download app

FOLLOW US ON >

Monday, August 8, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಕಾಲೇಜು ಶಿಕ್ಷಣ ಇಲಾಖೆಯ ವಿಳಂಬ ನೀತಿಗೆ ಅತಿಥಿ ಉಪನ್ಯಾಸಕರ ಖಂಡನೆ

ಚಾಮರಾಜನಗರ, ಡಿ. 29: ಕೊರೋನಾ ಸಂಕಷ್ಟ ಒಂದು ಕಡೆಯಾದರೆ  ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿಸುವ ವಿಚಾರದಲ್ಲಿ ಕಾಲೇಜು ಶಿಕ್ಷಣ ಇಲಾಖೆ ವಿಳಂಬ ಧೋರಣೆ ತೋರುವುದು ಇನ್ನೊಂದೆಡೆ. ಇದರಿಂದಾಗಿ ಅಥಿತಿ ಉಪನ್ಯಾಸಕರು ಸಂಕಟದಲ್ಲಿದ್ದಾರೆ  ಎಂದು ಆರೋಪಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಭವನದ ಮುಂಭಾಗ ಸೇರಿದ ಪ್ರತಿಭಟನಕಾರರು, ಕಾಲೇಜು ಶಿಕ್ಷಣ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದರು.

‘ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿಸುವಂತೆ ಉನ್ನತ ಶಿಕ್ಷಣ ಸಚಿವರು ಆದೇಶಿಸಿ ತಿಂಗಳು ಕಳೆದರೂ ಕಾಲೇಜು ಶಿಕ್ಷಣ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿದೆ. ಇದರಿಂದ ಎಂಟು ತಿಂಗಳುಗಳಿಂದ ಉದ್ಯೋಗವಿಲ್ಲದೆ, ವೇತನವಿಲ್ಲದೇ ಉಪನ್ಯಾಸಕರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ’ ಎಂದು ಹೇಳಿದರು.

‘ಕಾಲೇಜು ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಬೋಧಿಸುವುದಕ್ಕೆ ಅತಿಥಿ ಉಪನ್ಯಾಸಕರನ್ನೇ ಅವಲಂಬಿಸಿದೆ. ಮತ್ತೆ ಅವರನ್ನೇ ಮುಂದುವರಿಸುವ ಬಗ್ಗೆ ಆದೇಶ ಹೊರಡಿಸದೇ ಇರುವುದರಿಂದ ಸಕಾಲಕ್ಕೆ ವಿದ್ಯಾರ್ಥಿ ಸಮುದಾಯಕ್ಕೆ ಪಾಠ, ಪ್ರವಚನ ಸಿಗದೆ ಅವರ ಭವಿಷ್ಯದ ಮೇಲೆ ಮಂಕು ಕವಿದಿದೆ’ ಎಂದು ಹೇಳಿದರು.

‘ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆದೇಶಗಳನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥನಾರಾಯಣ ಅವರು ಆದೇಶ ಮಾಡಿದಂತೆ 2020ರ ನವೆಂಬರ್ 17ರಿಂದಲೇ ಅತಿಥಿ ಉಪನ್ಯಾಸಕರ ಸೇವೆ ಎಂದು ಪರಿಗಣಿಸಬೇಕು. ಅತಿಥಿ ಉಪನ್ಯಾಸಕರ/ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕೋವಿಡ್-19 ಮಾರ್ಗಸೂಚಿ ಅನ್ವಯ ತರಗತಿಗಳನ್ನು 40:50 ಅನುಪಾತದಲ್ಲಿ ವಿಭಜಿಸಬೇಕು. ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಸಂಬಂಧಿತ ಕಡತವನ್ನು ಸಚಿವ ಸಂಪುಟ ಸಮಿತಿಯ ಮುಂದೆ ಮಂಡಿಸಿ ಉದ್ಯೋಗ ಭದ್ರತೆ ಘೋಷಿಸಬೇಕು’ ಎಂದು ಒತ್ತಾಯಿಸಿದರು.ಸಮಿತಿಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಿ.ಗುರುರಾಜು, ಚಿಕ್ಕಸಿದ್ದಯ್ಯ, ಸಿಂಧೂ, ಮಹೇಶ್ವರಿ, ರಮೇಶ್ ಇತರರು ಪ್ರತಿಭಟನೆಯಲ್ಲಿದ್ದರು..

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article