Hyderabad: ಪಂಚರಾಜ್ಯಗಳ ವಿಧಾನಸಭಾ ಚುಣಾವನೆಯ ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಎಲ್ಲ (Congress announced guarantees in Telangana) ಪಕ್ಷಗಳು ಉಚಿತ ಭರವಸೆಗಳ
ಮೂಲಕ ಮತದಾರರನ್ನು ಸೆಳೆಯಲು ಭಾರೀ ಕಸರತ್ತು ನಡೆಸಿವೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಐದು ಉಚಿತ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್
(Congress) ದೇಶಾದ್ಯಂತ ಗ್ಯಾರಂಟಿಗಳ ಮೂಲಕವೇ ಮತಬೇಟೆಗೆ ಇಳಿದಿದೆ. ಈಗಾಗಲೇ ಮಧ್ಯಪ್ರದೇಶ, ಛತ್ತೀಸ್ಘಡ, ರಾಜಸ್ಥಾನಗಳಲ್ಲಿ (Rajasthan) ಅನೇಕ ಗ್ಯಾರಂಟಿಗಳನ್ನು ಘೋಷಣೆ
ಮಾಡಿರುವ ಕಾಂಗ್ರೆಸ್ ಇದೀಗ ತೆಲಂಗಾಣದಲ್ಲಿಯೂ ಭರ್ಜರಿ (Congress announced guarantees in Telangana) ಗ್ಯಾರಂಟಿಗಳನ್ನೇ ಘೋಷಣೆ ಮಾಡಿದೆ.
ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಆರು ಗ್ಯಾರಂಟಿಗಳನ್ನು (Guarantee) ಘೋಷಿಸಿದ್ದಾರೆ. ಇದೇ ವೇಳೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತೆಲಂಗಾಣದಲ್ಲಿ (Telangana)
ಕಾಮಾರೆಡ್ಡಿ ಕ್ಷೇತ್ರದಲ್ಲಿ ರೇವಂತ್ ರೆಡ್ಡಿ ಪರ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೂರು ದಿನದಲ್ಲಿ ಆರು ಗ್ಯಾರಂಟಿಗಳನ್ನು ಜಾರಿ ಮಾಡಲಾಗುದೆ. ಕರ್ನಾಟಕದಲ್ಲಿ ಗ್ಯಾರಂಟಿಗಳನ್ನು
ಹೇಗೆ ಜಾರಿ ಮಾಡಲಾಗಿದೆ ಎಂಬುದನ್ನು ಕೆಸಿಆರ್ ಕರ್ನಾಟಕ್ಕೆ ಬಂದು ನೋಡಲಿ ಎಂದು ಸವಾಲು ಹಾಕಿದ್ದಾರೆ.
ಇನ್ನು ಕರ್ನಾಟಕದ ಗ್ಯಾರಂಟಿ ಮಾದರಿಯನ್ನು ಪ್ರಚಾರ ಮಾಡಲು ತೆಲಂಗಾಣ ಕಾಂಗ್ರೆಸ್, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shiakumar), ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ
ಖರ್ಗೆ (Mallikarjuna Kharge) ಮತ್ತು ಕರ್ನಾಟಕದ ಕೆಲವು ನಾಯಕರೊಂದಿಗೆ ಹಲವಾರು ಸಭೆಗಳು, ರೋಡ್ ಶೋಗಳನ್ನು ಯೋಜಿಸಿದೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಘೋಷಿಸಿರುವ ಆರು ಗ್ಯಾರಂಟಿ..!
ಗ್ಯಾರಂಟಿ 1 – ಪ್ರತಿ ತಿಂಗಳು ಅತ್ತೆಗೆ 4,000 ರೂ., ಸೊಸೆಗೆ 2,500 ರೂ.
ಗ್ಯಾರಂಟಿ 2 –500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್(Gas Cylinder)
ಗ್ಯಾರಂಟಿ 3 – ಪಿಂಚಣಿ ಮೊತ್ತ 2,000 ರೂ.ನಿಂದ 4,000 ರೂ.ಗೆ ಹೆಚ್ಚಳ
ಗ್ಯಾರಂಟಿ 4 – ಬಡವರಿಗೆ 200 ಯೂನಿಟ್ವರೆಗೂ ಉಚಿತ ವಿದ್ಯುತ್
ಗ್ಯಾರಂಟಿ 5 – ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೆರವು
ಗ್ಯಾರಂಟಿ 6 – ಪ್ರತಿ ಹೆಣ್ಣುಮಗುವಿನ ಖಾತೆಗೆ ಪ್ರತಿ ತಿಂಗಳು 2,500 ರೂ.
ಇದನ್ನು ಓದಿ: ನಾಯಿ ಕಡಿತದಿಂದ ಮೃತಪಟ್ಟರೇ 5 ಲಕ್ಷ ರೂ. ಪರಿಹಾರ: ಸರ್ಕಾರಕ್ಕೆ ಹೈಕೋರ್ಟ್ ಆದೇಶ