Bengaluru: ಇದೇ ಫೆಬ್ರುವರಿ 9 ರಂದು ಸಿಲಿಕಾನ್ ಸಿಟಿಯ (Silicon City) ನಮ್ಮ ಮೆಟ್ರೋ (Namma Metro) ಟಿಕೆಟ್ ದರ ಏರಿಕೆ ಮಾಡಿ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿದೆ. ದರ ಹೆಚ್ಚಳದಿಂದ ಬೇಸರಗೊಂಡ ಬೆಂಗಳೂರಿನ ಜನ (People of Bangalore) ಮೆಟ್ರೋದಲ್ಲಿ ಪ್ರಯಾಣಿಸುವುದನ್ನೇ ಕಡಿಮೆ ಮಾಡಿದ್ದಾರೆ. ಅನಿವಾರ್ಯ ಇದ್ದವರು ಮಾತ್ರ ದುಪ್ಪಟ್ಟು ಹಣ ನೀಡಿ ಪ್ರಯಾಣಿಸುತ್ತಿದ್ದಾರೆ. ಸಾರ್ವಜನಿಕರ ತೀವ್ರ ಆಕ್ರೋಶ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಸಮಾಧಾನಕರ ಸುದ್ದಿ ತಿಳಿಸಿದ್ದಾರೆ.
ಇನ್ನು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ ನವರು ಬೆಂಗಳೂರು ಮೆಟ್ರೊ ರೈಲು ನಿಗಮ (BMRCL) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ (Rate rise) ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ (Public) ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್ಸಿಎಲ್ (BMRCL) ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದಿದ್ದಾರೆ ಆದರೆ ಎಷ್ಟು ದರ ಕಡಿತ ಮಾಡಲಾಗುತ್ತದೆ ಎಂಬುದು ಇನ್ನೂ ಅಂತಿಮವಾಗಿಲ್ಲ.

ಪ್ರಯಾಣ ದರ ಏರಿಕೆ ಬಳಿಕ ನಮ್ಮ ಮೆಟ್ರೋ (Namm Metro) ಪ್ರಯಾಣಿಕರ ಸಂಖ್ಯೆ ಸುಮಾರು 79,643 ಕುಸಿತ ಕಂಡಿದೆ. ಫೆಬ್ರವರಿ 4ರಂದು ಮೆಟ್ರೋದಲ್ಲಿ 8,58,417 ಲಕ್ಷ ಪ್ರಯಾಣಿಕರು ಸಂಚಾರ ನಡೆಸಿದ್ದರು. ಫೆಬ್ರವರಿ 11ರಂದು ಈ ಸಂಖ್ಯೆ 7,78,774 ಲಕ್ಷಕ್ಕೆ ಇಳಿಕೆಯಾಗಿದೆ. ಮೆಟ್ರೋ ಪ್ರಯಾಣ ದರ ಇಳಿಕೆ (Price reduction) ಮಾಡಬೇಕು ಎಂದು ಬಿಜೆಪಿ ನಾಯಕರು, ಮೆಟ್ರೋ ಪ್ರಯಾಣಿಕರು ಒತ್ತಾಯಿಸುತ್ತಿದ್ದಾರೆ.ಬಿಎಂಆರ್ಸಿಎಲ್ (BMRCL) ರಚನೆ ಮಾಡಿದ್ದ ದರ ಪರಿಷ್ಕರಣೆ ಸಮಿತಿಯ ಶಿಫಾರಸ್ಸಿನಂತೆ ನಮ್ಮ ಮೆಟ್ರೋ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಲಾಗಿದ್ದು, ಸ್ಮಾರ್ಟ್ ಕಾರ್ಡ್ಗಳ (Smart cards) ಮೇಲೆ ಶೇ 5ರಷ್ಟು ರಿಯಾಯಿತಿ ಮುಂದುವರಿಯುತ್ತದೆ ಎಂದು ಹೇಳಿದೆ. ದರ ಏರಿಕೆ ಬಳಿಕ ಜನರು, ಮೆಟ್ರೋಗಿಂತ ಬಿಎಂಟಿಸಿ ಬಸ್, ಖಾಸಗಿ ವಾಹನಗಳೇ ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.