ಹನುಮ ಧ್ವಜ ವಿವಾದ: ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ದೂರು ದಾಖಲು

Mandya: ಮಂಡ್ಯ (Mandya) ಜಿಲ್ಲೆಯ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ವಿವಾದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕ ಸಿಟಿ ರವಿ (CT Ravi) ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆಂದು ಮಳವಳ್ಳಿ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಅವರು ಇವರ ವಿರುದ್ಧ ಮಂಡ್ಯ ಎಸ್ಪಿಗೆ ದೂರು ದಾಖಲಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ (BJP) ಸರ್ಕಾರಕ್ಕೆ ಮೊದಲು ಬೀಜ ಹಾಕಿದ್ದೇ ನಾನು. 2008ರಲ್ಲಿ ಪಕ್ಷೇತರನಾಗಿ ಗೆದ್ದಾಗ ಸಿ.ಟಿ.ರವಿ ಕಾಲ್​ ಮಾಡಿದ್ದ. ಸಿ.ಟಿ.ರವಿ ಎಷ್ಟು ಬಾರಿ ಕಾಲ್ ಮಾಡಿದ್ದಾನೆ ಅಂತಾ ನನಗೆ ಗೊತ್ತು. ಸರ್ಕಾರ ರಚನೆ ಮಾಡುವುದಕ್ಕೆ ನನ್ನನ್ನು ಕರೆದು ಮಾತನಾಡಿದ್ದರು. 2008ರಲ್ಲಿ ನಮ್ಮಿಂದಲೇ ಮೊದಲು ಬಿಜೆಪಿ ಸರ್ಕಾರ ಬಂದಿದ್ದು. ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಬೀಜ ಹಾಕಿದ್ದೇ ನಾನು ಸೀಡ್​ಲೆಸ್​ ಯಾರು ಅಂತಾ ಸುದ್ದಿಗಾರರೊಂದಿಗೆ ಮಾತನಾಡಿದ ನರೇಂದ್ರ ಸ್ವಾಮಿ (Narendra Swami)ಅವರು ತಿರುಗೇಟು ನೀಡಿದರು.

ಸಚಿವ ಸ್ಥಾನಕ್ಕಾಗಿ ಪಿ.ಎಂ.ನರೇಂದ್ರಸ್ವಾಮಿ ಹೇಳಿಕೆ ಕೊಡುತ್ತಿದ್ದಾರೆ ಎನ್ನುವ ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ನರೇಂದ್ರ ಸ್ವಾಮಿ ಅವರು ನಾವು ಏನು ಬೇಕಾದರೂ ಮಾಡಿಕೊಳ್ಳುತ್ತೇವೆ ಅದು ನಿಮಗೆ ಯಾಕೆ ? ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್​ ಗಾಂಧಿ (Rahul Gandhi) ಬಳಿ ಗುದ್ದಾಡುತ್ತೇನೆ ನಿಮಗ್ಯಾಕೆ? ಎಂದು ಕಿಡಿಕಾರಿದ್ದಾರೆ.

ಸುದ್ದಿ ಸಂಸ್ಥೆಯೊಂದಕ್ಕೆ ಹಿಂದಿ ಭಾಷೆಯಲ್ಲಿ ನೀಡಿದ್ದ ಹೇಳಿಕೆಯಲ್ಲಿ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಹನುಮ ಧ್ವಜ ಇಳಿಸಿ ತಾಲಿಬಾನ್ ಧ್ವಜ ಹಾರಿಸಲಾಗಿದೆ ಎಂದು ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆಂದು ಮಂಡ್ಯ ಎಸ್ಪಿ ಯತೀತ್​ (Mandya SP Yathit) ಅವರಿಗೆ ಲಿಖಿತ ದೂರು ನೀಡಿದ್ದಾರೆ.

ಭವ್ಯಶ್ರೀ ಆರ್ ಜೆ

Exit mobile version