ಪ್ರವೀಣ್ ಕುಮಾರ್ ನೆಟ್ಟಾರು ಮನೆಗೆ ಬೊಮ್ಮಾಯಿ ಭೇಟಿ ಸಾಧ್ಯತೆ ; ಸರ್ಕಾರಿ ಕಾರ್ಯಕ್ರಮಗಳು ರದ್ದು!

bjp

ಮಂಗಳೂರು : ಬಿಜೆಪಿ(BJP) ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು(Praveen Nettar) ಹತ್ಯೆ(Murder) ಇಡೀ ಕರಾವಳಿ ಭಾಗದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಇಂದು ಹತ್ಯೆಯಾದ ಪ್ರವೀಣ್ ಕುಮಾರ್ ನೆಟ್ಟಾರು ಅವರ ಕುಟುಂಬವನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಹೀಗಾಗಿ ಮುಖ್ಯಮಂತ್ರಿಗಳ ಎಲ್ಲ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎನ್ನಲಾಗಿದೆ.


ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ನಂತರ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ಕಾರ್ಯಕರ್ತರು(BJP Workers) ಬಿಜೆಪಿ ಸರ್ಕಾರದ(BJP Government) ವಿರುದ್ದವೇ ಆಕ್ರೋಶಗೊಂಡಿದ್ದು, ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ(BJP StatePresident) ನಳಿನ್‌ ಕುಮಾರ್‌ ಕಟೀಲ್‌(Nalin Kumar Kateel) ಕಾರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದರು. ರಾಜ್ಯ ಸರ್ಕಾರದ ವಿರುದ್ದವೇ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಹೀಗಾಗಿ ತೀವ್ರ ಒತ್ತಡಕ್ಕೆ ಒಳಗಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷದ ಕಾರ್ಯಕರ್ತರ ಆಕ್ರೋಶವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಪ್ರವೀಣ್ ಕುಮಾರ್ ನೆಟ್ಟಾರು ಅವರ ಕುಟುಂಬವನ್ನು ಭೇಟಿ ಮಾಡಿ, ಪರಿಹಾರ ಘೋಷಣೆ ಮಾಡುವ ಸಾಧ್ಯತೆಗಳಿವೆ.


ಇನ್ನು ಕರಾವಳಿ ಭಾಗದಲ್ಲಿ ಕೋಮು ಗಲಭೆ ನಡೆಯುವ ಸಾಧ್ಯತೆ ಹೆಚ್ಚಿದ್ದು, ಪೋಲಿಸರು ಭಾರೀ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಹಿಂದೂ ಸಂಘಟನೆಗಳು ಈ ಘಟನೆಯಿಂದ ಭಾರೀ ಆಕ್ರೋಶಗೊಂಡಿದ್ದು, ಕರಾವಳಿಯಲ್ಲಿ ಉದ್ವೀಗ್ನತೆ ಸೃಷ್ಟಿಯಾಗಿದೆ. ಇನ್ನು ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೋಲಿಸರು ಐದು ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದು, ಸುಮಾರು ೨೧ ಮಂದಿ ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆದಿರುವ ಎಲ್ಲ ೨೧ ಮಂದಿಗೂ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಯೊಂದಿಗೆ ನಂಟಿದೆ ಎನ್ನಲಾಗಿದೆ.

ಹೀಗಾಗಿ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಹಿಂದೆ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳ ಕೈವಾಡವಿದೆ ಎಂದು ಶಂಕಿಸಲಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿಯನ್ನು ಪೊಲೀಸರು ನೀಡಿಲ್ಲ.

Exit mobile version