ಮೋದಿ ಸರ್ಕಾರಕ್ಕೆ ಆರ್ಥಿಕತೆಯಿಗಿಂತ (Congress criticizes on modi distributing toffees) ಪ್ರಚಾರವೇ ಮುಖ್ಯ: ಕಾಂಗ್ರೆಸ್ ಕಿಡಿ
ಖಾಸಗಿ ಹೂಡಿಕೆ ಕುಸಿತ, ಉದ್ಯೋಗ ಸಮಸ್ಯೆ ಹೆಚ್ಚಳದ ನಡುವೆಯೂ ಸರ್ಕಾರ ಗಂಭೀರತೆ ತೋರಿಸುತ್ತಿಲ್ಲ ಎಂದು ಆರೋಪ
ಹಣದುಬ್ಬರ ಮತ್ತು ಚೀನಾ ಆಮದುಗಳಿಂದ ಕೈಗಾರಿಕೆಗಳಿಗೆ ಹೊಡೆತ ಬಿದ್ದಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ
New delhi : ದೇಶದ ಆರ್ಥಿಕ ಪರಿಸ್ಥಿತಿಯನ್ನು ಕಡೆಗಣಿಸಿ ಪ್ರಧಾನಿ ನರೇಂದ್ರ ಮೋದಿ ಜನರ (Congress criticizes on modi distributing toffees) ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇತ್ತೀಚೆಗೆ ವಿದೇಶಿ ನಾಯಕರೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಚಾಕೊಲೇಟ್ (Chocolate) ಮತ್ತು ಟಾಫಿ ಹಂಚಿದ ವಿಚಾರವನ್ನು ಉಲ್ಲೇಖಿಸಿದ ಅವರು, ದೇಶದಲ್ಲಿ ಹಣದುಬ್ಬರ, ಹೂಡಿಕೆ ಕುಸಿತ ಮತ್ತು ನಿರುದ್ಯೋಗದಂತಹ ಗಂಭೀರ ಸಮಸ್ಯೆಗಳು ತಲೆದೋರಿದ್ದರೂ ಸರ್ಕಾರ ಅದಕ್ಕೆ ಸಮರ್ಪಕ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ದೇಶದ ಆರ್ಥಿಕತೆ ಈಗ ಸಂಕಷ್ಟದ ಹಾದಿಯಲ್ಲಿ ಸಾಗುತ್ತಿದೆ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. ವಿದೇಶಿ ನೇರ ಹೂಡಿಕೆಗಳು (FDI) ಇಳಿಮುಖವಾಗುತ್ತಿದ್ದು, ಕೈಗಾರಿಕಾ
ಕ್ಷೇತ್ರದಲ್ಲಿ ಹೂಡಿಕೆದಾರರ ವಿಶ್ವಾಸ ಕುಗ್ಗುತ್ತಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಖಾಸಗಿ ಕಂಪನಿಗಳು ಹೊಸ ಹೂಡಿಕೆ ಮಾಡಲು ಮುಂದೆ ಬರುತ್ತಿಲ್ಲ.
