18 ವರ್ಷದೊಳಗಿನ ಮಕ್ಕಳಿಗೆ ಕಾಂಡೋಮ್‌ ಮಾರಾಟ ನಿಷೇಧ

Bengaluru : ರಾಜ್ಯದಲ್ಲಿ ಇನ್ಮುಂದೆ 18 ವರ್ಷದೊಳಗಿನ ಮಕ್ಕಳಿಗೆ ಕಾಂಡೋಮ್(condoms Banned for childrens), ಗರ್ಭನಿರೋಧಕ ಮಾತ್ರೆಗಳನ್ನು(Contraceptive pill) ಮಾರಾಟ ಮಾಡದಂತೆ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಔಷಧ ನಿಯಂತ್ರಣ ಮಂಡಳಿಯು ಮಹತ್ವದ ಆದೇಶ ಹೊರಡಿಸಿದೆ.

ಇತ್ತೀಚೆಗೆ ಬೆಂಗಳೂರಿನ(Bengalore)ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ಬ್ಯಾಗ್‌ನ ಒಳಗೆ ಕಾಂಡೋಮ್, ಗರ್ಭನಿರೋಧಕ ಮಾತ್ರೆಗಳು, ಸಿಗರೇಟ್(Cigarette), ಮಧ್ಯ, ಲೈಟರ್‌ ಪತ್ತೆಯಾಗಿದ್ದವು.

ಈ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಮಕ್ಕಳಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿವೆ. ಮಕ್ಕಳು ಮೊಬೈಲ್‌ ಮತ್ತು ಸುಲಭವಾಗಿ ದೊರಕುವ ಇಂಟರ್‌ನೆಟ್‌(Internet) ಕಾರಣದಿಂದಾಗಿ,

ಅಶ್ಲೀಲ ಚಿತ್ರಗಳೆಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕಾನೂನು ರೂಪಿಸಬೇಕೆಂದು ಸಾರ್ವಜನಿಕರಿಂದ ಆಗ್ರಹ ಕೇಳಿಬಂದಿತ್ತು.

ಈ ಮಧ್ಯೆ ರಾಜ್ಯದ ಎಲ್ಲ ಶಾಲಾ-ಕಾಲೇಜಿನ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡಬೇಕು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪೊಲೀಸ್‌ ಠಾಣೆಯೊಳಗೆ ವಿಡಿಯೋ ಚಿತ್ರೀಕರಣ ಮಾಡಬಹುದು: ಬಾಂಬೆ ಹೈಕೋರ್ಟ್‌ ಮಹತ್ವದ ತೀರ್ಪು

ಈ ಕುರಿತು ಶಿಕ್ಷಣ ತಜ್ಞರೊಂದಿಗೆ ಸುರ್ದಿರ್ಘ ಸಮಾಲೋಚನೆ ನಡೆಸಿದ ಸರ್ಕಾರ ಅಂತಿಮವಾಗಿ 18 ವರ್ಷದೊಳಗಿನ ಮಕ್ಕಳಿಗೆ

ಕಾಂಡೋಮ್ ಮತ್ತು ಗರ್ಭನಿರೋಧಕ ಮಾತ್ರೆಗಳನ್ನು ನೀಡದಂತೆ ರಾಜ್ಯ ಔಷಧ ನಿಯಂತ್ರಣ ಮಂಡಳಿ ಮೂಲಕ ರಾಜ್ಯದ ಎಲ್ಲ ಮೆಡಿಕಲ್ ಶಾಪ್(Medical shop) ಗಳಿಗೆ ಖಡಕ್ ಸೂಚನೆ ರವಾನಿಸಿದೆ.

ಮುಂದಿನ ದಿನಗಳಲ್ಲಿ ಈ ಕುರಿತು ಸಮಗ್ರ ಕಾನೂನು ರೂಪಿಸುವ ಕಾರ್ಯಕ್ಕೂ ಸರ್ಕಾರ ಮುಂದಾಗಲಿದೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ರಾಜ್ಯ ಔಷಧ ನಿಯಂತ್ರಕರಾದ ಬಿ ಟಿ ಖಾನಾಪುರೆ(BT Khanapure) ಪ್ರತಿಕ್ರಿಯಿಸಿದ್ದು,

ಕಾಂಡೋಮ್ ಅಥವಾ ಗರ್ಭ ನಿರೋಧಕ ಮಾತ್ರೆಗಳನ್ನು ಆನ್ ದಿ ಕೌಂಟರ್ ಕೊಡಬಾರದೆಂದು ಮೆಡಿಕಲ್ ಶಾಪ್ ಗಳಿಗೆ ಔಷಧ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ.

18 ವರ್ಷದೊಳಗಿನ ಮಕ್ಕಳು ಇವುಗಳನ್ನು ಕೇಳಿದರೆ ನಿರಾಕರಿಸುವಂತೆ ತಿಳಿಸಲಾಗಿದೆ. ಮಕ್ಕಳ ಬ್ಯಾಗ್‌ನಲ್ಲಿ ಕಾಂಡೋಮ್ ಪತ್ತೆಯಾದ ಕಾರಣ ಈ ನಿರ್ಧಾರಕ್ಕೆ ಮುಂದಾಗಿದ್ದೇವೆ.

ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಜತೆ ಮಾತಾಡಿ ಈ ನಿರ್ಧಾರಕ್ಕೆ ಬರಲಾಗಿದೆ. ಅನೈತಿಕ ಚಟುವಟಿಕೆಗಳಿಂದ ಶಾಲಾ ಮಕ್ಕಳನ್ನ ದೂರವಿಡಲು ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ರಾಜ್ಯ ಸರ್ಕಾರ ಮಧ್ಯಮಾರಾಟ ವಯಸ್ಸಿನ ಮೀತಿಯನ್ನು 21ರಿಂದ 18ಕ್ಕೆ ಇಳಿಸಲು ಮುಂದಾಗಿತ್ತು. ಸರ್ಕಾರದ ಈ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ಸರ್ಕಾರ ಕೈಬಿಟ್ಟಿತ್ತು.

Exit mobile version