ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ!

Congress

ನವದೆಹಲಿ : ದೆಹಲಿ(New Delhi) ಅಬಕಾರಿ ನೀತಿಯ(Liqour Policy) ಅನುಷ್ಠಾನದಲ್ಲಿ ಭ್ರಷ್ಟಾಚಾರ(Corruption) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ಮನೆ ಮೇಲೆ ಕೇಂದ್ರೀಯ ತನಿಖಾ ದಳ ದಾಳಿ ನಡೆಸಿದ್ದು,

ಈ ತನಿಖೆ ಮುಕ್ತಾಯವಾಗುವವರಿಗೆ ತಮ್ಮ ಸ್ಥಾನಕ್ಕೆ ಮನೀಶ್ ಸಿಸೋಡಿಯಾ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌(Congress) ಒತ್ತಾಯಿಸಿದೆ. ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಕುಮಾರ್ ಅವರು ಮಾತನಾಡಿ, ಶೆಲ್ ಕಂಪನಿಗಳಿಗೆ ಮದ್ಯದ ಪರವಾನಗಿಗಳನ್ನು ಅಕ್ರಮವಾಗಿ ವಿತರಿಸುವಲ್ಲಿ “ಬಹುಕೋಟಿ ಹಗರಣ” ನಡೆದಿರುವುದರ ಕುರಿತು ಕಾಂಗ್ರೆಸ್‌ ಪಕ್ಷವು ಕಳೆದ ಜೂನ್ನಲ್ಲಿಯೇ ಅಂದಿನ ದೆಹಲಿಯ ಪೊಲೀಸ್ ಕಮಿಷನರ್ ರಾಕೇಶ್ ಅಸ್ಥಾನಾ ಅವರಿಗೆ ಪತ್ರ ಬರೆದಿತ್ತು.

ರಾಕೇಶ್ ಅಸ್ಥಾನಾ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಈಗ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆ ಮೇಲೆ ಸುಮಾರು 15 ಗಂಟೆಗಳ ಕಾಲ ದಾಳಿ ನಡೆಸಿ, ಅವರ ಕಂಪ್ಯೂಟರ್, ಫೋನ್ ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಇನ್ನು ಸಿಬಿಐ(CBI) ಅನ್ನು ಮೇಲಿನಿಂದ ನಿಯಂತ್ರಿಸಲಾಗುತ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ, ನನಗೆ ಭಯವಿಲ್ಲ, ನಾನು ಜನರಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಸಿಬಿಐ ನನ್ನ ಫೋನ್ ಮತ್ತು ಕಂಪ್ಯೂಟರ್ ಅನ್ನು ವಶಪಡಿಸಿಕೊಂಡಿದೆ. ನನಗೆ ಲಕ್ಷಾಂತರ ವಿದ್ಯಾರ್ಥಿಗಳ ಕುಟುಂಬಗಳ ಆಶೀರ್ವಾದವಿದೆ.

ಉತ್ತಮ ಆಸ್ಪತ್ರೆಗಳು ಮತ್ತು ಶಾಲೆಗಳ ಮೂಲಕ ಉತ್ತಮ ಸೇವೆಯನ್ನು ನೀಡುವುದನ್ನು ನಾನು ಮುಂದುವರಿಸುತ್ತೇನೆ ಎಂದು ಸಿಬಿಐ ದಾಳಿಯ ನಂತರ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದರು.

Exit mobile version