ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ದೆಹಲಿಗೆ ಭೇಟಿ

ನವದೆಹಲಿ, ಜೂ. 11: ಉತ್ತರ ಪ್ರದೇಶದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನರ್‌ರಚನೆ ಸುದ್ದಿ ಹರಿದಾಡುತ್ತಿರುವ ನಡುವೆಯೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಅವರು ಬಿಜೆಪಿ ಸೇರ್ಪಡೆಗೊಂಡ ಒಂದು ದಿನದ ನಂತರ, ಯೋಗಿ ಆದಿತ್ಯನಾಥ್ ಎರಡು ದಿನಗಳ ದೆಹಲಿ ಪ್ರವಾಸ ಆರಂಭಿಸಿದ್ದಾರೆ. ಈ ಪ್ರವಾಸದಲ್ಲಿ ಕೇಂದ್ರ ಸಚಿವರು, ಪಕ್ಷದ ಹಿರಿಯ ಮುಖಂಡರನ್ನು ಭೇಟಿಯಾಗಲಿದ್ದಾರೆ. ಇಂದು ಮಧ್ಯಾಹ್ನ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಪ್ರಧಾನಿ ಭೇಟಿಗೂ ಮುನ್ನ ಯೋಗಿ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ‘ವಲಸೆ ಸಮಸ್ಯೆಗೆ ಪರಿಹಾರ‘ ಕುರಿತ ವರದಿಯೊಂದನ್ನು ಸಲ್ಲಿಸಿದರು. ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ಜಿತಿನ್ ಪ್ರಸಾದ್ ಅವರು ಯೋಗಿ ಆದಿತ್ಯನಾಥ್ ಅವರನ್ನು ಇಲ್ಲಿ ಭೇಟಿಯಾದರು.

Exit mobile version