ಕಾಂಗ್ರೆಸ್ ಚುನಾವಣಾ ಅಭ್ಯರ್ಥಿಗಳ ಪಟ್ಟಿ ರೆಡಿ, ತಿಂಗಳಾಂತ್ಯದಲ್ಲಿ ಬಿಡುಗಡೆ : ಸಿದ್ದರಾಮಯ್ಯ

Bengaluru : ಕರ್ನಾಟಕ ವಿಧಾನಸಭೆ ಚುನಾವಣೆಗೆ(Congress election candidates List) ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಗೊಂಡಿದ್ದು,

ಇದೇ ತಿಂಗಳು ಬಿಡುಗಡೆ ಮಾಡುವ ಬಗ್ಗೆ ತಮ್ಮ ಪಕ್ಷ ಚಿಂತನೆ ನಡೆಸುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಮಂಗಳವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಏಪ್ರಿಲ್-ಮೇ ತಿಂಗಳ ವೇಳೆಗೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್(Congress election candidates List) ತನ್ನ ಸ್ವಂತ ಬಲದ ಮೇಲೆ ಗೆದ್ದು ಕರ್ನಾಟಕದಲ್ಲಿ ಸರ್ಕಾರ ರಚಿಸುವ ಬಗ್ಗೆ ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ತಿಂಗಳೊಳಗೆ ಮೊದಲ ಪಟ್ಟಿ ಬಿಡುಗಡೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ.

ಪಕ್ಷಕ್ಕೆ ಟಿಕೆಟ್ ಕೋರಿ 1,350 ಅರ್ಜಿಗಳು ಬಂದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು,

ಕಾಂಗ್ರೆಸ್‌ಗೆ ಹೆಚ್ಚಿನ ಶಕ್ತಿ ಇರುವುದರಿಂದ ಪಕ್ಷದ ಪರ ಅಲೆ ಇರುವುದರಿಂದ ಅನೇಕರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲು ಪಕ್ಷವು ಯೋಜಿಸುತ್ತಿದ್ದು,

ಇದನ್ನೂ ಓದಿ : https://vijayatimes.com/kishores-twitter-account-suspended/

ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್(DK Sivakumar) ಬೆಂಬಲಿತ ಆಕಾಂಕ್ಷಿಗಳ ನಡುವೆ ಪೈಪೋಟಿ ಕಂಡುಬರುತ್ತಿದ್ದು,

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಮತ್ತು‌ ಡಿ.ಕೆ ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಹುದ್ದೆಯ ಮಹತ್ವಾಕಾಂಕ್ಷೆಯಲ್ಲಿದ್ದಾರೆ ಎಂಬುದು ಹಲವರಲ್ಲಿ ಗೊಂದಲದ ಪ್ರಶ್ನೆಯಾಗಿ ಕಾಡುತ್ತಿದೆ ಎಂಬುದರಲ್ಲಿ ಕಿಂಚಿತ್ತು ಅನುಮಾನವಿಲ್ಲ!

ಪಕ್ಷದ ಮೂಲಗಳ ಪ್ರಕಾರ, ಎರಡೂ ಪಾಳಯಗಳ ಆಕಾಂಕ್ಷಿಗಳು ಸುಮಾರು 80 ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದು, ಸುಮಾರು 30-35 ಕ್ಷೇತ್ರಗಳಲ್ಲಿ ಸ್ಪರ್ಧೆಯು ತೀವ್ರವಾಗಿದೆ ಎಂದು ಅಂದಾಜಿಸಲಾಗಿದೆ.

ಟಿಕೆಟ್ ಹಂಚಿಕೆಗೆ ಗೆಲುವೇ ಮುಖ್ಯ ಮಾನದಂಡ ಎಂದು ಕಾಂಗ್ರೆಸ್ ನಿರ್ಧರಿಸಿದೆ ಎಂದು ಹೇಳಲಾಗುತ್ತದೆ ಮತ್ತು ಅಭ್ಯರ್ಥಿಗಳನ್ನು ನಿರ್ಧರಿಸಲು ಆಂತರಿಕ ಸಮೀಕ್ಷೆಗಳ ಮೇಲೆ ಬ್ಯಾಂಕ್ ಮಾಡುವ ಸಾಧ್ಯತೆಯಿದೆ,

69 ಹಾಲಿ ಶಾಸಕರಲ್ಲಿ ಹೆಚ್ಚಿನವರನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಹೇಳಿದೆ. ಸದ್ಯ ರಾಜ್ಯ ಕಾಂಗ್ರೆಸ್‌(State Congress) ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಮುಂದಿನ ತಿಂಗಳು ಘೋಷಿಸಲು ಮುಂದಾಗಿದ್ದು, ಜೆಡಿಎಸ್(JDS) ಈಗಾಗಲೇ 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಈಗಾಗಲೇ ಪ್ರಕಟಿಸಿದ್ದು, ಆಡಳಿತಾರೂಢ ಬಿಜೆಪಿ ಇನ್ನೂ ನಿರ್ಧರಿಸಿಲ್ಲ ಎಂಬುದು ಇಲ್ಲಿ ಗಮನಾರ್ಹ!

Exit mobile version