ಹಳ್ಳಿ ಹಳ್ಳಿಗಳಲ್ಲಿ ರಾಮ ಮಂದಿರ (Rama Mandir) ನಿರ್ಮಾಣವಾಗಿದ್ದು ರಾಮ ಭಕ್ತರಿಂದ, ಆದರೆ (Congress-BJP Credit War) ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಿ
ಅದರಿಂದ ಬರುವ ಆದಾಯವನ್ನು ದೋಚಿದ್ದು ನೀವು. ಮಹಾತ್ಮಾ ಗಾಂಧಿಯವರ ರಾಮರಾಜ್ಯದ ಕಲ್ಪನೆಯನ್ನು ಮೂಲೆಗೆ ಸೇರಿಸಿದ್ದು ಕಾಂಗ್ರೆಸ್ (Congress), ಆದರೆ ಇಂದು ರಾಮ ಮಂದಿರ
ನಿರ್ಮಿಸಿ ಅವರ ಕಲ್ಪನೆಗೆ ಜೀವ ತುಂಬಿದ್ದು (Congress-BJP Credit War) ಮೋದಿ ಸರ್ಕಾರ.

ರಾಮ ಮಂದಿರದ ಬೀಗ ತೆಗಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದು ರಾಜೀವ್ ಗಾಂಧಿ (Rajiv Ghandhi)ಯಾದರೆ..!? ರಾಮ ಮಂದಿರದ ವಿರುದ್ಧವಾಗಿ ನ್ಯಾಯಾಲಯದಲ್ಲಿ ದಾವೆ ಹೂಡಲು ಕಪಿಲ್ ಸಿಬಲ್ರನ್ನು
ಕಳುಹಿಸಿದ್ದು ಯಾರು ? ಎಂದು ರಾಜ್ಯ ಬಿಜೆಪಿ (BJP) ಪ್ರಶ್ನಿಸಿದ್ದು, ಕಾಂಗ್ರೆಸ್ ವಿರುದ್ದ ತೀವ್ರ ಟೀಕಾಪ್ರಹಾರ ನಡೆಸಿದೆ.
ಇದಕ್ಕೂ ಮುನ್ನ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್, ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ರಾಮರಾಜ್ಯದ ಕನಸು ಕಂಡ
ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು. ನಾಥುರಾಮ್ ಗೂಡ್ಸೆ (Nathuram Godse) ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ
ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ.

1985-86 ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ. 1989ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್ ಗೆ
ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ. ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ. ದೂರದರ್ಶನದಲ್ಲಿ ರಾಮಾಯಣದ
ಸೀರಿಯಲ್ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಹೇಳಿತ್ತು.
ಇದೀಗ ಕಾಂಗ್ರೆಸ್ಗೆ ಪ್ರತ್ಯುತ್ತರ ನೀಡಿರುವ ಬಿಜೆಪಿ, ಸ್ವಾತಂತ್ರ್ಯ ದೊರಕಿದಾಗಿನಿಂದ ರಾಮ ಮಂದಿರದ ಕಲ್ಪನೆ ದೇಶದ ಜನರಲ್ಲಿತ್ತು, ಅಂದಿನಿಂದ ಇಂದಿನವರೆಗೂ ನಿರ್ಮಾಣವಾಗದ ರಾಮ ಮಂದಿರ
ನಿಮ್ಮ ರಾಜೀವ್ ಗಾಂಧಿ ಕಾಲಘಟ್ಟದಲ್ಲಿ ಯಾಕೆ ಆಗಲಿಲ್ಲ ? ತಡೆದವರು ಯಾರು ? ರಾಮ (Rama) ಮತ್ತು ರಾಮನ ಆದೇಶವನ್ನು ಪಾಲಿಸುತ್ತಾ ಬಂದಿದ್ದರೆ ಕಾಂಗ್ರೆಸ್ ಪಕ್ಷ ರಾಮನನ್ನು ಕೇವಲ
ಕಾಲ್ಪನಿಕ ಎಂದು ಏಕೆ ವ್ಯಂಗ್ಯ ಮಾಡುತ್ತಿತ್ತು ?
ಕಳೆದ 70 ವರ್ಷಗಳಿಂದಲೂ ಹಿಂದುಗಳ ಆದರ್ಶ ಪುರುಷನಾದ ಶ್ರೀ ರಾಮನ ಮಂದಿರ ನಿರ್ಮಾಣ ಮಾಡಲು ಮೀನಾಮೇಷ ಎಣಿಸಿದ್ದು ಕಾಂಗ್ರೆಸ್ಸಿನಿಂದ ಜನರ ನಂಬಿಕೆಗೆ ಆದ ದುರಂತ.
ರಾಮಾಯಣ ಹೇಗೆ ಜನರ ಮನದಲ್ಲಿದೆಯೋ ಹಾಗೆಯೇ ಕಾಂಗ್ರೆಸ್ಸಿಗರ ಸುಳ್ಳಿನ ಸರಪಳಿ ದೇಶದ ಜನತೆಯ ಮನಸ್ಸಿನಲ್ಲಿ ಆಳವಾಗಿದೆ ಎಂದು ಟೀಕಿಸಿದೆ.
ಇದನ್ನು ಓದಿ: NHPC ಲಿಮಿಟೆಡ್ನಿಂದ ಉದ್ಯೋಗಾವಕಾಶ : BE ಪಾಸಾದವರಿಗೆ 50,000 ದಿಂದ 1,60,000 ಭರ್ಜರಿ ವೇತನ