New Delhi : ಕಾಂಗ್ರೆಸ್ ಪಕ್ಷದ (Congress Party) ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಒಂದು ದಿನದ ನಂತರ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ (ಎಲ್ಒಪಿ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

“ಒಬ್ಬ ನಾಯಕನಿಗೆ ಒಂದು ಹುದ್ದೆ” ಎಂಬ ಉದಯಪುರ ಅಧಿವೇಶನದ ನಿರ್ಣಯದಂತೆ, ಮಲ್ಲಿಕಾರ್ಜುನ್ ಖರ್ಗೆ ಅವರು ತಮ್ಮ ರಾಜೀನಾಮೆಯನ್ನು ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರಿಗೆ ಕಳುಹಿಸಿದ್ದಾರೆ.
ಇದನ್ನೂ ಓದಿ : https://vijayatimes.com/will-jio-customers-get-5g/
ಈ ರಾಜೀನಾಮೆಯನ್ನು ಸೋನಿಯಾ ಗಾಂಧಿ ಅವರು ಅಂಗೀಕರಿಸುವ ಸಾಧ್ಯತೆ (Congress Presidential Election) ಇದ್ದು, ಹೊಸ ರಾಜ್ಯಸಭಾ ವಿರೋಧ ಪಕ್ಷದ ನಾಯಕನ ಆಯ್ಕೆ ಸಂಬಂಧ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಇನ್ನು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ಶಶಿ ತರೂರ್ ಮತ್ತು ಕೆಎನ್ ತ್ರಿಪಾಠಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಆದರೆ, ಜಿ-23 ನಾಯಕರಾದ ಪೃಥಿವಿರಾಜ್ ಚವಾಣ್, ಮನೀಶ್ ತಿವಾರಿ ಮತ್ತು ಭೂಪಿಂದರ್ ಹೂಡಾ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಉಮೇದುವಾರಿಕೆಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಏತನ್ಮಧ್ಯೆ, ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್ನಲ್ಲಿದ್ದ ದಿಗ್ವಿಜಯ ಸಿಂಗ್ (Congress Presidential Election) ಅವರು ಪಕ್ಷದ ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಉಮೇದುವಾರಿಕೆಯನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.
https://fb.watch/fTCZHCFreh/ COVER STORY | ಪೋಷಕರೇ ಎಚ್ಚರ!
ಸದ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ, ಮಲ್ಲಿಕಾರ್ಜುನ್ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಮುಂದಿನ ಅಧ್ಯಕ್ಷರಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಎಂಟು ಬಾರಿ ಶಾಸಕ, ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯ, ರಾಜ್ಯ ಗೃಹ ಸಚಿವ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವವನ್ನು ಮಲ್ಲಿಕಾರ್ಜುನ್ ಖರ್ಗೆ ಹೊಂದಿದ್ದಾರೆ.
- ಮಹೇಶ್.ಪಿ.ಎಚ್