ಕೊರೊನಾ ಲಸಿಕೆ ಪಡೆದ ಸಿಎಂ ಯಡಿಯೂರಪ್ಪ

ಬೆಂಗಳೂರು, ಮಾ. 12: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವ ಬೆನ್ನಲ್ಲೇ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಕೈಗೊಳ್ಳುತ್ತಿದ್ದರೆ. ಇತ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಶುಕ್ರವಾರ ಕೊರೊನಾ ಲಸಿಕೆ ಪಡೆದಿದ್ದಾರೆ.

ಬೆಂಗಳೂರು ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ, ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದರು. ಈ ಬಗ್ಗೆ ತಮ್ಮ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಎಸ್​ವೈ, ಪ್ರತಿಯೊಬ್ಬರು ಕೊರೊನಾ ಲಸಿಕೆ ಪಡೆಯಲು ತಮ್ಮ ಹೆಸರು ನೊಂದಾಯಿಸಿಕೊಳ್ಳುವ ಮೂಲಕ ಲಸಿಕೆ ಪಡೆಯಬೇಕಿದೆ. ಆ ಮೂಲಕ ಕರ್ನಾಟಕವನ್ನು ಕೊರೊನಾ ಮುಕ್ತ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಅಂತೆಯೇ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಸಹ ಕೊರೊನಾ ಮೊದಲ ಹಂತದ ಕೊರೊನಾ ಲಸಿಕೆ ಪಡೆದರು. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದ ಸುಧಾಕರ್, ಎಲ್ಲಾ ಹಿರಿಯ ನಾಗರಿಕರು, ಅರ್ಹ ವ್ಯಕ್ತಿಗಳು ಆದಷ್ಟು ಬೇಗ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬೇಕಿದೆ. ಆ ಮೂಲಕ ಭಾರತ ಹಾಗೂ ಕರ್ನಾಟಕವನ್ನು ಕೊರೊನಾ ಮುಕ್ತವಾಗಿಸಲು ಎಲ್ಲರೂ ಕೈಜೋಡಿಸೋಣ ಎಂದಿದ್ದಾರೆ.

Exit mobile version