ಇದರಿಂದ ಉದ್ಯೋಗ ಸೃಷ್ಟಿ ಕುಂಠಿತಗೊಂಡಿದ್ದು, ಸಾಮಾನ್ಯ ಜನರ ಖರೀದಿ ಸಾಮರ್ಥ್ಯವೂ ಕಡಿಮೆಯಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ. ವೇತನದಲ್ಲಿ ಏರಿಕೆ
ಕಾಣದಿರುವುದು ಹಾಗೂ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರದ ನೀತಿಗಳೇ ಹೂಡಿಕೆದಾರರಲ್ಲಿ ಭಯ ಮತ್ತು ಅನಿಶ್ಚಿತತೆಯ (Congress criticizes on modi distributing toffees) ವಾತಾವರಣಕ್ಕೆ ಕಾರಣವಾಗಿವೆ ಎಂಬ
ಆರೋಪವೂ ಕೇಳಿಬಂದಿದೆ. ತೆರಿಗೆ ಇಲಾಖೆ, ತನಿಖಾ ಸಂಸ್ಥೆಗಳ ದಾಳಿ ಮತ್ತು ಆಡಳಿತಾತ್ಮಕ ಒತ್ತಡಗಳಿಂದ ಉದ್ಯಮಿಗಳು ಆತಂಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
ನಿರಂತರ ನೀತಿ ಬದಲಾವಣೆಗಳು ಕೈಗಾರಿಕಾ ಬೆಳವಣಿಗೆಗೆ ಅಡ್ಡಿಯಾಗುತ್ತಿವೆ. ಇನ್ನೊಂದೆಡೆ ಚೀನಾದಿಂದ ಆಗುತ್ತಿರುವ ಕಡಿಮೆ ಬೆಲೆಯ ಆಮದುಗಳು ದೇಶೀಯ ಉತ್ಪಾದಕರಿಗೆ
ಹೊಡೆತ ನೀಡುತ್ತಿವೆ. ಇದರಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಜೈರಾಮ್ ರಮೇಶ್ (Jairam Ramesh) ಕಳವಳ ವ್ಯಕ್ತಪಡಿಸಿದ್ದಾರೆ.
ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲಕರ ವಾತಾವರಣ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್, ಸರ್ಕಾರ ಕೆಲವೇ ಉದ್ಯಮ ಗುಂಪುಗಳಿಗೆ ಪ್ರೋತ್ಸಾಹ
ನೀಡುತ್ತಿದೆ ಎಂದು ಟೀಕಿಸಿದೆ. ದೇಶದಲ್ಲಿ ಕಾರ್ಪೊರೇಟ್ ತೆರಿಗೆ ದರ ಕಡಿಮೆಯಾದರೂ ಸಾಮಾನ್ಯ ಜನರಿಗೆ ಅದರ ಲಾಭ ತಲುಪುತ್ತಿಲ್ಲ.
ಷೇರು ಮಾರುಕಟ್ಟೆ ಏರಿಕೆ ಕಂಡರೂ ಅದು ನೆಲಮಟ್ಟದ ಆರ್ಥಿಕ ಪರಿಸ್ಥಿತಿಯನ್ನು ಪ್ರತಿಬಿಂಬಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಸರ್ಕಾರದ ಆರ್ಥಿಕ ನೀತಿಗಳು
ದೊಡ್ಡ ಉದ್ಯಮಿಗಳಿಗೆ ಅನುಕೂಲವಾಗುತ್ತಿವೆ; ಆದರೆ ಮಧ್ಯಮ ವರ್ಗ ಮತ್ತು ಬಡಜನರ ಸಮಸ್ಯೆಗಳು ಕಡೆಗಣನೆಯಾಗುತ್ತಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.
ದೇಶದ ಆರ್ಥಿಕತೆಯನ್ನು ಬಲಪಡಿಸಲು ಆಮೂಲಾಗ್ರ ಬದಲಾವಣೆ ಅಗತ್ಯವಿದೆ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. ಉದ್ಯೋಗ ಸೃಷ್ಟಿ, ಹೂಡಿಕೆ ಉತ್ತೇಜನ ಮತ್ತು ಸಣ್ಣ ಕೈಗಾರಿಕೆಗಳಿಗೆ ಬೆಂಬಲ ನೀಡುವಂತಹ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.
ಆದರೆ ಕೇಂದ್ರ ಸರ್ಕಾರ ಜನರ ನೈಜ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಸ್ವಯಂ ಪ್ರಚಾರದಲ್ಲೇ ತೊಡಗಿಕೊಂಡಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಈ ಹೇಳಿಕೆಗಳು ರಾಜಕೀಯ
ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಕೇಂದ್ರ ಮತ್ತು ಕಾಂಗ್ರೆಸ್ ನಡುವಿನ ವಾಗ್ವಾದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಇದನ್ನು ಓದಿ : https://vijayatimes.com/cockroach-janata-party-viral/