ಯುವಕರಿಗೆ ಉದ್ಯೋಗದ ಜೊತೆ 1ಲಕ್ಷ ವೇತನ: ಕಾಂಗ್ರೆಸ್ ಘೋಷಣೆ

New Delhi: 18ನೇ ಲೋಕಸಭಾ ಚುನಾವಣೆ (Loksabha Election) ಹಿನ್ನಲೆ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ (Congress), ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಯುವಕರಿಗೆ ಉದ್ಯೋಗದ ಜೊತೆ 1 ಲಕ್ಷ ವೇತನ ನೀಡುವುದಾಗಿ ಘೋಷಣೆ ಮಾಡಿದೆ.

ನವದೆಹಲಿಯ (New Delhi) ಪಕ್ಷದ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ (Sonia Gandhi, Rahul Gandhi) ಅವರು ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಗೆ ʼನ್ಯಾಯ ಪತ್ರʼ ಎಂದು ಹೆಸರನ್ನು ಇಡಲಾಗಿದ್ದು, ದೇಶಾದ್ಯಂತ ಸಾಮಾಜಿಕ ಆರ್ಥಿಕ ಜಾತಿ ಗಣತಿ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಇನ್ನು ಪ್ರಣಾಳಿಕೆಯ ಮುಖಪುಟದಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಭಾವಚಿತ್ರವನ್ನು ಹಾಕಲಾಗಿದೆ.

ಕಾಂಗ್ರೆಸ್ (Congress) ಪಕ್ಷದ ಪ್ರಣಾಳಿಕೆಯಲ್ಲಿರುವ ಪ್ರಮುಖ ಘೋಷಣೆಗಳು :
ದೇಶಾದ್ಯಂತ ಸಾಮಾಜಿಕ ಆರ್ಥಿಕ ಜಾತಿ ಗಣತಿ
ಶಿಕ್ಷಕರನ್ನು ಶಿಕ್ಷಣೇತರ ಚಟುವಟಿಕೆಗಳಿಗೆ ಬಳಸಲ್ಲ
ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯಗಳ ಸಂಖ್ಯೆ ಹೆಚ್ಚಳ
ಪ್ರತಿ ತಾಲೂಕಿನಲ್ಲಿ ಸರ್ಕಾರಿ ಕಮ್ಯುನಿಟಿ ಕಾಲೇಜು (Community College)

9 ರಿಂದ 12ನೇ ತರಗತಿಯ ಮಕ್ಕಳಿಗೆ ಮೊಬೈಲ್ ಫೋನ್ (Mobile Phone)
21 ವರ್ಷದೊಳಗಿನ ಕ್ರೀಡಾ ಪ್ರತಿಭೆಗಳಿಗೆ ಪ್ರತಿ ತಿಂಗಳು 10 ಸಾವಿರ ಸ್ಕಾಲರ್ ಶಿಪ್
12ನೇ ತರಗತಿಯವರೆಗೆ ಮಧ್ಯಾಹ್ನದ ಬಿಸಿಯೂಟ
ರಾಷ್ಟ್ರೀಯ ಶಿಕ್ಷಣ ನೀತಿ (NEP) ಬದಲಾವಣೆ

ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ಜಾರಿ
ಹಿರಿಯ ನಾಗರಿಕರಿಗೆ ಸಾರ್ವಜನಿಕ ಸಾರಿಗೆ ಯಲ್ಲಿ ರಿಯಾಯಿತಿ ದರದಲ್ಲಿ ಪ್ರಯಾಣ
ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜು (Medical College)
ಒಂದು ದೇಶ, ಒಂದು ಚುನಾವಣೆ ತಿರಸ್ಕಾರ

ಬಡ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ನೆರವು
ಮಹಿಳಾ ಮೀಸಲಾತಿ 2025ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಜಾರಿ
ಇವಿಎಂ (EVM) ಮೂಲಕವೇ ಮತದಾನ ನಡೆಯಬೇಕು. ಆದರೆ ಬ್ಯಾಲಟ್ ಪೇಪರ್ ನಲ್ಲಿ ಪಾರದರ್ಶಕತೆ.
ಶಾಸಕ ಅಥವಾ ಸಂಸದ ಪಕ್ಷ ಬದಲಾಯಿಸಿದರೆ ಅನರ್ಹತೆ. ಇದಕ್ಕಾಗಿ 10ನೇ ಶೆಡ್ಯೂಲ್ಗೆ (Schedule) ತಿದ್ದುಪಡಿ.

Exit mobile version