ಬೆಳ್ಳಿ ತಟ್ಟೆಯಲ್ಲಿ ಭೋಜನ ಸವಿಯುವರಿಗೆ ಹಸಿವು ಸೂಚಂಕ್ಯದಲ್ಲಿ 117ನೇ ಸ್ಥಾನಕ್ಕೆ ಕುಸಿದಿರೋದು ಕಾಣುತ್ತಾ? : ಕಾಂಗ್ರೆಸ್ ಪ್ರಶ್ನೆ!

amit shah

ಪಕ್ಷದ ಕಾರ್ಯಕ್ರಮಗಳ ನಿಮಿತ್ತ ರಾಜ್ಯಕ್ಕೆ ಆಗಮಿಸಿದ್ದ ಗೃಹ ಸಚಿವ(HomeMinister) ಅಮಿತ್ ಶಾ(Amit shah) ಅವರಿಗೆ ಬಿಜೆಪಿ(BJP) ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದ ಔತಣಕೂಟದಲ್ಲಿ ಊಟಕ್ಕೆ ಬೆಳ್ಳಿ ತಟ್ಟೆಯನ್ನು ಬಳಸಲಾಗಿದ್ದು, ಈ ಕುರಿತು ರಾಜ್ಯ ಕಾಂಗ್ರೆಸ್(State Congress) ಸರಣಿ ಟ್ವೀಟ್‍ಗಳನ್ನು ಮಾಡಿ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದೆ. ಇನ್ನು ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿರುವುದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ(JP Nadda) ಅವರನ್ನು ಸೈಡ್‍ಲೈನ್ ಮಾಡಲು ಎಂದು ಆರೋಪಿಸಿದೆ.


ಪ್ರತಿ ಸರ್ಕಾರಿ ನೇಮಕಾತಿಯಲ್ಲಿ, ಪ್ರತಿ ಸರ್ಕಾರಿ ವರ್ಗಾವಣೆಯಲ್ಲಿ
ಪ್ರತಿ ಸರ್ಕಾರಿ ಗುತ್ತಿಗೆಯಲ್ಲಿ 40% ಕಮೀಷನ್ ಪಡೆದು ಇಡೀ ರಾಜ್ಯವನ್ನು ಲೂಟಿ ಮಾಡಿ, ರಾಜ್ಯದ ಸಂಪನ್ಮೂಲಗಳನ್ನು ಗುಡಿಸಿ ಗುಂಡಾತರ ಮಾಡಿದ ಆದಾಯದಲ್ಲಿ ಬೆಳ್ಳಿ ತಟ್ಟೆಯಲ್ಲಿ ಭೋಜನ ಸವಿಯುವವರಿಗೆ ಭಾರತ ಹಸಿವು ಸೂಂಚಕ್ಯದಲ್ಲಿ 117ನೇ ಸ್ಥಾನಕ್ಕೆ ಕುಸಿದಿರೋದು ಕಾಣುತ್ತಾ? ಎಂದು ಪ್ರಶ್ನಿಸಿದೆ.

ಇನ್ನು ಗೃಹ ಸಚಿವ ಅಮಿತ್ ಶಾ ಭೇಟಿಯಿಂದ ರಾಜ್ಯಕ್ಕೆ ಯಾವುದೇ ಪ್ರಯೋಜನವಿಲ್ಲ. ತಮ್ಮ ಪಕ್ಷದ ಸಭೆಗಳನ್ನು ನಡೆಸುವುದರಲ್ಲೇ ಅವರು ಕಾಲ ಕಳೆಯುತ್ತಾರೆ. ಕೇಂದ್ರದ ಪ್ರತಿನಿಧಿಯಾಗಿ ರಾಜ್ಯಕ್ಕೆ ಆಗಮಿಸಿ ಅಭಿವೃದ್ದಿ ವಿಷಯಗಳ ಬಗ್ಗೆ ಅವರು ಚರ್ಚೆ ನಡೆಯುವುದಿಲ್ಲ. ಡಬಲ್ ಎಂಜಿನ್ ಸರ್ಕಾರ ಕೆಟ್ಟು ನಿಂತಿದೆ. ಅದನ್ನು ತಳ್ಳಿ ಸ್ಟಾರ್ಟ್ ಮಾಡುವ ಕೆಲಸವನ್ನು ಅಮಿತ್ ಶಾ ಮಾಡುತ್ತಿಲ್ಲ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಸೈಡ್‍ಲೈನ್ ಮಾಡಲು ರಾಜ್ಯಕ್ಕೆ ಭೇಟಿ ಕೊಡುತ್ತಿದ್ದಾರೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.


ಇನ್ನೊಂದು ಟ್ವೀಟ್‍ನಲ್ಲಿ “ಅಮಿತ್ ಶಾ ಅವರೇ, ನಿಮ್ಮ ಕರ್ನಾಟಕ ಭೇಟಿಯ ಅಜೆಂಡಾ ಏನು..? ಪಿಎಸ್‍ಐ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ವಹಿಸುವುದೇ..?
ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಚುರುಕುಗೊಳಿಸುವುದೇ..? ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವುದೇ..?
ಸಮರ್ಥ ಗೃಹ ಮಂತ್ರಿ ಬದಲಿಸುವುದೇ..? ಅಥವಾ ಮುಖ್ಯಮಂತ್ರಿ ಬದಲಾವಣೆಗಾ..?” ಎಂದಿದೆ.

Exit mobile version