ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

Bengaluru : ಮುಂಬರುವ ಕರ್ನಾಟಕ (Karnataka) 2023 ರ ವಿಧಾನಸಭಾ ಚುನಾವಣೆಗೆ (Assembly election) ಕಾಂಗ್ರೆಸ್ 124 ಅಭ್ಯರ್ಥಿಗಳ ಹೆಸರನ್ನು ಶನಿವಾರ ಪ್ರಕಟಿಸಿದೆ. ಈ ನಡುವೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ (Siddaramaiah) ಅವರು ಮೈಸೂರಿನಲ್ಲಿ ವರುಣಾ (Congress candidates list released) ಕ್ಷೇತ್ರದಿಂದ ತಮ್ಮ ಮಗನ ಬದಲಿಗೆ ಸ್ಪರ್ಧಿಸಲಿದ್ದಾರೆ.

ಮೇ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ (Congress) 124 ಅಭ್ಯರ್ಥಿಗಳ ಹೆಸರನ್ನು ಇದೀಗ ಅಧಿಕೃತವಾಗಿ ಪ್ರಕಟಿಸಿದ್ದು,

ಸಿದ್ದರಾಮಯ್ಯ ಅವರು ಮೈಸೂರಿನ ವರುಣಾ ಕ್ಷೇತ್ರದಿಂದ ಮತ್ತು ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ.

ರಾಜ್ಯ ಕಾಂಗ್ರೆಸ್ (State Congress) ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಿದ್ದು, ಯಾವ ಅಭ್ಯರ್ಥಿಗೆ ಯಾವ ಕ್ಷೇತ್ರ ಘೋಷಿಸಿದೆ ಎಂಬ ಮಾಹಿತಿ ತಿಳಿಯುವುದಾದರೆ ಈ ಕೆಳಕಂಡಂತೆ ಇದೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಪುತ್ರ ಪ್ರಿಯಾಂಕ್ ಖರ್ಗೆ ಚಿತಾಪುರದಿಂದ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ : https://vijayatimes.com/renuka-chowdhury-vs-modi/

ಎಂ.ಬಿ.ಪಾಟೀಲ್ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಕ್ರಮವಾಗಿ ಬಬಲೇಶ್ವರ ಮತ್ತು ಗಾಂಧಿನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಪಕ್ಷವು ಹಾಲಿ ಶಾಸಕ ವೆಂಕಟರಮಣಪ್ಪ ಅವರನ್ನು ಕೈಬಿಟ್ಟು ಹೊಸ ಅಭ್ಯರ್ಥಿಗೆ ಟಿಕೆಟ್ ನೀಡಿದೆ. ಬಿಜೆಪಿ ತೊರೆದಿರುವ ಎಂ.ಎಲ್.ಸಿ ಪುಟ್ಟಣ್ಣ ರಾಜಾಜಿನಗರದಿಂದ ಟಿಕೆಟ್ ಪಡೆದುಕೊಂಡಿದ್ದಾರೆ.

ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪ (Union Minister KH Muniyappa) ದೇವನಹಳ್ಳಿಯಿಂದ ಸ್ಪರ್ಧಿಸಲಿದ್ದಾರೆ.

ಮೈಸೂರಿನಲ್ಲಿ ವರುಣವನ್ನು ಪ್ರಸ್ತುತ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸುತ್ತಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಸ್ತುತ ರಾಜ್ಯದ ಉತ್ತರ ಭಾಗದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಡಿ.ಕೆ.ಶಿವಕುಮಾರ್ (DK Sivakumar) ಈಗಾಗಲೇ ಕನಕಪುರದ ಹಾಲಿ ಶಾಸಕ ಎಂಬುದು ತಿಳಿದಿರುವ ಸಂಗತಿಯಾಗಿದೆ.

ಈ ಹಿಂದೆ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಬಹುತೇಕ ಮನಸ್ಸು ಮಾಡಿದ್ದರು.

ತಮ್ಮ ರಾಡಾರ್‌ನಲ್ಲಿರುವ ಕ್ಷೇತ್ರಗಳಲ್ಲಿ ಕೋಲಾರವೂ ಒಂದಾಗಿದ್ದರಿಂದ, ಸಿದ್ದರಾಮಯ್ಯ ಅವರು ಕಳೆದ ಕೆಲವು ತಿಂಗಳುಗಳಿಂದ ತಮ್ಮ ಅಖಾಡವನ್ನು ಸಿದ್ಧಪಡಿಸುತ್ತಿದ್ದರು.

ಫೆಬ್ರವರಿ ತಿಂಗಳಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ಸಲ್ಲಿಸಿದ ಔಪಚಾರಿಕ ಅರ್ಜಿಯಲ್ಲಿ ಸಿದ್ದರಾಮಯ್ಯ (Siddaramaiah) ಅವರು ಬಾದಾಮಿ,

ವರುಣಾ ಮತ್ತು ಕೋಲಾರವನ್ನು ತಾವು ಆಯ್ಕೆ ಮಾಡುವ ಮೂರು ಕ್ಷೇತ್ರಗಳೆಂದು ಉಲ್ಲೇಖಿಸಿದ್ದರು.

ಇದನ್ನೂ ಓದಿ : https://vijayatimes.com/heath-tips-for-summer/

ಈ ಹಿಂದೆ ಸಿದ್ದರಾಮಯ್ಯ ಅವರು ತಮ್ಮ ಹಿಂದಿನ ತವರು ಕ್ಷೇತ್ರವಾದ ವರುಣಾದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು.

ಸ್ಥಾನವನ್ನು ಅಂತಿಮಗೊಳಿಸುವ ಬಗ್ಗೆ ಅವರ ಅನಿಶ್ಚಿತತೆಯು ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯ ಘೋಷಣೆಯನ್ನು ವಿಳಂಬಗೊಳಿಸಿದೆ ಎಂದು ಹೇಳಲಾಗಿದೆ. 2018 ರಲ್ಲಿ ಬಾಗಲಕೋಟೆಯ ಬಾದಾಮಿಯಿಂದ ಗೆಲುವನ್ನು ಸಾಧಿಸಿದ್ದರು. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಸೋತಿದ್ದರು.

Exit mobile version