Visit Channel

ಸಿಎಂಗೆ ಅಹವಾಲುಗಳನ್ನು ಕಳುಹಿಸಲು ಒಂದೇ ಇ-ಮೇಲ್‌ ಐಡಿ

cm-new

ಬೆಂಗಳೂರು, ಡಿ. 28: ಮುಖ್ಯಮಂತ್ರಿಗಳಿಗೆ ಏನಾದರೂ ಅಹವಾಲು ಸಲ್ಲಿಸಬೇಕು ಎಂದಾದರೆ ಬೇರೆ ಬೇರೆ ಇ-ಮೇಲ್ ಐಡಿಗಳಿಗೆ ಇನ್ನು ಮೇಲ್​ ಮಾಡಬೇಕಾಗಿಲ್ಲ. ಇನ್ಮುಂದೆ ಒಂದೇ ಇ-ಮೇಲ್ ಐಡಿಗೆ ಎಲ್ಲಾ ಅಹವಾಲುಗಳನ್ನು ಕಳುಹಿಸಬಹುದಾಗಿದೆ. ಜನವರಿ 1ರಿಂದ ಇದು ಚಾಲ್ತಿಗೆ ಬರಲಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಜನವರಿ ಒಂದರಿಂದ ಅಹವಾಲು ಸ್ವೀಕಾರಕ್ಕೆ [email protected] ಇ-ಮೇಲ್ ಐಡಿಯನ್ನು ಮಾತ್ರ ಬಳಕೆಯಲ್ಲಿ ಇರಲಿದೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ 2020ರ ಆಗಸ್ಟ್ ತಿಂಗಳಿನಿಂದ ಇ-ಮೇಲ್ ಮೂಲಕ ಸ್ವೀಕೃತವಾಗುವ ಅಹವಾಲುಗಳನ್ನು ಇ- ಆಫೀಸ್‌ನಲ್ಲಿಯೇ ನಿರ್ವಹಿಸಲಾಗುತ್ತಿದೆ. ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದ್ದು, ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ ಹಾಗೂ ಅನಗತ್ಯ ಗೊಂದಲ ಉಂಟಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಏಕ ವಿಳಾಸವನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ, ಮುಂದಿನ ದಿನಗಳಲ್ಲಿ ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು [email protected] ಮೇಲ್ ಐಡಿ ಮೂಲಕವೇ ಮಾಡುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.