Bengaluru : ಭಾರತ ವಿಕ್ರಮ ಸಾಧಿಸಿದೆ. ನಮೆಲ್ಲರ ಕನಸು ನನಸಾಗಿದೆ, (congratulation to chandrayaan team) ನೂರಾ ಇಪ್ಪತ್ತೈದು ಕೋಟಿ ಭಾರತೀಯರ ನಿರೀಕ್ಷೆ ನಿಜವಾಗಿದೆ. ಇಸ್ರೋ
(ISRO) ನಮ್ಮ ಹೆಮ್ಮೆ ಎಂದು ಎಚ್.ಡಿ.ಕುಮಾರಸ್ವಾಮಿ (H.D.Kumarswamy) ಅವರು ಟ್ವೀಟ್ ಮಾಡಿದ್ದಾರೆ.

ಚಂದ್ರಯಾನ-3 (Chandrayaan-3) ಯಶಸ್ಸಿನ ನಂತರ ಇಸ್ರೋಗೆ ಅಭಿನಂದನೆ ಸಲ್ಲಿಸಿರುವ ಅವರು, ಜಗತ್ತಿನಲ್ಲಿಯೇ ಪ್ರಥಮವಾಗಿ ರೋವರ್ (ವಿಕ್ರಮ ಲ್ಯಾಂಡರ್)ಅನ್ನು ಚಂದ್ರನ ದಕ್ಷಿಣ
ಧ್ರುವದ ಮೇಲೆ ಯಶಸ್ವಿಯಾಗಿ ಇಳಿಸುವ ಮೂಲಕ ಚಂದ್ರಯಾನ-3 ಮಹಾನ್ ಸಾಹಸವನ್ನು ಇಸ್ರೋ ಪೂರೈಸಿದೆ. ಆ ಮೂಲಕ ಖಗೋಳ ಸಂಶೋಧನೆಗೆ ನಿರ್ಣಾಯಕ ತಿರುವು ಕೊಟ್ಟಿದೆ. ಇಸ್ರೋ
ವಿಜ್ಞಾನಿಗಳ ಈ ಸಾಧನೆಯನ್ನು ಕೇವಲ ಪದಗಳಿಂದ ಬಣ್ಣಿಸಿದರೆ ಸಾಲದು. ಹಗಲಿರುಳು ಶ್ರಮಿಸಿದ ಅವರ ಯಶಸ್ಸನ್ನು, ಅರ್ಪಣಾ ಮನೋಭಾವವನ್ನು ಹೃದಯಪೂರ್ವಕವಾಗಿ ಕೊಂಡಾಡಿ ಗೌರವಿಸೋಣ.
ಅಮೆರಿಕ, ರಷ್ಯಾ, ಚೀನಾ ನಂತರ ಚಂದ್ರನ ಮೇಲೆ ರೋವರ್ ಇಳಿಸಿದ ಈ ಸಾಧನೆ ಐತಿಹಾಸಿಕ. ಇಸ್ರೋದ ಈ ಪಯಣ ನನಗೆ ರೋಮಾಂಚನ ಉಂಟು ಮಾಡಿದೆ. ಸಂಸ್ಥೆಯ ಅಧ್ಯಕ್ಷರಾದ ಡಾ.ಸೋಮನಾಥ್
(Dr. Somanath) ಸೇರಿದಂತೆ ಅವರ ತಂಡದ ಎಲ್ಲಾ ವಿಜ್ಞಾನಿಗಳು, ತಾಂತ್ರಿಕ ನಿಪುಣರು, (congratulation to chandrayaan team) ಮತ್ತಿತರರಿಗೆ ನನ್ನ ಅಭಿನಂದನೆಗಳು ಎಂದಿದ್ದಾರೆ.

ಅದೇ ರೀತಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಟ್ವೀಟ್ ಮಾಡಿ, ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ
ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ (Vikram Lander) ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು
ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂಥದ್ದೊಂದು ಅಸಾಧಾರಣ ಸಾಧನೆಗೈದ ನಾಡಿನ ವಿಜ್ಞಾನಿಗಳಿಗೆ ಅಭಿನಂದನೆಗಳು.
ಚಂದ್ರಯಾನ-3ರ ಯಶಸ್ಸು ಪ್ರತಿಯೊಬ್ಬ ಭಾರತೀಯರ ಯಶಸ್ಸು ಎಂದಿದ್ದಾರೆ.
ಸೂರ್ಯಯಾನ: ಚಂದ್ರಯಾನ ಯಶಸ್ವಿ ಬೆನ್ನಲ್ಲೇ ಸೆಪ್ಟೆಂಬರಲ್ಲಿ ಸೂರ್ಯಕ್ರಾಂತಿಗೆ ಇಸ್ರೋ ತಯಾರಿ
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಟ್ವೀಟ್ ಮಾಡಿ, ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಆ ಐತಿಹಾಸಿಕ ಕ್ಷಣಗಳನ್ನು ನಾನು ಕುತೂಹಲದಿಂದ ಕಣ್ತುಂಬಿಕೊಂಡೆ.
ದೇಶವನ್ನೇ ಸಂತಸ ಹಾಗೂ ಹೆಮ್ಮೆಯ ಕಡಲಲ್ಲಿ ತೇಲಿಸಿದ ಇಸ್ರೋ ತಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳು ಮತ್ತು ಹಾರ್ದಿಕ ಅಭಿನಂದನೆಗಳು. ದೇಶವನ್ನೇ ಸಂತಸ ಹಾಗೂ ಹೆಮ್ಮೆಯ ಕಡಲಲ್ಲಿ ತೇಲಿಸಿದ
ಎಂದಿದ್ದಾರೆ. ಇನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ (D.K.Shivakumar) ಅವರು, ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿ ಇಸ್ರೋ ಅಧ್ಯಕ್ಷರಾದ ಎಸ್. ಸೋಮನಾಥ್ ಹಾಗೂ
ಅವರ ತಂಡವನ್ನು ಅಭಿನಂದಿಸಿದ್ದಾರೆ.