಭದಲ್ಲಿ ಮುಖ್ಯಮಂತ್ರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ (Lokayukta) ಪೊಲೀಸರು ನೋಟಿಸ್ ಕೊಟ್ಟಿದ್ದಾರೆ. ಮುಖ್ಯಮಂತ್ರಿ ವಿಚಾರಣೆಗೆ ಹೋಗಿಯೂ ಬಂದಿದ್ದಾರೆ. ಲೋಕಾಯುಕ್ತ ಪೊಲೀಸರಿಗೆ ಮುಖ್ಯಮಂತ್ರಿಯ ಭಯ ಕಾಡುತ್ತಿದೆ. ಎಷ್ಟು ಬೇಗ ಅವರಿಗೆ ರಿಲೀಫ್ ಕೊಡಬೇಕು, ಬಿ ರಿಪೋರ್ಟ್ (B Report) ಹಾಕಬೇಕು ಎಂಬ ನಿಟ್ಟಿನಲ್ಲಿ ಲೋಕಾಯುಕ್ತ ತನಿಖೆ ಸಾಗುತ್ತಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಲೋಕಾಯುಕ್ತದವರು (Lokayukta) ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.ಅವರಿಗೆ ಆತಂಕ ಕಾಡುತ್ತಿದೆ, ಅವರ ಗೌರವ ಬಟಾಬಯಲಾಗಿದೆ. ಪ್ರಾಮಾಣಿಕರು ಎಂದು ಬಿಂಬಿಸಿಕೊಳ್ಳುತ್ತಿದ್ದ ಅವರು ಈಗ ವಿಚಲಿತರಾದಂತೆ ನಡೆದುಕೊಳ್ಳುತ್ತಿದ್ದಾರೆ. ಎಷ್ಟು ಬೇಗ ಕ್ಲೀನ್ ಚಿಟ್ ಸಿಗುತ್ತೆ ಅಂತ ಕಾಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.