ಬೆಂಗಳೂರು ಸೆ 24 : ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಎತ್ತಿನಗಾಡಿ, ಸೈಕಲ್ ಮೂಲಕ ಪ್ರತಿಭಟನೆ ಮಾಡಿದ್ದರು ಇದೀಗ ಮತ್ತೆ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಚೇರಿಯಿಂದ ಟಾಂಗಾದಲ್ಲೇ ವಿಧಾನಸೌಧಕ್ಕೆ ಡಿಕೆಶಿ ಸಿದ್ದು ಎಂಟ್ರಿ ಕೊಟ್ಟಿದ್ದಾರೆ. ಡಿಕೆಶಿ ಸಿದ್ದುಗೆ ಕಾಂಗ್ರೆಸ್ ಎಂಎಲ್‌ಎ ಹಾಗೂ ಎಂಎಲ್‌ಸಿಗಳು ಸಾಥ್ ಕೊಟ್ಟಿದ್ದಾರೆ
ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದರೂ ಬಿಜೆಪಿ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಟಾಂಗಾ ಜಾಥಾ ನಡೆಸುವ ಮೂಲಕ ಶುಕ್ರವಾರ ಪ್ರತಿಭಟಿಸಿದ್ದಾರೆ. ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಮೂಲಕ ಜನರ ಬದುಕು ದುಸ್ಥಿತಿಗೆ ನೂಕುತ್ತಿದೆ . ಸರಕಾರ ಎಷ್ಟೇ ಭಂಡತನ ಪ್ರದರ್ಶಿಸಿದರೂ ಕಾಂಗ್ರೆಸ್ ತನ್ನ ಜನಪರ ಹೋರಾಟ ಮುಂದುವರೆಸುತ್ತದೆ ಎಂದು ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಈ ಜಾಥಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಸಲೀಂ ಅಹ್ಮದ್, ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತಿತರ ನಾಯಕರು ಕಾಂಗ್ರೆಸ್ ಕಚೇರಿಯಿಂದ ಟಾಂಗಾ ಮೂಲಕ ವಿಧಾನಸೌಧಕ್ಕೆ ತೆರಳಿದರು.