ನಾರಾಯಣಗೌಡ ಕಾಂಗ್ರೆಸ್‌ ಸೇರ್ಪಡೆ ವದಂತಿ , ಸಿಡಿದೆದ್ದ ಕೈ ಕಾರ್ಯಕರ್ತರು.

Mandya :  ಸದ್ಯ ಬಿಜೆಪಿ ಸರ್ಕಾರದಲ್ಲಿ  ರೇಷ್ಮೆ ಮತ್ತು  ಕ್ರೀಡಾ ಸಚಿವರಾಗಿರುವ ಕೆ.ಸಿ.ನಾರಾಯಣಗೌಡರನ್ನು (K.C.Narayana Gowda) ಕಾಂಗ್ರೆಸ್‌ಗೆ ಸೇರ್ಪಡೆ(congress slams narayana gowda) ಮಾಡಿಕೊಳ್ಳಲಾಗುತ್ತಿದೆ.

ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ (D.K.Shivakumar) ಅವರೊಂದಿಗೆ ಈ ಕುರಿತು ಚರ್ಚೆ ನಡೆಸಲಾಗಿದೆ ಎಂಬ ವದಂತಿ ಹರಡಿದ್ದು,

ನಾರಾಯಣಗೌಡ ಕಾಂಗ್ರೆಸ್‌ ಸೇರ್ಪಡೆಗೆ  ಮಂಡ್ಯ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು  ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲಾ ಕಾಂಗ್ರೆಸ್‌ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮಾರ್ಚ್‌ 13 ರಂದು  ನಡೆಯಲಿರುವ ಪ್ರಜಾಧ್ವನಿ ಯಾತ್ರೆಯ ವೇಳೆ ನಾರಾಯಣಗೌಡ ಕಾಂಗ್ರೆಸ್‌(Congress) ಸೇರ್ಪಡೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.

ಇದಕ್ಕೆ ಮಂಡ್ಯ ಕಾಂಗ್ರೆಸ್‌ ನಾಯಕರಾದ ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ಕೆ.ಆರ್.ಪೇಟೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾದ ವಿಜಯರಾಮೇಗೌಡ,

ನಾಗೇಂದ್ರ, ಬಿ.ಪ್ರಕಾಶ್, ಕೀಕೆರೆ ಪ್ರಕಾಶ್, ಮಾಜಿ ಶಾಸಕ ಚಂದ್ರಶೇಖರ್ ಸೇರಿದಂತೆ  ಹಲವು ಮುಖಂಡರು ಸಿದ್ದರಾಮಯ್ಯ(Siddaramaiah) ಅವರೊಂದಿಗೆ  ಸಭೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಯ ಹೆಸರನ್ನು ಘೋಷಿಸದ ಕಾರಣಕ್ಕೆ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಜಿಲ್ಲಾಧ್ಯಕ್ಷ ಸಿ ಡಿ ಗಂಗಾಧರ್(C.D.Gangadhar) ಅವರ ಕಾರಿನ ಮೇಲೆ ಮೊಟ್ಟೆಗಳಿಂದ ಹಲ್ಲೆ ನಡೆಸಿದ್ದಾರೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, ಗಂಗಾಧರ್ ಅವರು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾ ತಯಾರಿ (congress slams narayana gowda) ಕುರಿತು ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚಿಸಲು ತೆರಳಿದ್ದರು.

ಆದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಹೆಸರಿಸುವಂತೆ ಪಕ್ಷದ ಕಾರ್ಯಕರ್ತರು ಒತ್ತಾಯಿಸಿದರು. ಸಂವಾದದ ವೇಳೆ ಕಾರ್ಯಕರ್ತರು ಅಭ್ಯರ್ಥಿಯ ಹೆಸರನ್ನು ಬಹಿರಂಗಪಡಿಸುವಂತೆ ಘೋಷಣೆಗಳನ್ನು ಕೂಗಿದರು,

ಆದರೆ ಗಂಗಾಧರ್ ಮೌನವನ್ನು ಉಳಿಸಿಕೊಂಡರು ಮತ್ತು ನಗುತ್ತಲೇ ಹೋಗಿ ತಮ್ಮ ಕಾರಿನೊಳಗೆ ಕುಳಿತುಕೊಂಡರು.

ಕೆಲವು ಕ್ಷಣಗಳ ನಂತರ, ಕಾಂಗ್ರೆಸ್(Congress) ಪಕ್ಷದ ಕಾರ್ಯಕರ್ತರು ಬೆಂಗಾವಲು ಪಡೆಯಲ್ಲಿರುವ ಅವರ ಇತರ ಕಾರುಗಳ ಮೇಲೆ ಮೊಟ್ಟೆಗಳನ್ನು ಒಡೆದರು.

ನಂತರ ಕೆ.ಆರ್.ಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ನಾರಾಯಣಗೌಡರ ಸೇರ್ಪಡೆ ಕಾಂಗ್ರೆಸ್‌ ಪಕ್ಷ ವಿರೋಧಿಸಿ ಬ್ಯಾನರ್‌ಗಳನ್ನು ಹಾಕಿದ್ದಾರೆ.

ಕಾಂಗ್ರೆಸ್‌ಗೆ ನಾರಾಯಣಗೌಡರ ಕೊಡುಗೆ ಎನು ಎಂದು ಪ್ರಶ್ನಿಸಿದ್ದಾರೆ. ಆಕಾಂಕ್ಷಿಗಳಿಗೆ ಟಿಕೆಟ್ ನಿರಾಕರಿಸಲು ಕಾರಣಗಳನ್ನು ಪ್ರಶ್ನಿಸಿದ್ದಾರೆ. 

ಸದ್ಯ ಕೆ.ಆರ್.ಪೇಟೆ ಕಾಂಗ್ರೆಸ್‌ನಲ್ಲಿ  ನಾರಾಯಣಗೌಡ ಕಾಂಗ್ರೆಸ್‌ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮುಂದೆನಾಗಲಿದ ಎಂಬುದನ್ನು ಕಾದುನೋಡಬೇಕಿದೆ.

Exit mobile version