ಉಚಿತ ವಿದ್ಯುತ್‌ ಗ್ಯಾರಂಟಿ ; ಎಲೆಕ್ಟ್ರಿಕ್ ಉತ್ಪನ್ನಗಳ ಖರೀದಿ ಪ್ರಮಾಣ ಗಣನೀಯವಾಗಿ ಏರಿಕೆ

Bengaluru : ಕಾಂಗ್ರೆಸ್‌ ಸರ್ಕಾರ (Congress Govt) ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಗೆ 200 ಯೂನಿಟ್‌ ಉಚಿತ ವಿದ್ಯುತ್‌ (200 units of electricity) ನೀಡುತ್ತೇವೆ ಎಂದು ಕಾಂಗ್ರೆಸ್‌ ಗ್ಯಾರಂಟಿ (Congress guarantee) ನೀಡಿರುವುದರ ಪರಿಣಾಮ ಇದೀಗ ರಾಜ್ಯಾದ್ಯಂತ (Congress Guarantee on freeElectricity) ಎಲ್ಲೆಡೆ ಎಲೆಕ್ಟ್ರಿಕ್ ಉತ್ಪನ್ನಗಳ ಖರೀದಿ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ.

ರಾಜ್ಯದ ಎಲ್ಲೆಡೆ ವಿದ್ಯುತ್ ಉಕರಣಗಳಿಗೆ ಬೇಡಿಕೆ ಹೆಚ್ಚಾಗಿದ್ದು ಫ್ರಿಜ್, ಎಸಿ, ಎಲೆಕ್ಟ್ರಿಕ್ ಒಲೆ, ಫ್ಯಾನ್‌ಗಳ ಖರೀದಿ ಭರಾಟೆ ಜೋರಾಗಿದೆ.

ಸರ್ಕಾರ ಉಚಿತವಾಗಿ ನೀಡುವ 200 ಯೂನಿಟ್‌ ವಿದ್ಯುತ್‌ ಅನ್ನು ಸದುಪಯೋಗಪಡಿಸಿಕೊಳ್ಳಲು ಮತದಾರರು (Congress Guarantee on freeElectricity) ಮುಂದಾಗಿದ್ದಾರೆ.

ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳನ್ನು ನಂಬಿಕೊಂಡು ಮತಹಾಕಿದ ಮತದಾರರು ಈಗ ಅವುಗಳ ಪ್ರಯೋಜನ ಪಡೆಯಲು ಮುಗಿಬಿದ್ದಿದ್ದಾರೆ.

ಅದರಲ್ಲೂ 200 ಯೂನಿಟ್ ಉಚಿತ ವಿದ್ಯುತ್ ಸದ್ಬಳಕೆಗೆ ಜನ ಮುಂದಾಗಿದ್ದು, ಗ್ಯಾಸ್‌ ಬಿಟ್ಟು ವಿದ್ಯುತ್‌ ಒಲೆ ಬಳಕೆಗೆ ಮುಂದಾಗಿದ್ದಾರೆ.

ಇನ್ನೊಂದೆಡೆ ರಾಜ್ಯದ ಬಹುತೇಕ ಗ್ರಾಮಗಳಲ್ಲಿ ವಿದ್ಯುತ್‌ ಬಿಲ್‌ ಕಟ್ಟಲು ಜನರು ಮುಂದಾಗುತ್ತಿಲ್ಲ.

ಸರ್ಕಾರದ ಅಧಿಕೃತ ಆದೇಶ ಇನ್ನೂ ಬಂದಿಲ್ಲವಾದರೂ, ಜನರು ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್‌ (DK Shivakumar) ಘೋಷಣೆ ಮಾಡಿದ್ದಾರೆ, ಹೀಗಾಗಿ ನಾವು ಬಿಲ್‌ ಕಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ : https://vijayatimes.com/brahim-quits-as-jds-statechief/

ಪ್ರತಿ ಮನೆ ಅಂದಾಜು 30-50 ಯೂನಿಟ್‌ವಿದ್ಯುತ್‌ಬಳಕೆ ಮಾಡುತ್ತದೆ. ಆದರೆ ಕಾಂಗ್ರೆಸ್‌ ಸರ್ಕಾರ 200 ಯೂನಿಟ್‌ ನೀಡಿರುವುದು ಜನರ ಬಳಕೆಯ ವ್ಯಾಪ್ತಿಯನ್ನು ಹೆಚ್ಚಿಸಿದೆ.

ಮುಂದಿನ ದಿನಗಳಲ್ಲಿ ಜನರು ಹಗಲು-ರಾತ್ರಿ ಎನ್ನದೇ ವಿದ್ಯುತ್‌ ಬಳಕೆ ಮಾಡಿದರೂ, 200 ಯೂನಿಟ್‌ ತಲುಪುವುದು ಕಷ್ಟ ಎನ್ನಲಾಗುತ್ತಿದೆ.

ಹೀಗಾಗಿ ಜನರು 200 ಯೂನಿಟ್‌ ಉಚಿತ ವಿದ್ಯುತ್‌ಅನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ತಯಾರಿ ಆರಂಭಿಸಿದ್ದಾರೆ.

ರಾಜ್ಯದ ಹಳ್ಳಿ ಮತ್ತು ನಗರ ಪ್ರದೇಶದ ಜನ ಕಳೆದ ತಿಂಗಳಿಗಿಂತ ಈ ತಿಂಗಳು ಅತಿ ಹೆಚ್ಚು ವಿದ್ಯುತ್ ಬಳಕೆ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ.

ಕಳೆದ 10 ದಿನಗಳಲ್ಲಿ ಎಲೆಕ್ಟ್ರಿಕ್ ಉತ್ಪನ್ನಗಳ ಖರೀದಿ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ ಎನ್ನಲಾಗಿದೆ.

ರಾಜ್ಯದ ಪ್ರತಿ ಮನೆಗೆ 200 ಯೂನಿಟ್‌ ಉಚಿತ ವಿದ್ಯುತ್‌ನೀಡಿದರೆ, ರಾಜ್ಯದಲ್ಲಿ ಅದರ ಸಂಪೂರ್ಣ ಸದುಪಯೋಗಪಡಿಸಿಕೊಳ್ಳಲು ಜನರು ಮುಂದಾದರೆ,

ಇಡೀ ಇಂಧನ ಇಲಾಖೆಯೇ ದಿವಾಳಿಯಾಗುವ ಸಾಧ್ಯತೆಯಿದೆ. ಇನ್ನೊಂದೆಡೆ ರಾಜ್ಯದ ವಿದ್ಯುತ್‌ ಬೇಡಿಕೆ ತೀವ್ರ ಪ್ರಮಾಣದಲ್ಲಿ ಹೆಚ್ಚಾಗುವ ಸಾಧ್ಯತೆಯಿದ್ದು, ಬಂಡವಾಳ ಇಲ್ಲದೇ, ಸರ್ಕಾರ ಅದನ್ನು ಹೇಗೆ ಉತ್ಪಾದಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Exit mobile version