ಬೆಂಗಳೂರು ಜ 13 : ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ನಿಲ್ಲಿಸುವಂತೆ AICC ಸೂಚನೆ ನೀಡಿದ್ದು, ಈ ಪಾದಯಾತ್ರೆಯಿಂದಾಗಿ ಪಕ್ಷಕ್ಕೆ ಮುಜುಗರವಾಗಲಿದೆ ಎಂದು ಸಂದೇಶನೀಡಿದೆ. ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಹೈಕೋರ್ಟ್ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಚಾಟಿ ಬೀಸಿದ ಹಿನ್ನೆಲೆಯಲ್ಲಿಈ ಕ್ರಮ ಕೈಗೊಳ್ಳಲಾಗಿದೆ.
ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ೧೦ ಗಂಟೆಗೆ ಸಭೆ ನಡೆದಿದ್ದು, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು. ರಾಜ್ಯ ನಾಯಕರು ಪಾದಯಾತ್ರೆ ಮುಂದುವರಿಸುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ
ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆರೋಗ್ಯ ತಪಾಸಣೆ ಮಾಡಲಾಗಿದೆ. ನಿವಾಸಕ್ಕೆ ವೈದ್ಯರ ಅಗಮಿಸಿ ಶುಗರ್, ಬಿಪಿ ಪರೀಕ್ಷೆ ಮಾಡಿದ್ದಾರೆ. ಇತ್ತ ರಾಮನಗರ ಸುತ್ತಲು ಪೊಲೀಸ್ ಬೀಗಿ ಬಂದೋಬಸ್ತ್ ಆಯೋಜನೆ ಮಾಡಲಾಗಿದ್ದು, ಒಂದು ವೇಳೆ ಪಾದಯಾತ್ರೆ ಆರಂಭವಾದರೆ ಡಿಕೆಶಿ ಅವರನ್ನು ಬಂಧಿಸುವ ಸಾಧ್ಯತೆ ಹೆಚ್ಚಿದೆ.