Bengaluru: 2023ರ ವಿಧಾನಸಭಾ ಚುನಾವಣೆಗೂ ಮುನ್ನ “ ನಾ ನಾಯಕಿ “ ಎಂದು ಕಾರ್ಯಕ್ರಮ (congress na nayaki scheme) ಹಮ್ಮಿಕೊಂಡಿದ್ದ ರಾಜ್ಯ ಕಾಂಗ್ರೆಸ್, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ,

ಆಶಾ ಕಾರ್ಯಕರ್ತೆಯರ ವೇತನವನ್ನು 8 ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಣೆ ಮಾಡಿತ್ತು. ಆದರೆ ಇದೀಗ ಸಚಿವ ದಿನೇಶ್ ಗುಂಡೂರಾವ್ ಸದ್ಯಕ್ಕೆ ಆಶಾ ಕಾರ್ಯಕರ್ತೆಯರ
ವೇತನ ಹೆಚ್ಚಳ ಮಾಡುವುದಿಲ್ಲ ಎಂದು ವಿಧಾನಪರಿಷತ್ ನಲ್ಲಿ (congress na nayaki scheme) ಸ್ಪಷ್ಪಪಡಿಸಿದರು.
ವಿಧಾನಪರಿಷತ್ ನಲ್ಲಿ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಕೆ. ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ 41,119 ಆಶಾ ಕಾರ್ಯಕರ್ತೆಯರು
ಇದನ್ನು ಓದಿ: ಬೆಂಗಳೂರಿಗರೇ ಗಮನಿಸಿ, ಒಂದು ತಿಂಗಳು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಬಂದ್
ಕೆಲಸ ಮಾಡುತ್ತಿದ್ದಾರೆ. ಕಾರ್ಯ ನಿರ್ವಹಣೆ ಆಧಾರದಲ್ಲಿ ಪ್ರತಿ ತಿಂಗಳು ರೂಪಾಯಿ 5,000 ಗೌರವ ಧನ ನೀಡಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡುವ ಪ್ರಸ್ತಾವ ಸರ್ಕಾರದ
ಮುಂದೆ ಇಲ್ಲ. ಅದರ ಬದಲಾಗಿ ಆಶಾ ಕಾರ್ಯಕರ್ತೆಯರು ಗ್ಯಾರಂಟಿ ಯೋಜನೆಗೆ ಅರ್ಜಿ ಹಾಕಬಹುದು. ಅದರ ಲಾಭವನ್ನು ಅವರು ಪಡೆದುಕೊಳ್ಳಬಹುದು. ಇನ್ನು ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ನೀಡಬೇಕೆಂಬ
ಬೇಡಿಕೆಯಿದೆ. ಆದರೆ ಪಿಂಚಣಿ ನೀಡುವ ವ್ಯವಸ್ಥೆ ರೂಪಿಸಲು ಸಾಧ್ಯವಿಲ್ಲ. ಏಕೆಂದರೆ ಅವರು ಸರ್ಕಾರಿ ಉದ್ಯೋಗಿಗಳಲ್ಲ. ಅವರು ಸರ್ಕಾರಿ ಉದ್ಯೋಗಿಗಳಾಗಿದ್ದರೆ ಪಿಂಚಣಿ ಸಿಗುತ್ತಿತ್ತು. ಸದ್ಯ ಇರುವ ನಿಯಮದ
ಪ್ರಕಾರ ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ನೀಡಲು ಸಾಧ್ಯವಿಲ್ಲ ಎಂದಿದ್ಧಾರೆ.

ವಿಧಾನಸಭಾ ಚುನಾವಣೆಯಲ್ಲಿಪ್ರಿಯಾಂಕಾ ಗಾಂಧಿ ಹೇಳಿದ್ದೇನು?
2023ರ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಬೆಳಗಾವಿಯ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ವೇತನ ಹೆಚ್ಚಳ ಮಾಡಲಾಗುವುದು
ಎಂದು ಘೋಷಣೆ ಮಾಡಿದ್ದರು.
ಇದೇ ವೇಳೆ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಆಯುಷ್ ಇಲಾಖೆಯಲ್ಲಿ ತಜ್ಞ ವೈದ್ಯರು, ಸಿಬ್ಬಂದಿ ಸೇವೆ ಕಾಯಂಗೊಳಿಸಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದರು. ರಾಷ್ಟ್ರೀಯ ಆಯುಷ್ ಅಭಿಯಾನದಡಿ
113 ತಜ್ಞ ವೈದ್ಯರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಯೋಜನೆ ತಾತ್ಕಾಲಿಕವಾಗಿದ್ದು, ವೈದ್ಯ ಹುದ್ದೆಗಳನ್ನು ಕಾಯಂ ಮಾಡಲು ಸಾಧ್ಯವಿಲ್ಲ. ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ
ಮಾಡುವಾಗ ವಿಶೇಷ ನೇಮಕಾತಿ ನಿಯಮ ರೂಪಿಸಿ, ವಯೋಮಿತಿ ಸಡಿಲಿಕೆಯ ಅವಕಾಶ ಕಲ್ಪಿಸಲಾಗಿದೆ ಎಂದರು.