ರಾಮಮಂದಿರ ಕಾರ್ಯಕ್ರಮಕ್ಕೆ ಹೋಗದಿರುವ ಪಕ್ಷದ ನಿಲುವಿನಿಂದ ಅಸಮಾಧಾನಗೊಂಡು ಗುಜರಾತ್ ಕಾಂಗ್ರೆಸ್ ಶಾಸಕ ರಾಜೀನಾಮೆ

Ahmedabad: ಗುಜರಾತ್ನ (Congress MLA CJ Chavda Resigned) ಹಿರಿಯ ಕಾಂಗ್ರೆಸ್ ಶಾಸಕ ಸಿಜೆ ಚಾವಡಾ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗದಿರುವ

ಕಾಂಗ್ರೆಸ್ (Congress) ಪಕ್ಷದ ಧೋರಣೆಯಿಂದ ಅಸಮಾಧಾನಗೊಂಡು ತಮ್ಮ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಗುಜರಾತ್ನ ವಿಜಾಪುರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಬೆಳಗ್ಗೆ ಗಾಂಧಿನಗರದಲ್ಲಿ ವಿಧಾನಸಭಾ ಸ್ಪೀಕರ್ ಶಂಕರ್ ಚೌಧರಿ (Shankar Choudhary)

ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎಂದು ರಾಜ್ಯ (Congress MLA CJ Chavda Resigned) ವಿಧಾನಸಭೆಯ ಅಧಿಕಾರಿ ತಿಳಿಸಿದ್ದಾರೆ.

ಇನ್ನು ಶಾಸಕ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಕುರಿತು ಮಾತನಾಡಿದ ಸಿಜೆ ಚಾವಡಾ (CJ Chavada), ನಾನು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದೇನೆ. ನಾನು 25

ವರ್ಷಗಳಿಂದ ಕಾಂಗ್ರೆಸ್ನಲ್ಲಿ ಕೆಲಸ ಮಾಡಿದ್ದೇನೆ. ಆದರೆ ಇಂದು ಕಾಂಗ್ರೆಸ್ ಪಕ್ಷ ಸಾಗುತ್ತಿರುವ ದಾರಿ ನನಗೆ ಸರಿ ತೋರುತ್ತಿಲ್ಲ. ಶ್ರೀರಾಮಮಂದಿರದಲ್ಲಿ ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠಾದಿಂದ ಇಡೀ

ದೇಶದ ಜನರು ಸಂತೋಷಪಡುತ್ತಾರೆ. ಜನರಲ್ಲಿ ಸಂತಸದ ಅಲೆ ಇದೆ.

ಆದರೆ ಕಾಂಗ್ರೆಸ್ ಪಕ್ಷ ಇದರಿಂದ ದೂರ ಉಳಿಯವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ಪ್ರಧಾನಿ ಮೋದಿ (Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ಉತ್ತಮ

ಕೆಲಸಗಳು ಮತ್ತು ನೀತಿಗಳನ್ನು ನಾವು ಬೆಂಬಲಿಸಬೇಕು. ಆದರೆ ಕಾಂಗ್ರೆಸ್ನಲ್ಲಿದ್ದಾಗ ನಾನು ಅದನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ನಾನು ರಾಜೀನಾಮೆ ನೀಡಿದ್ದೇನೆ ಎಂದು ಅವರು ಹೇಳಿದರು.

ಚಾವ್ಡಾ ಅವರ ರಾಜೀನಾಮೆಯೊಂದಿಗೆ, 182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರ ಸಂಖ್ಯೆ ಈಗ 15ಕ್ಕೆ ಇಳಿದಿದೆ. ಇದಕ್ಕೂ ಮುನ್ನ ಆನಂದ್ ಜಿಲ್ಲೆಯ ಖಂಭತ್ನ

ಕಾಂಗ್ರೆಸ್ ಶಾಸಕ ಚಿರಾಗ್ ಪಟೇಲ್ (Chirag Patel) ಕೂಡ ವಿಧಾನಸಭೆಗೆ ರಾಜೀನಾಮೆ ನೀಡಿದ್ದರು. ಏತನ್ಮಧ್ಯೆ, ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನಾ ಸಮಾರಂಭವು ಜನವರಿ 22 ರಂದು

ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದೇಶದ ಸುಮಾರು 3500ಕ್ಕೂ ಗಣ್ಯರು ಭಾಗಿಯಾಗಲಿದ್ದಾರೆ. ಜನವರಿ 22ರ ನಂತರ ದೇವಾಲಯವನ್ನು ಸಾರ್ವಜನಿಕರಿಗೆ ತೆರೆಯುವ ನಿರೀಕ್ಷೆಯಿದೆ.

ಇದನ್ನು ಓದಿ: ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿಯಿಂದ ಬ್ಯಾಂಕ್ ವಂಚನೆ ಆರೋಪ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Exit mobile version