ಕಾಂಗ್ರೆಸ್‌-ಬಿಜೆಪಿ ಟ್ವೀಟ್ ಸಮರ: ಡಿಕೆಶಿ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ

ಬೆಂಗಳೂರು, ಎ. 02: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಟ್ವೀಟ್ ಸಮರ ಮುಂದುವರಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂದು ಆಗ್ರಹಿಸಿದೆ.
ಸಂತ್ರಸ್ಥೆ ನೇರವಾಗಿ ನಿಮ್ಮ 
ಹೆಸರು ಹೇಳಿದ್ದಾರೆ. ಸಂತ್ರಸ್ಥೆಯಪೋಷಕರೂ ನಿಮ್ಮ ಮೇಲೆ ಬೊಟ್ಟು ಮಾಡಿದ್ದಾರೆ. ಈಗ ನಿಮ್ಮದೇ ಪಕ್ಷದ ಮುಖಂಡ ಲಖನ್‌ ಜಾರಕಿಹೊಳಿ ಅವರು ನಿಮ್ಮ ರಾಜಿನಾಮೆ ಕೇಳುತ್ತಿದ್ದಾರೆ. ನೀವು ಮಾಡಿರುವ ಷಡ್ಯಂತ್ರಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕೇ ಎಂದು ಬಿಜೆಪಿ ಪ್ರಶ್ನಿಸಿದೆ.

ಇನ್ನೂ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಆತಂಕ‌ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ಕರೋನಾ 2ನೇ ಅಲೆ ಹೆಚ್ಚಿದೆ. ಸರ್ಕಾರಕ್ಕೆ ದೂರು, ಪ್ರತಿದೂರಿನ ರಂಪಾಟದಲ್ಲಿ ಜನಹಿತಕ್ಕಿಂತ ಸ್ವಹಿತವೇ ಮುಖ್ಯವಾಗಿದೆ. ಕಿತ್ತಾಟದಲ್ಲೇ ಮುಳುಗಿರುವ ಸರ್ಕಾರಕ್ಕೆ ರಾಜ್ಯದಲ್ಲಿನ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇಲ್ಲವಾಗಿದೆ ಎಂದು ಕಿಡಿಕಾರಿದೆ.

ಬಿಜೆಪಿ ಸರ್ಕಾರದ ಕ್ರೋನಾಲಜಿ! ನೆರೆ ಬಂದಾಗ – ಸಂಪುಟವಿಲ್ಲದೆ ಪರದಾಟ ಕರೋನಾ ಬಂದಾಗ – ಕರೋನಾ ಲೂಟಿಗೆ ಕಿತ್ತಾಟ ಆರ್ಥಿಕ ಬಿಕ್ಕಟ್ಟಿನಲ್ಲಿ – ಖಾತೆ ಕಿತ್ತಾಟ ಬೆಲೆ ಏರಿಕೆಯ ಸಂದರ್ಭದಲ್ಲಿ – ಸಿಡಿ ಕಳ್ಳಾಟ ಇದೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಸಿಡಿ ಸರ್ಕಾರಕ್ಕೆ ಸಿಡಿ ಚಿಂತೆ, ಜನತೆಗೆ ಬದುಕು ಉಳಿಸಿಕೊಳ್ಳುವ ಚಿಂತೆ. ಹಲವು ದಿನಗಳಿಂದ ಸಾರಿಗೆ ನೌಕರರ ಬಿಕ್ಕಟ್ಟು ದಿನೇ ದಿನೇ ಹೆಚ್ಚುತ್ತಿದ್ದರೂ ಸಚಿವ ಲಕ್ಷ್ಮಣ್ ಸವದಿ ಕಣ್ ಮುಚ್ಚಿಕೊಂಡು ಕುಳಿತಿದ್ದಾರೆ ಎಂದು ದೂರಿದೆ.

Exit mobile version