12 ವರ್ಷಗಳ ಬಳಿಕ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ

ಬೆಂಗಳೂರು ನ 12 : ಸುಮಾರು 12 ವರ್ಷಗಳ ಬಳಿಕ ನವೆಂಬರ್ 14ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಆರಂಭವಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ಗುರುವಾರ ಹೇಳಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸುಮಾರು 12 ವರ್ಷಗಳ ನಂತರ ಸದಸ್ಯತ್ವ ಅಭಿಯಾನವನ್ನು ಅರಂಭವಾಗಲಿದ್ದು, ಈ ಅಭಿಯಾನವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಎಸ್.ಆರ್.ಪಾಟೀಲ್, ಮಲ್ಲಿಕಾರ್ಜುನಖರ್ಗೆ ಸೇರಿ ಎಲ್ಲಾ ನಾಯಕರು, ಶಾಸಕರು, ಮುಖಂಡರು ಭಾಗವಹಿಸಲಿದ್ದಾರೆ.

ಶಿವಮೊಗ್ಗ ಜಿಲ್ಲೆಯಿಂದಲೂ ಎಲ್ಲಾ ಕಾಂಗ್ರೆಸ್ ಮುಖಂಡರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ತು ಸದಸ್ಯರು ಎಲ್ಲಾ ಘಟಕಗಳ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆ ಪ್ರತಿನಿಧಿಗಳು ಅಭಿಯಾನದಲ್ಲಿ ಭಾಗವಹಿಸಲಿದ್ದಾರೆಂದು ತಿಳಿಸಿದರು.

ಶಿವಮೊಗ್ಗದಲ್ಲಿಯೂ ನ.19ರಿಂದ ಇಂದಿರಾ ಗಾಂಧಿ ಅವರ ಹುಟ್ಟುಹಬ್ಬದ ದಿನದಂದು ಸದಸ್ಯತ್ವ ಅಭಿಯಾನ ಆರಂಭವಾಗಲಿದೆ.ಎರಡು ತಿಂಗಳ ಕಾಲ ಈ ಅಭಿಯಾನ ನಡೆಯಲಿದೆ. ಬಿಜೆಪಿ ಸರ್ಕಾರದ ವೈಫಲ್ಯವನ್ನು ಗ್ರಾಮಮಟ್ಟದಲ್ಲಿ ಜನರಿಗೆ ತಿಳಿಸಲು ಪಕ್ಷ ನಿರ್ಧರಿಸಿದ್ದು, ಸ್ವಾತಂತ್ರ್ಯ ನಂತರ ಮತ್ತು ಪೂರ್ವದಲ್ಲಿ ಪಕ್ಷದ ಕೊಡುಗೆಯನ್ನು ತಿಳಿಸಲು ಪಕ್ಷದ ನಾಯಕರಿಂದ ಗ್ರಾಮವಾಸ್ತವ್ಯ ನಡೆಯಲಿದೆ ಎಂದು ಮಾಹಿತಿ ನೀಡಿದರು.

Exit mobile version