ಉತ್ತರ ಪ್ರದೇಶ ಚುನಾವಣೆ : 2ನೇ ಪಟ್ಟಿಯಲ್ಲೂ ಮಹಿಳೆಯರಿಗೆ ಕಾಂಗ್ರೆಸ್‌ ಮಣೆ

congress

 ಲಕ್ನೋ ಜ 21 : ಉತ್ತರ ಪ್ರದೇಶದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಚುನಾವಣೆಗೆಲ್ಲಲು ಭಾರೀ ಕಸರತ್ತು ನಡೆಸುತ್ತಿವೆ. ಫೆಬ್ರವರಿ 10 ರಿಂದ ಪ್ರಾರಂಭವಾಗುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ 16 ಮಹಿಳೆಯರು ಸೇರಿದಂತೆ 41 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ವಿರೋಧ ಪಕ್ಷದ ವಿರುದ್ಧ ಇತರರ ಹಕ್ಕುಗಳಿಗಾಗಿ ಹೋರಾಡಿದ ಮತ್ತು ಸಾರ್ವಜನಿಕ ಚಳುವಳಿಗಳಲ್ಲಿ ಭಾಗವಹಿಸಿದ ಹಲವಾರು ಅಭ್ಯರ್ಥಿಗಳನ್ನು ಕಾಂಗ್ರೆಸ್ ಹೆಸರಿಸಿದೆ. ಈ ಪಟ್ಟಿಯಲ್ಲಿ ಸಯಾನಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಅಂತಾರಾಷ್ಟ್ರೀಯ ಶೂಟರ್ ಪೂನಂ ಪಂಡಿತ್ ಹೆಸರು ಸೇರಿದೆ. ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನದ ಸಮಯದಲ್ಲಿ ಅವರು ಮುನ್ನಲೆಯಲ್ಲಿದ್ದರು. ನಂತರ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತು. ಈ ಹೋರಾಟದಲ್ಲಿ ಪೂನಂ ಪಂಡಿತ್ ಸಕ್ರಿಯವಾಗಿ ಭಾಗವಹಿಸಿದ್ದರು ಇವರ ಈ ಜನಪ್ರಿಯತೆ ಅವರಿಗೆ ಟಿಕೆಟ್‌ ದೊರಕಿಸುವಲ್ಲಿ ಪ್ರಮುಖ ಪಾತ್ರವಹಿಸಿತು.

ಸಾಹಿಬಾಬಾದ್ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ದಿವಂಗತ ರಾಜೀವ್ ತ್ಯಾಗಿ ಅವರ ಪತ್ನಿ ಸಂಗೀತಾ ತ್ಯಾಗಿ ಅವರನ್ನು ಕಣಕ್ಕಿಳಿಸಿದೆ. ಸುದರ್ಶನ್ ಟಿವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಗೀತಾ ತ್ಯಾಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಸ್ಥಿಕೆ ಅರ್ಜಿಯನ್ನು ಸಲ್ಲಿಸಿದ್ದರು, ದೂರದರ್ಶನ ನಿರೂಪಕರ “ದ್ವೇಷ ಭಾಷಣಗಳ” ದೊಡ್ಡ ವಿಷಯದ ಕುರಿತು ನ್ಯಾಯಾಲಯಕ್ಕೆ ಸಹಾಯ ಮಾಡಲು ಕೋರಿದ್ದರು. ಇನ್ನೂ ನವಾಬ್‌ಗಂಜ್‌ನಿಂದ ಕಾಂಗ್ರೆಸ್ ಜಿಲ್ಲಾ ಪರಿಷತ್ತಿನ ಮಾಜಿ ಅಧ್ಯಕ್ಷೆ ಮತ್ತು ಕುರ್ಮಿ ​​ನಾಯಕಿ ಉಷಾ ಗಂಗ್ವಾರ್ ಅವರನ್ನು ಕಣಕ್ಕಿಳಿಸಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷದ “ಲಡ್ಕಿ ಹೂ, ಲಾಡ್ ಸಕ್ತಿ ಹೂ” (ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ) ಅಭಿಯಾನವನ್ನು ಪ್ರಾರಂಭಿಸಿದ ನಂತರ ಅವರು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ತೊರೆದು ಕಾಂಗ್ರೆಸ್‌ಗೆ ಸೇರಿದರು.ಒಟ್ಟಿನಲ್ಲಿ ಈ ಬಾರಿ ಕಾಂಗ್ರೆಸ್‌ ಪಕ್ಷ ಸಾಕಷ್ಟು ಹೊಸ ಮುಖಗಳಿಗೆ ಅದರಲ್ಲೂಕೂಡ ಮಹಿಳೆಯರಿಗೆ ಮಣೆ ಹಾಕಿದೆ.

Exit mobile version