Visit Channel

ಸಿದ್ಧರಾಮಯ್ಯ ಪಕ್ಷ ಬಿಡೋದನ್ನು ನೋಡಲು ನಾನು ಕಾತರದಿಂದ ಕಾಯುತ್ತಿದ್ದೇನೆ; ಎಚ್‌ಡಿಕೆ

Kumaraswamy11572840342

ಬೆಂಗಳೂರು, ಡಿ. 19: ರಾಜ್ಯ ರಾಜಕೀಯದಲ್ಲಿ ಟ್ವೀಟ್‌ ಸಮರ ಹೊಸದೇನಲ್ಲ, ಈಗ ಜೆಡಿಎಸ್ ನಾಯಕ ಕುಮಾರಸ್ವಾಮಿ ಹಾಗೂ ಸಿದ್ದಾರಾಮಯ್ಯ ಅವರ ಮದ್ಯೆ ಮಾತಿನ ಕಾಳಗ  ಟ್ವೀಟ್ ಮೂಲಕ ಮುಂದುವರಿಯುತ್ತಲೇ ಇದೆ.

‘ನಾನು ಇಷ್ಟೊಂದು ಕೆಟ್ಟದಾಗಿ ಸೋಲ್ತೀನಿ ಅಂತ ಭಾವಿಸಿರಲಿಲ್ಲ. ನನ್ನ ಸೋಲಿಗೆ ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದರು. ಜತೆಗೆ ನಮ್ಮ ಪಕ್ಷದ ಕೆಲವರಿಗೆ ನಾನು ಸಿಎಂ ಆಗುವುದು ಬೇಕಿರಲಿಲ್ಲ. ಹಾಗಾಗಿ ನಾನು ಸೋತೆ. ಪಕ್ಷ ವಿರೋಧಿಗಳು ಆತ್ಮಾವಲೋಕನ ಮಾಡಿಕೊಂಡು ಅವರಾಗಿಯೇ ಕಾಂಗ್ರೆಸ್​ನಿಂದ ಹೊರ ಹೋಗಬೇಕು ಎಂದು ನಿನ್ನೆ(ಶುಕ್ರವಾರ) ಮೈಸೂರಿನಲ್ಲಿ ಸಿದ್ದರಾಮಯ್ಯ ಅವರು ಪಕ್ಷದ ಕಾರ್ಯಕರ್ತರ ಜೊತೆ ಮಾತನಾಡುತ್ತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದರ ಬೆನ್ನಲ್ಲೇ ಟ್ವೀಟ್​ ಮೂಲಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಎಚ್​ಡಿಕೆ, ಕೊರಟಗೆರೆ ಯಲ್ಲಿ ಯಾರ ಜತೆ ಒಳ ಒಪ್ಪಂದ ಮಾಡಿಕೊಂಡು ಡಾ. ಜಿ.ಪರಮೇಶ್ವರ್ ಅವರನ್ನ ಸೋಲಿಸಿದ್ರಿ ಅನ್ನೋದರ ಬಗ್ಗೆ ಮೊದಲು ಆತ್ಮಾವಲೋಕನ ಮಾಡಿಕೊಳ್ಳಿ ಎಂದಿದ್ದಾರೆ. 

‘ನನ್ನನ್ನು ಸೋಲಿಸಿದವರು, ಆತ್ಮವಿಮರ್ಶೆ ಮಾಡಿಕೊಂಡು ತಾವೇ ಪಕ್ಷಬಿಟ್ಟು ಹೋಗಬೇಕು’ ಎಂದು ನೀವು ಹೇಳಿದ್ದೀರಿ. 2009-10ರ ಉಪಚುನಾವಣೆ, 2013ರ ಚುನಾವಣೆಗಳಲ್ಲಿ ಒಳ ಒಪ್ಪಂದ ಮಾಡಿಕೊಂಡ ನಿಮ್ಮ ಆತ್ಮವಿಮರ್ಶೆ ಯಾವಾಗ? ಕಾಂಗ್ರೆಸ್‌ ಬಿಡುವುದು ಯಾವಾಗ? ಈಗಾಗಲೇ ಒಂದು ಬಾರಿ ತಾಯಿಯಂಥ ಪಕ್ಷಕ್ಕೆ ದ್ರೋಹ ಮಾಡಿದ ನಿಮ್ಮ ಉತ್ತರ ಕೇಳಲು ಕಾತುರನಾಗಿದ್ದೇನೆ ಎಂದು ಸಿದ್ದರಾಮಯ್ಯಗೆ ಎಚ್​ಡಿಕೆ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯರ ಉಡಾಫೆ ಮಾತುಗಳಿಗೆ ಪ್ರತಿಕ್ರಿಯಿಸದಿರಲು ಇಚ್ಚಿಸಿದ್ದೆ. ಆದರೆ, ಚಾಮುಂಡೇಶ್ವರಿಯಲ್ಲಿನ ಭಾಷಣದಿಂದ ಹೊಮ್ಮಿರುವ ಅವರ ದ್ವಂದ್ವ ನಿಲುವಿನ ಬಗ್ಗೆ ಮಾತಾಡಬೇಕಿದೆ. ಅದರೆ, ಒಳಒಪ್ಪಂದದ ಆರೋಪ, ಕುಮಾರಸ್ವಾಮಿಯನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂಬ ದ್ವಂದ್ವದ ಬಗ್ಗೆ ಮಾತಾಡುವೆ ಎಂದಿರುವ ಕುಮಾರಸ್ವಾಮಿ, ‘ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌-ಬಿಜೆಪಿ ಒಳಒಪ್ಪಂದ ಮಾಡಿಕೊಂಡವು. ಅದರಲ್ಲಿ ಕಾಂಗ್ರೆಸ್ಸಿಗರೂ ಸೇರಿದರು. ಬಾದಾಮಿಯಲ್ಲಿ ನಾನು ಗೆಲ್ಲದಿದ್ದರೆ ಭವಿಷ್ಯ ಕತ್ತಲಾಗುತ್ತಿತ್ತು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗೆ ಒಪ್ಪಂದವಾಗಿದ್ದರೆ, ಅದು ಬಾದಾಮಿಗೂ ಅನ್ವಯಿಸುತ್ತಿರಲಿಲ್ಲವೇ? ಬಾದಾಮಿಯಲ್ಲಿ ಅವರನ್ನು ಗೆಲ್ಲಲು ಬಿಡುತ್ತಿದ್ದವಾ? ಎಂದು ಪ್ರಶ್ನಿಸಿದ್ದಾರೆ. 

