Karnataka : ಹಿಂದೂಸ್ಥಾನ್ ಟೈಮ್ಸ್(Congress distributing cookers grinders) ಪತ್ರಿಕೆಯ ವರದಿ ಅನುಸಾರ, ವಿಧಾನಸಭಾ ಚುನಾವಣೆಗೆ ದಿನಗಳು ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಮತದಾರರನ್ನು ಸೆಳೆಯಲು ಭಾರಿ ಪ್ರಯತ್ನಗಳನ್ನು ನಡೆಸುತ್ತಿದೆ.
ಈ ಸಾಲಿನಲ್ಲಿ ಕಾಂಗ್ರೆಸ್ ಒಂದು ಹೆಜ್ಜೆ ಮುಂದಿದೆ ಎಂದು ಬಿಜೆಪಿ ನಾಯಕ ಧನಂಜಯ್ ಜಾಧವ್(Dhananjay jadhav) ಆರೋಪಿಸಿದ್ದಾರೆ.

ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಪಕ್ಷ ಮಿಕ್ಸರ್,
ಗ್ರೈಂಡರ್(Congress distributing cookers grinders) ಮತ್ತು ಇತರ ಗೃಹೋಪಯೋಗಿ ಉಪಕರಣಗಳನ್ನು ಹಂಚಲು ಪ್ರಾರಂಭಿಸಿದೆ ಎಂದು ಕರ್ನಾಟಕ ಬಿಜೆಪಿ ನಾಯಕ ಧನಂಜಯ್ ಜಾಧವ್ ಹೇಳಿದ್ದಾರೆ.
ಬೆಳಗಾವಿ (ಗ್ರಾಮೀಣ) ಕ್ಷೇತ್ರದಿಂದ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ವಿರುದ್ಧ ಜಾಧವ್ ಅವರು ಆರೋಪಿಸಿದ್ದು, ತಮ್ಮ ಪ್ರತಿಸ್ಪರ್ಧಿ ವಿರುದ್ಧ ಸರಣಿ ಆರೋಪಗಳನ್ನು ಮಾಡಿದ್ದಾರೆ.
ಗೃಹಪಯೋಗಿ ವಸ್ತುಗಳಾದ ನಾನ್ ಸ್ಟಿಕ್ ಪ್ಯಾನ್‌ಗಳು, ಕುಕ್ಕರ್‍ಗಳು(Cooker) ಮತ್ತು ಮಿಕ್ಸರ್-ಗ್ರೈಂಡರ್‍ಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಈ ಕುರಿತು ಜಾಧವ್ ಅವರು ಕೂಡ ಕೆಲವು ಫೋಟೊಗಳನ್ನು ಹಂಚಿಕೊಂಡಿದ್ದಾರೆ ಎಂದು ನ್ಯೂಸ್ 18(News 18) ವರದಿ ತಿಳಿಸಿದೆ ಎನ್ನಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ಈ ವಸ್ತುಗಳನ್ನು ನೀಡುವ ಮುಖೇನ ತಮ್ಮ ಪಕ್ಷಕ್ಕೆ ಮತ ಹಾಕುವಂತೆ ಕೇಳಿಕೊಳ್ಳುತ್ತಿದ್ದಾರೆ.
ಕುಕ್ಕರ್ ನೀಡಿ ಸಾರ್ವಜನಿಕರಿಂದ ಮತ ಪಡೆಯುವ ಭರವಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಜಾಧವ್ ಹೇಳಿದ್ದಾರೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯ ಗಿಫ್ಟ್! ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರ್ಯಕರ್ತರು ಚುನಾವಣೆಯಲ್ಲಿ ಮಹಿಳಾ ಮತದಾರರನ್ನು ಓಲೈಸಲು ಕುಕ್ಕರ್ ಮತ್ತು ನಾನ್ ಸ್ಟಿಕ್ ತವಾ ಗಿಫ್ಟ್ ನೀಡಿದ್ದಾರೆ ಎಂದು ಬರೆದು ಒಂದು ಖಾತೆ ಟ್ವೀಟ್(Tweet) ಮಾಡಿದೆ.
ಆದ್ರೆ, ಈ ಆರೋಪಗಳಿಗೆ ರಾಜ್ಯ ಕಾಂಗ್ರೆಸ್(Congress) ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ!
ಇದನ್ನೂ ಓದಿ: https://vijayatimes.com/varisu-earns-210-crore/
ಕರ್ನಾಟಕದಲ್ಲಿ ಏಪ್ರಿಲ್-ಮೇ ತಿಂಗಳ ಅವಧಿಯಲ್ಲಿ ಚುನಾವಣೆ ನಡೆಯಲಿದ್ದು, ಮತ್ತೆ ಅಧಿಕಾರಕ್ಕೆ ಬರಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಎಲ್ಲಾ ಗೃಹಿಣಿಯರಿಗೆ ತಿಂಗಳಿಗೆ 2,000 ರೂ.
ನೀಡುವುದಾಗಿ ಭರವಸೆ ನೀಡಿದೆ. ಸದ್ಯ ಈ ಎಲ್ಲಾ ಘೋಷಣೆಗಳನ್ನು ಟೀಕಿಸಿರುವ ರಾಜ್ಯ ಬಿಜೆಪಿ(BJP), ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ವ್ಯಂಗ್ಯವಾಡಿದೆ.