Bengaluru: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ದೆಹಲಿಗೆ ತೆರಳಿ ಕಾಂಗ್ರೆಸ್ (Congress) ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಕೂಡ ಇಂದು ದೆಹಲಿಗೆ ಪ್ರಯಾಣ ಬೆಳೆಸಿ ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲಿದ್ದು ಈ ವೇಳೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ (KC Venu Gopal) ಅವರನ್ನು ಡಿ.ಕೆ.ಶಿವಕುಮಾರ್ ಅವರ ಜೊತೆಗೂಡಿ ಭೇಟಿಯಾಗಿ ಸಚಿವ ಸಂಪುಟ ಪುನಾರಚನೆ ಹಾಗೂ ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸಿಡಬ್ಲ್ಯುಸಿ ಸಭೆಯ (CWC meeting) ಬೆನ್ನಲ್ಲೇ ಸಿದ್ದರಾಮಯ್ಯ ಅವರು ಹೈಕಮಾಂಡ್ (High Comand) ಜೊತೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ನಾಲ್ವರು ಎಂಎಲ್ಸಿಗಳ (MLC) ನಾಮ ನಿರ್ದೇಶನ ಮತ್ತು ಸಂಪುಟ ಪುನಾರಚನೆ (Volume restructuring) ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಎಂಎಲ್ಸಿ (MLC) ಹುದ್ದೆಗಳಿಗೆ ಅಭ್ಯರ್ಥಿಗಳ ಹೆಸರನ್ನು ಈಗಾಗಲೇ ಅಂತಿಮಗೊಳಿಸಲಾಗಿದ್ದು, ಕಾಂಗ್ರೆಸ್ (Congress) ವರಿಷ್ಠರ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಕೆಪಿಸಿಸಿ ಅಧ್ಯಕ್ಷರ ವಿಷಯದಲ್ಲಿ ಸಿದ್ದರಾಮಯ್ಯ (Siddaramaiah) ಅವರ ಬಹುಕಾಲದ ಆಪ್ತ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಅವರು ಮುಂಚೂಣಿಯಲ್ಲಿದ್ದಾರೆ.ಹಾವೇರಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Former CM Basavaraja Bommai) ಅವರ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಪಕ್ಷದ ಅಭ್ಯರ್ಥಿ ಯಾಸೀರ್ ಅಹಮದ್ ಖಾನ್ ಪಠಾಣ್ ಗೆಲುವಿನಲ್ಲಿ ಸತೀಶ್ (Sathish) ಪ್ರಮುಖ ಪಾತ್ರ ವಹಿಸಿದ್ದರು.ಹಾಗಾಗಿ ಈ ಎರಡೂ ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ (High Command leaders) ಜತೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.ಇದಲ್ಲದೆ, ಸಚಿವ ಸಂಪುಟ ಪುನಾರಚನೆಯ ವಿಷಯವೂ ಚರ್ಚೆಯ ಸಂದರ್ಭದಲ್ಲಿ ಪ್ರಸ್ತಾಪವಾಗಬಹುದು ಎಂದು ಮೂಲಗಳು ತಿಳಿಸಿವೆ. ನವದೆಹಲಿ ಪ್ರವಾಸದ ವೇಳೆ ಸಿಎಂ ಸಿದ್ದರಾಮಯ್ಯ (CM Siddaramaiah) ಹಲವು ಕೇಂದ್ರ ಸಚಿವರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ.