New Delhi : ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Prime Minister Narendra) ಅವರನ್ನು ಭೇಟಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರು 5 ಪ್ರಮುಖ ಬೇಡಿಕೆಗಳನ್ನು ಅವರ ಮುಂದಿಟ್ಟಿದ್ದಾರೆ.
ಪ್ರಧಾನಿ ಮುಂದಿಟ್ಟ ಐದು ಬೇಡಿಕೆಗಳು ಹೀಗಿವೆ :
- ಅಲ್ಪಾವಧಿ ಬೆಳೆ (Short term crop) ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೆ ಒದಗಿಸಿರುವ ನಬಾರ್ಡ್ ನೆರವು ಕಡಿತಗೊಳಿಸಿರುವುದರಿಂದ ರಾಜ್ಯದ ರೈತಾಪಿ ವರ್ಗ ಸಂಕಷ್ಟಕ್ಕೆ ಈ ಡಾಗಿದೆ. 2023-24ರ ಸಾಲಿನಲ್ಲಿ ರೂ.5600 ಕೋಟಿಗಳನ್ನು ಮಂಜೂರು ಮಾಡಲಾಗಿತ್ತು. 2024 -25ರ ಸಾಲಿನಲ್ಲಿ ರೂ. 2,340 ಕೋಟಿಗಳನ್ನು ಮಂಜೂರು (Granted) ಮಾಡಲಾಗಿದೆ. ಇದರಿಂದಾಗಿ ನಬಾರ್ಡ್ ನೆರವು ಪ್ರಸಕ್ತ ಸಾಲಿನಲ್ಲಿ ಶೇ.58 ರಷ್ಟು ಕಡಿತವಾಗಿದೆ. ರಾಜ್ಯವು ಹೆಚ್ಚುವರಿ (State surplus) ಬಡ್ಡಿ ಸಹಾಯಧನವನ್ನು ನೀಡದ ಹೊರತು, ಇದು ರಾಜ್ಯದ ರೈತಾಪಿ ವರ್ಗದ (Farmer class of the state) ಆರ್ಥಿಕ ವೆಚ್ಚದ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೆ, ರಾಜ್ಯದ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಈ ಕೂಡಲೇ ಇದನ್ನು ಪರಾಮರ್ಶಿಸಿ ನಬಾರ್ಡ್ ನೆರವು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ರಾಜ್ಯದ ರೈತರು ಅಲ್ಪಾವಧಿ ಬೆಳೆ ಸಾಲಗಳನ್ನು ಪಡೆಯಲು ಯಾವುದೇ ರೀತಿಯ ತೊಂದರೆಯಾಗದಂತೆ ತಾವು ಹಣಕಾಸು ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡಬೇಕು.
2. ಈ ಮೊದಲೇ ತಮ್ಮಲ್ಲಿ ಮನವಿ ಮಾಡಿರುವಂತೆ, ಭದ್ರಾ ಮೇಲ್ದಂಡೆ (Upper bank of Bhadra) ಯೋಜನೆಗೆ ಸಂಬಂಧಿಸಿದಂತೆ 2023-24 ರ ಕೇಂದ್ರ ಬಜೆಟ್ ನಲ್ಲಿ ಅನುಮೋದನೆಯಾಗಿರುವ ರೂ. 5300 ಕೋಟಿ ಅನುದಾನ ಬಿಡುಗಡೆ ಮಾಡುವ ಕೇಂದ್ರ ಹಣಕಾಸು ಸಚಿವರ ಭರವಸೆ (Minister’s promise) ಈವರೆಗೆ ಈಡೇರಿಲ್ಲ. ತ್ವರಿತ ನೀರಾವರಿ ಲಾಭ ಕಾರ್ಯಕ್ರಮದಡಿ ನೆರವು ಒದಗಿಸಲು ಸಚಿವ ಸಂಪುಟದ ಟಿಪ್ಪಣಿಯನ್ನು ಸಿದ್ಧಮಾಡಿರುವ ಬಗ್ಗೆ ತಿಳಿದುಬಂದಿದೆ. ಪ್ರಸಕ್ತ ಯೋಜನೆ (Current plan) ಶೀಘ್ರ ಅನುಮೋದನೆಗೊಂಡಲ್ಲಿ ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಒಳಪಡುವ ಮಧ್ಯ ಕರ್ನಾಟಕದ ಕೃಷಿ ಭೂಮಿಗೆ (Agricultural land in Karnataka) ನೀರಾವರಿ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ. ಆದ್ದರಿಂದ ಈ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡಬೇಕು.
3.ಶುಷ್ಕ ವಲಯಕ್ಕೆ ಸೇರಿದ ಕರ್ನಾಟಕದಂತಹ ರಾಜ್ಯದಲ್ಲಿ ನೀರಾವರಿ ಸೌಲಭ್ಯ ಸಾಮರ್ಥ್ಯಗಳನ್ನು (Facility capabilities) ಸಬಲಗೊಳಿಸುವುದು ಅತ್ಯಗತ್ಯವಾಗಿದೆ. ಈ ಕಾರ್ಯವನ್ನು ಬಹುತೇಕ ರಾಜ್ಯವು ತನ್ನ ಸಂಪನ್ಮೂಲಗಳಿಂದಲೇ ಭರಿಸುತ್ತಿದೆ. ಆದರೆ, ಜಲ ಶಕ್ತಿ ಸಚಿವಾಲಯ ಹಾಗೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಗಳಲ್ಲಿ ಯೋಜನೆಗಳ (Projects in Ministries) ತೀರುವಳಿ ಬಾಕಿ ಇರುವುದು ನಮ್ಮ ಯೋಜನೆಗಳನ್ನು ವಿಳಂಬ ಮಾಡಿದೆ. ಕಾವೇರಿ ನದಿ ಪಾತ್ರದ ಮೇಕೇದಾಟು ಯೋಜನೆ ಹಾಗೂ ಮಹದಾಯಿ ನದಿಯ ಕಳಸಾಬಂಡೂರಿ ಯೋಜನೆಗಳಗತ್ತ ತಾವು ತುರ್ತು ಗಮನ ಹರಿಸಬೇಕಿದೆ ಜಲಶಕ್ತಿ (Water power needs to be drained) ಹಾಗೂ ಅರಣ್ಯ, ಪರಿಸರ ಸಚಿವಾಲಯಗಳಿಂದ ಶೀಘ್ರ ತೀರುವಳಿ ದೊರಕಿಸಿಕೊಡಬೇಕು.
4. ಕರ್ನಾಟಕ ಅತ್ಯಂತ ವೇಗವಾಗಿ ನಗರೀಕರಣಗೊಳ್ಳುತ್ತಿರುವ ರಾಜ್ಯವಾಗಿದ್ದು,(Karnataka is the fastest urbanizing state) 13 ಮಹಾನಗರ ಪಾಲಿಕೆಗಳಿದ್ದು, ಈ ಎರಡನೇ ಸ್ತರದ ನಗರಗಳ ಅಭಿವೃದ್ಧಿಗೆ ಹೆಚ್ಚಿನ ಬಂಡವಾಳ ಅಗತ್ಯವಿದೆ. ಕರ್ನಾಟಕ ರಾಜ್ಯ ಸರ್ಕಾರ ಮಹಾತ್ಮಾ ಗಾಂಧಿ ನಗರ (Mahatma Gandhi Nagar) ವಿಕಾಸ ಯೋಜನೆಯಡಿ ಮುಂದಿನ ಮೂರು ವರ್ಷಗಳ ಅವಧಿಗೆ 2ಸಾವಿರ ಕೋಟಿ ರೂ. ಈ ಉದ್ದೇಶಕ್ಕಾಗಿ ತೆಗೆದಿರಿಸಿದೆ. ಆದರೆ ಈ ನಗರಗಳಿಗೆ ಸಮಗ್ರ ಮೂಲಸೌಕರ್ಯಗಳನ್ನು ಕಲ್ಪಿಸಲು ಈ ಅನುದಾನ ಸಾಕಾಗುವುದಿಲ್ಲ. ಆದ್ದರಿಂದ ಅಮೃತ್ ಅಥವಾ ಇನ್ನಾವುದೇ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ (Karnataka under the scheme) 10ಸಾವಿರ ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಬೇಕು.
5. 15ನೇ ಹಣಕಾಸು ಆಯೋಗ ಕರ್ನಾಟಕ ರಾಜ್ಯಕ್ಕೆ (Commission to the State of Karnataka) ಸರಿಯಾದ ನ್ಯಾಯ ಒದಗಿಸುತ್ತಿಲ್ಲ ಎಂದು ನಾವು ನಿರಂತರವಾಗಿ ಪ್ರಸ್ತಾಪಿಸುತ್ತಾ ಬಂದಿದ್ದೇವೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯದ ಪಾಲನ್ನು ಶೇ.1ರಷ್ಟು ಕಡಿಮೆ ಮಾಡಿರುವ ಶಿಫಾರಸ್ಸನ್ನು ಹಣಕಾಸು ಇಲಾಖೆ ಸರಿಪಡಿಸಬೇಕಾಗಿದೆ. ಹಣಕಾಸು ಆಯೋಗವು ರಾಜ್ಯಕ್ಕೆ ಹಂಚಿಕೆ ಕಡಿಮೆಯಾಗಿರುವುದಕ್ಕೆ ಪರಿಹಾರವಾಗಿ ರೂ.5495 ಕೋಟಿ ಅನುದಾನ ಬಿಡುಗಡೆಗೆ (Grant release) ಮತ್ತು ಪೆರಿಫೆರಲ್ ರಿಂಗ್ ರಸ್ತೆ (Peripheral Ring Road) ಮತ್ತು ನೀರಿನ ಮೂಲಗಳ ಪುನರುಜ್ಜೀವನಕ್ಕೆ ರೂ.6ಸಾವಿರ ಕೋಟಿ ವಿಶೇಷ ಅನುದಾನ ನೀಡುವ ಬಗ್ಗೆ ಶಿಫಾರಸು ಮಾಡಿದೆ. ಕನಿಷ್ಟ ಪಕ್ಷ ಹಣಕಾಸು ಆಯೋಗ ಈ ಎರಡು ಶಿಫಾರಸ್ಸುಗಳನ್ನು ಒಪ್ಪಿಕೊಳ್ಳಬೇಕಾಗಿದೆ.ನಾವು ಇನ್ನೂ 15ನೇ ಹಣಕಾಸು ಆಯೋಗದ ಅವಧಿಯಲ್ಲಿರುವುದರಿಂದ ರಾಜ್ಯಕ್ಕೆ ಹೆಚ್ಚುವರಿ (Additional to State) ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ನಿರ್ದೇಶನ ನೀಡುವಂತೆ ಪುನಃ ನಾನು ಮನವಿ ಮಾಡುತ್ತೇನೆ. 16ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇಂದ್ರದ ತೆರಿಗೆ ಪಾಲಿಗೆ ಹೆಚ್ಚಿನ ದೇಣಿಗೆ ಒದಗಿಸುವ ರಾಜ್ಯಗಳಿಗೆ, ಕೇಂದ್ರದ ತೆರಿಗೆ ಪಾಲಿನಲ್ಲಿ ಭಾರೀ ಕಡಿತ ಮಾಡಿ ಶಿಕ್ಷಿಸದಂತೆ, ಹಣಕಾಸು ಇಲಾಖೆ ಖಾತ್ರಿಪಡಿಸಬೇಕು.