ಪ್ರಧಾನಮಂತ್ರಿ ಆವಾಸ್, ಸ್ವನಿಧಿ ಯೋಜನೆಗಳಡಿ ತ್ವರಿತವಾಗಿ ಸಾಲ ವಿತರಿಸಿ: ಬ್ಯಾಂಕರ್ಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು, ಫೆ. 11: ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಯೋಜನೆಗಳಡಿ ತ್ವರಿತವಾಗಿ ಸಾಲ ವಿತರಿಸುವಂತೆ ಬ್ಯಾಂಕರ್ ಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗಳ ಪ್ರಗತಿ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬ್ಯಾಂಕರ್ ಗಳೊಂದಿಗೆ ಸಭೆ ನಡೆಸಿದ ಅವರು, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 15 ದಿನಗಳೊಳಗೆ ಆಯಾ ಜಿಲ್ಲೆಗಳ ಲೀಡ್ ಬ್ಯಾಂಕ್ ಗಳಿಗೆ ಸಲ್ಲಿಕೆ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಅವುಗಳನ್ನು ವಿವಿಧ ಬ್ಯಾಂಕುಗಳಿಗೆ ಕಳುಹಿಸಿ, ಮಂಜೂರಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದು ನಿರ್ದೇಶನ ನೀಡಿದರು.

ಪ್ರಧಾನಮಂತ್ರಿ ಸ್ವನಿಧಿ ಯೋಜನೆಯು ಜುಲೈ 2020ರಿಂದ ಜಾರಿಗೆ ಬಂದಿದ್ದು, ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದಿಂದ ಅನುದಾನ ಬಿಡುಗಡೆ. ಪಿ.ಎಂ.ಸ್ವನಿಧಿ ಯೋಜನೆಯಡಿ ಬೀದಿ ವ್ಯಾಪಾರಿಗಳಿಗೆ 10 ಸಾವಿರ ರೂ.ಗಳ ದುಡಿಯುವ ಬಂಡವಾಳ ಸೌಲಭ್ಯದೊಂದಿಗೆ ನಿಯಮಿತ ಪಾವತಿಗೆ ಶೇಕಡಾ 7ರ ಬಡ್ಡಿ ದರದಂತಹ ಪ್ರೋತ್ಸಾಹಕಗಳು ಹಾಗೂ ಡಿಜಿಟಲ್ ವಹಿವಾಟಿಗೆ ಪುರಸ್ಕಾರ ನೀಡುವುದಾಗಿದೆ ಎಂದರು.

Exit mobile version