ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಂತೆ ರಾಷ್ಟ್ರಮಟ್ಟದಲ್ಲಿ 25 ಗ್ಯಾರಂಟಿ ಜಾರಿ: ಮಲ್ಲಿಕಾರ್ಜುನ ಖರ್ಗೆ

Kolar: ಲೋಕಸಭಾ ಚುನಾವಣೆಯ ಹಿನ್ನೆಲೆ ಇಂದು ಕೋಲಾರದಲ್ಲಿ (congress new 25 guarantees) ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಖರ್ಗೆ, ಈ ಲೋಕಸಭಾ ಚುನಾವಣೆಯಲ್ಲಿ

ಕಾಂಗ್ರೆಸ್ ಪಕ್ಷವನ್ನು ಮತದಾರರು ಅಧಿಕಾರಕ್ಕೆ ತಂದರೆ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿಯವರು (Rahul Gandhi) 25 ಗ್ಯಾರಂಟಿಗಳನ್ನು ಜಾರಿಗೊಳಿಸಲು ಕಟಿಬದ್ಧರಾಗಿದ್ದಾರೆ. ಒಂದು ವೇಳೆ

ಬಿಜೆಪಿ ಅಧಿಕಾರಕ್ಕೆ ಬಂದರೆ (congress new 25 guarantees) ಸಂವಿಧಾನ ಬದಲಾಗುತ್ತದೆ.ಪ್ರಜಾಪ್ರಭುತ್ವ (Indian Constitution) ಕೂಡಾ ಉಳಿಯುವುದಿಲ್ಲ.

ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ರಕ್ಷಣೆಯಾಗಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ.ಇದಕ್ಕು ಮುನ್ನ

ಮತದಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಚುನಾವಣೆಯಲ್ಲಿ (Lok Sabha Elelction 2024 )ಕಾಂಗ್ರೆಸ್ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬಂದರೆ, ಪ್ರತಿ

ಕುಟುಂಬದ ಹಿರಿಯ ಮಹಿಳೆಗೆ ವಾರ್ಷಿಕ ಒಂದು ಲಕ್ಷ ರೂ. ಜಾತಿ ಗಣತಿ, ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರಿಗೆ ಎಲ್ಲಾ ಸ್ತರದ ಉದ್ಯೋಗದಲ್ಲಿ ಅವಕಾಶ ನೀಡಲಾಗುವುದು ಎಂದರು.

ಇದೇ ವೇಳೆ ಪ್ರಧಾನಿ ಮೋದಿ (Modi) ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ದೇಶದಲ್ಲಿ 25 ಶ್ರೀಮಂತ ಬಂಡವಾಳ ಶಾಹಿಗಳಿದ್ದು, ಮೋದಿ ಈ ಕಾರ್ಪೊರೇಟ್ ಕಂಪನಿಗಳ (corporate company)

16 ಲಕ್ಷ ಕೋಟಿ ರೂ. ಸಾಲಮನ್ನಾ ಮಾಡಿದ್ದಾರೆ. ನರೇಗಾ ಯೋಜನೆಯಡಿ 25 ವರ್ಷಗಳಲ್ಲಿ ಮಾಡಬಹುದಾದ ಕಾಮಗಾರಿಗಳಷ್ಟು ಹಣವನ್ನು ಈ ಶ್ರೀಮಂತರಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

5 ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡವರಿಗೆ, ಮಹಿಳೆಯರಿಗೆ, ಯುವಕರಿಗೆ ಅನುಕೂಲವಾಗಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ರೈತರಿಗೆ ನ್ಯಾಯ ಸಿಕ್ಕಿಲ್ಲ. ಕನ್ಯಾಕುಮಾರಿಯಿಂದ

ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ (Bharat Jodo Yatra) ಮಾಡಿದ್ದು, ಈ ವೇಳೆ ರೈತರ ಸಂಕಷ್ಟ ನೋಡಿದ್ದೇನೆ ಒಳ್ಳೆಯದೇ ಮಾಡುತ್ತೇನೆ.ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಹಾಗಾಗಿ

ಕಾಂಗ್ರೆಸ್ ಗೆ ಮತದಾನ ಮಾಡಿ ಎಂದು ವಿನಂತಿ ಮಾಡಿಕೊಂಡಿದ್ದಾರೆ.

ಇದನ್ನು ಓದಿ: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ ಶಿಕ್ಷಕ.

Exit mobile version