ನೂರಾರು ಕೋಟಿ ಧ್ವನಿಗಳಿರುವಾಗ, ಬಿಜೆಪಿಯಿಂದ ಎಷ್ಟು ಧ್ವನಿಗಳನ್ನು ಅಡಗಿಸಲು ಸಾಧ್ಯ? : ಅಭಿಷೇಕ್‌ ಸಿಂಘ್ವಿ

ನೂರಾರು ಕೋಟಿ ಧ್ವನಿಗಳಿರುವ ದೇಶದಲ್ಲಿ ಬಿಜೆಪಿಯಿಂದ(BJP) ಎಷ್ಟು ಧ್ವನಿಗಳನ್ನು ಅಡಗಿಸಲು ಸಾಧ್ಯ? ಸಂವಿಧಾನದ(Constitution) ಮೇಲೆ ನಿರ್ಮಿಸಿರುವ ದೇಶದಲ್ಲಿ ಅಧಿಕಾರದಲ್ಲಿ ಮುಂದುವರಿಯಲು ಬಿಜೆಪಿ ಎಷ್ಟು ಸಂಸ್ಥೆಗಳನ್ನು ನಾಶಪಡಿಸಲಿದೆ? ಬಿಜೆಪಿ ಎಷ್ಟು ದಿನಗಳ ಕಾಲ ಇಂತಹ ವಿಭಜನೆಯ ಅಭಿಯಾನಗಳ ಹಿಂದೆ ಅವಿತುಕೊಳ್ಳಲಿದೆ? ಎಂದು ಕಾಂಗ್ರೆಸ್‌ ಪಕ್ಷದ(Congress Party) ರಾಷ್ಟ್ರೀಯ ವಕ್ತಾರ(National Spokesperson) ಮತ್ತು ರಾಜ್ಯಸಭಾ ಸದಸ್ಯ(Rajyasabha Member) ಅಭಿಷೇಕ್‌ ಸಿಂಘ್ವಿ(Abhishek Singui) ಕೇಂದ್ರ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕರ್ನಾಟಕದ ಹೈಕೋರ್ಟ್‌(Highcourt) ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿರುವ ಪ್ರಕರಣದ ಕುರಿತು ನವದೆಹಲಿಯಲ್ಲಿ(NewDelhi) ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿಗಳು ತಮಗೆ ವರ್ಗಾವಣೆ ಬೆದರಿಕೆ, ಒತ್ತಡ ಇರುವುದಾಗಿ ಹೇಳಿದ್ದಾರೆ. 2014ರ ನಂತರ ನ್ಯಾಯಾಂಗ ವ್ಯವಸ್ಥೆಯ ಮೇಲೆ ಕಾಣದ ಶಕ್ತಿಗಳು ಈ ರೀತಿ ಒತ್ತಡ ಹೇರುತ್ತಿರುವುದು ಇದೇ ಮೊದಲಲ್ಲ. ನ್ಯಾಯಮೂರ್ತಿಗಳ ಈ ಗಂಭೀರ ಆರೋಪದ ಬಗ್ಗೆ ತನಿಖೆ ನಡೆಸಲು ವಿಶೇಷ ಸಮಿತಿ ರಚಿಸುವಂತೆ ಕೋರುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ದೇಶದ ನ್ಯಾಯಾಂಗ ವ್ಯವಸ್ಥೆ ಹಾಗೂ ನ್ಯಾಯಾಧೀಶರ ಮೇಲೆ ನಡೆಯುತ್ತಿರುವ ದಾಳಿ ಕೇವಲ ಆಕಸ್ಮಿಕವಲ್ಲ. ಬಿಜೆಪಿ ನಾಯಕರು, ಬೆಂಬಲಿಗರು ನ್ಯಾಯಾಂಗವನ್ನು ಟ್ರೋಲ್(Troll) ಮಾಡುವ ಸಂದೇಶಗಳನ್ನು ಹರಿಬಿಡುತ್ತಿದ್ದಾರೆ. ನ್ಯಾಯಾಂಗದ ನೈತಿಕಸ್ಥೈರ್ಯ ಕುಗ್ಗಿಸುವುದು, ಒತ್ತಡ ಹೇರುವುದು, ಬೆದರಿಸುವುದು ಇದರ ಉದ್ದೇಶ ಎಂದು ಆರೋಪಿಸಿದ್ದಾರೆ. ಇನ್ನು ನ್ಯಾಯಾಮೂರ್ತಿಗಳಿಗೆ ಬೆದರಿಕೆ ಹಾಕಿರುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದರು.

ಕರ್ನಾಟಕದಲ್ಲಿ ಎರಡು ದಿನಗಳ ಹಿಂದೆಯಷ್ಟೇ ಆಡಳಿತಾರೂಢ ಪಕ್ಷದ ನಾಯಕರು ನ್ಯಾಯಾಲಯದ ಕಾರ್ಯನಿರ್ವಹಣೆಯಲ್ಲಿ ಮಧ್ಯಪ್ರವೇಶಿಸಿ ತಮ್ಮ ಮೇಲೆ ಒತ್ತಡ ಹೇರುತ್ತಿರುವ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಇಂತಹ ಅಪರೂಪದ ನ್ಯಾಯಮೂರ್ತಿಗಳನ್ನು ನಾವೆಲ್ಲರೂ ಒಗ್ಗೂಡಿ ಬೆಂಬಲಿಸಬೇಕಾಗಿದೆ ಎಂದಿದ್ದರು.

Latest News

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.