‘2018ರಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್​ ಮೈತ್ರಿಯಾಗಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಹೈಕಮಾಂಡ್‌ನ ನಿರ್ಧಾರವಾಗಿತ್ತು’ ಎಂದು ಸಿದ್ದರಾಮಯ್ಯ ಹಲವು ಬಾರಿ ಹೇಳಿದ್ದಾರೆ. ಆದರೆ, ‘ಚಾಮುಂಡೇಶ್ವರಿಯಲ್ಲಿ ಭಾಷಣದ ವೇಳೆ, ‘ನಾನು ಒಪ್ಪದಿದ್ದರೆ ಕುಮಾರಸ್ವಾಮಿ ಸಿಎಂ ಆಗುತ್ತಿರಲಿಲ್ಲ’ ಎಂದಿದ್ದಾರೆ. ಇಲ್ಲಿ ದ್ವಂದ್ವ ಇಲ್ಲವೇ? ಎಂದು ಎಚ್​ಡಿಕೆ ಮರು ಪ್ರಶ್ನೆ ಹಾಕಿದ್ದಾರೆ.

2009-2010ರ 20 ಉಪಚುನಾವಣೆಗಳನ್ನು ಸಿದ್ದರಾಮಯ್ಯ ಒಮ್ಮೆ ಪರಾಮರ್ಶೆ ಮಾಡಲಿ. ಆ ಹೊತ್ತಿನಲ್ಲಿ ತಮ್ಮನ್ನು ಕಾಂಗ್ರೆಸ್‌ ಕಡೆಗಣಿಸಿತ್ತು ಎಂಬ ಕಾರಣಕ್ಕೆ ಅವರು ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಅವರ ಆತ್ಮ ನೆನಪಿಸುತ್ತದೆ. ಅದರ ಪರಿಣಾಮವಾಗಿ ಕಾಂಗ್ರೆಸ್‌ ಎಷ್ಟು ಸ್ಥಾನ ಗೆದ್ದಿತ್ತು ಎಂಬುದನ್ನೂ ಮನದಟ್ಟು ಮಾಡಿಸುತ್ತದೆ. 2013ರ ಚುನಾವಣೆಯತ್ತ ಅವರು ಒಮ್ಮೆ ನೋಡಲಿ. ಆಗ ಅವರು ಯಾರನ್ನೆಲ್ಲ ಸೋಲಿಸಿದ್ದರು, ಕೊರಟಗೆರೆಯಲ್ಲಿ ಯಾರೊಂದಿಗೆ ಒಳ ಒಪ್ಪಂದ ಮಾಡಿಕೊಂಡು, ಯಾರ ಭವಿಷ್ಯವನ್ನು ಕತ್ತಲಲ್ಲಿಟ್ಟಿದ್ದರು ಎಂಬುದನ್ನುತಿಳಿದುಕೊಳ್ಳಲಿ. 2013ರ ಚುನಾವಣೆಯನ್ನುವಿಶ್ಲೇಶಿಸಿದರೆ, ಪಕ್ಷದ್ರೋಹದ ಆಧಾರದ ಮೇಲೆ ಅವರು ಕಾಂಗ್ರೆಸ್‌ ಬಿಡಬೇಕು! ಇದು ಅವರ ದ್ವಂದ್ವ ಎಂದು ಮಾತಿನಲ್ಲೇ ಸಿದ್ದರಾಮಯ್ಯಗೆ ಕುಮಾರಸ್ವಾಮಿ  ಬಾಣಬಿಟ್ಟಿದ್ದಾರೆ.

ಅಷ್ಟೇ ಅಲ್ಲದೆ ನೀವೊಂದು ಪ್ರಾದೇಶಿಕ ಪಕ್ಷ ಕಟ್ಟಿಕೊಂಡು ಹತ್ತು ಸ್ಥಾನ ಗೆದ್ದು ತೋರಿಸಿ ಎಂದು ಹೇಳುವುದರ ಮೂಲಕ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೆ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.