ಲೋಕಸಭೆ ಚುನಾವಣೆ ಗೆದ್ದರೆ ಸಿದ್ದರಾಮಯ್ಯ ಅವರು 5ವರ್ಷ ಸಿಎಂ ಆಗಿರುತ್ತಾರೆ: ಡಾ.ಯತೀಂದ್ರ

Hassan: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಂದಿನ (CM Siddaramaiah 5years Guarantee) ಐದು ವರ್ಷಗಳ ಕಾಲ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಯಾವುದೇ ಅಡೆತಡೆ ಇಲ್ಲದೆ

5 ವರ್ಷ ಸಿಎಂ ಆಗಿರುತ್ತಾರೆ ಎಂದು ಡಾ.ಯತೀಂದ್ರ (CM Siddaramaiah 5years Guarantee) ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈಗಿರುವ 5 ಗ್ಯಾರಂಟಿ ಸ್ಕೀಮ್​ಗಳನ್ನು (Guarantee Scheme) ಮುಂದುವರಿಸಿ ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆ-ತಡೆ ಇಲ್ಲದೇ ಮುಂದುವರಿಯಲು ಸಾಧ್ಯವಾಗುತ್ತದೆ. ಅದಕ್ಕೆ ನಿಮ್ಮ

ಬೆಂಬಲ ಮತ್ತು ಆಶೀರ್ವಾದ ಇರಲಿ ಎಂದು ಡಾ.ಯತೀಂದ್ರ ಅವರು ಮನವಿ ಮಾಡಿಕೊಂಡಿದ್ದಾರೆ.

ಹಾಸನದಲ್ಲಿ(Hassan) ಮಂಗಳವಾರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯರವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ.

ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೆ ಐದು ವರ್ಷ ಸಿಎಂ ಆಗಿರುತ್ತಾರೆ. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಸಿಧ್ದರಾಮಯ್ಯ ಅವರು ಐದು ಗ್ಯಾರಂಟಿ ಜಾರಿ ಮಾಡಿದ್ದಾರೆ.

ಮತ್ತೊಮ್ಮೆ ನುಡಿದಂತೆ ನಡೆಯುವುದಾಗಿ ಸಾಬೀತು ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತದೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 56 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದದು, ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು. ಅವರು ಮುಖ್ಯಮಂತ್ರಿಯಾಗಿ ಯಾವುದೇ

ಅಡೆತಡೆ ಇಲ್ಲದೆ ಮುಂದುವರೆಯಲು ಸಾಧ್ಯವಾಗುತ್ತದೆ. ಹಾಗಾಗಿ ನಿಮ್ಮ ಬೆಂಬಲ ಆಶೀರ್ವಾದ ಅವರ ಮೇಲೆ ಇರಲಿ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ (Dr. Yathindra Siddaramaiah)

ಹೇಳಿದ್ದಾರೆ. ಈ ನಡುವೆ ಮುಂದಿನ ಪ್ರದಾನಿ ಸಿದ್ದರಾಮಯ್ಯ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ನೀವು ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದರಿಂದ ಅವರು ಎರಡನೇ ಬಾರಿ ಸಿಎಂ ಆದರು ಎಂದರು.

ಯತೀಂದ್ರ ಅವರ ಈ ಹೇಳಿಕೆ ಕಾಂಗ್ರೆಸ್ (Congress) ಪಕ್ಷದ ಆಂತರಿಕ ವಲಯದಲ್ಲಿ ಅಪಸ್ವರಕ್ಕೆ ಕಾರಣವಾಗುವ ಎಲ್ಲ ಸಾಧ್ಯೆತಗಳೂ ಇವೆ. ಕಾಂಗ್ರೆಸ್ ಸರ್ಕಾರ ರಚನೆಯಾದ ಸಂದರ್ಭದಲ್ಲಿ

ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಸ್ಥಾನ ಬದಲಾಗಲಿದೆ ಎಂಬ ಊಹಾಪೋಹಗಳು ಹರಡಿದ್ದವು.

ಈ ಕುರಿತು ಕಾಂಗ್ರೆಸ್ ಹೈಕಮಾಂಡ್ (High Command) ಅಧಿಕೃತ ಹೇಳಿಕೆ ನೀಡಿರಲಿಲ್ಲ. ಹಾಗೆಂದು ಮುಂದಿನ ಸಿಎಂ ಡಿಕೆ ಶಿವಕುಮಾರ್ ಆಗಲಿದ್ದಾರೆ ಎಂದು ಅವರ ಬಣದ ನಾಯಕರು ಕೆಲವು

ಬಾರಿ ಹೇಳಿಕೆ ನೀಡಿದ್ದರು.

ಆದರೆ, ಸಿಎಂ ಬದಲಾವಣೆ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡಬಾರದೆಂಬ ಹೈಕಮಾಂಡ್ ಆಣತಿಯ ನಂತರ ಆ ಬಗ್ಗೆ ಮಾತನಾಡಿರಲಿಲ್ಲ. ಅತ್ತ ಸಿದ್ದರಾಮಯ್ಯ ಬಣದ ಕೆಲವು ನಾಯಕರು ಐದು

ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ಕೆಲವು ಬಾರಿ ಹೇಳಿಕೆ ನೀಡಿದ್ದು, ಡಿಕೆ ಶಿವಕುಮಾರ್ (D K Shivakumar) ಬಣದ ತೀವ್ರ ಆಕ್ಷೇಪಕ್ಕೆ ಗುರಿಯಾಗಿತ್ತು.

Exit mobile version