ಕಳ್ಳನ ಮನಸು ಹುಳ್ಳುಳ್ಳಗೆ: ಸಚಿವ ಡಿ.ವಿ.ಸದಾನಂದಗೌಡ ವಿರುದ್ಧ ಕಾಂಗ್ರೆಸ್ ಲೇವಡಿ

ಬೆಂಗಳೂರು, ಜು. 03: ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭ ಮಾಧ್ಯಮಗಳಲ್ಲಿ ಸಿಡಿ ವಿಚಾರವಾಗಿ ನನ್ನ ವಿರುದ್ಧ ಮಾನಹಾನಿ ವರದಿ ಪ್ರಕಟಿಸುವ ಸಾಧ‍್ಯತೆ ಇರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಸಿಟಿ ಸಿವಿಲ್ ಕೋರ್ಟ್ ನಲ್ಲಿ ತಡೆಯಾಜ್ಞೆ ಪಡೆದಿದ್ದಾರೆ.

ತಡೆಯಾಜ್ಞೆ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ವಿ. ಸದಾನಂದಗೌಡ ಅವರನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. ಕಳ್ಳನ ಮನಸು ಹುಳ್ಳುಳ್ಳಗೆ ಎಂಬಂತೆ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಸಿಡಿ ಬಿಡುಗಡೆಯಾಗದಂತೆ ತಡೆಯಾಜ್ಞೆ ತಂದಿದ್ದಾರೆ, ತಡೆಯಾಜ್ಞೆ ತಂದ ಬಿಜೆಪಿಗರಲ್ಲಿ ಇವರು ಏಳನೆಯವರು ಎಂದು ಕಾಂಗ್ರೆಸ್ ಟೀಕಿಸಿದೆ.

ಬಿಜೆಪಿಯವರಿಗೆ ಏಕೆ ಈ ಪರಿ ಸಿಡಿ ಭಯ ಕಾಡುವುದು ಎಂಬದೇ ಯಕ್ಷಪ್ರಶ್ನೆ. ತಡೆಯಾಜ್ಞೆ ತರುವ ಮೂಲಕ ತಮ್ಮದೂ ಸಿಡಿ ಇದೆ ಎಂದು ಗೌಡರು ಸ್ವಯಂ ಒಪ್ಪಿಕೊಂಡಂತಾಗಿದೆ ಎಂದು ಟೀಕಿಸಿದೆ.

Exit mobile version