ಕಾಂಗ್ರೆಸ್ನ ಆತ್ಮವೇ ಹಿಂದೂ, ಅವರು ಅಯೋಧ್ಯೆ ಕಾರ್ಯಕ್ರಮಕ್ಕೆ ಹಾಜರಾಗಬೇಕು: ಉದ್ಧವ್ ಠಾಕ್ರೆ ಒತ್ತಾಯ

Mumbai: ಕಾಂಗ್ರೆಸ್ (Congress) ಪಕ್ಷದ ಆತ್ಮವೇ ಹಿಂದೂ ಧರ್ಮವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ನಾಯಕರು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ರಾಮಂದಿರ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನವನ್ನು ಪಡೆದಿದ್ದರೆ, ಕಾಂಗ್ರೆಸ್ ಪಕ್ಷವು ಅಯೋಧ್ಯೆಯಲ್ಲಿ ಭಗವಾನ್ ರಾಮ ಮಂದಿರದ (Rama Mandir) ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಬೇಕು ಎಂದು ಶಿವಸೇನೆಯ ನಾಯಕ ಉದ್ದವ್ ಠಾಕ್ರೆ (Uddhav Thackeray) ಹೇಳಿದ್ದಾರೆ.

ರಾಮ ಮಂದಿರ ಶಂಕುಸ್ಥಾಪನೆ ಸಮಾರಂಭಕ್ಕೆ ಕಾಂಗ್ರೆಸ್ಗೆ ಯಾವುದೇ ವಿಶೇಷ ಆಹ್ವಾನ ಬಂದಿದ್ದರೆ ಅದರ (ನಾಯಕರು) ಅಯೋಧ್ಯೆಗೆ @Ayodhya ಹೋಗಬೇಕು. ಅದರಲ್ಲಿ ತಪ್ಪೇನಿದೆ? ಎಂದು ಶಿವಸೇನೆ ಪಕ್ಷದ ಮುಖವಾಣಿ ಪತ್ರಿಕೆ ಸಾಮ್ನಾ ತನ್ನ ಸಂಪಾದಕೀಯದಲ್ಲಿ ಕೇಳಿದೆ.

ಬಿಜೆಪಿಯನ್ನು (BJP) “ಹಿಂದುತ್ವದ ವೀಕ್ಷಕ” ಎಂದು ಹೇಳುವುದು ತಪ್ಪ. ಹಿಂದೂ ಸಂಸ್ಕೃತಿಯ ಬೆಳವಣಿಗೆಗೆ ಕಾಂಗ್ರೆಸ್ ಸಮಾನ ಕೊಡುಗೆ ನೀಡಿದೆ. ಕಾಂಗ್ರೆಸ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಲಿಲ್ಲ. ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು (Rajeev Ghandhi) ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂದು ಅಭಿಪ್ರಾಯಪಟ್ಟಿದ್ದರು.

ರಾಜೀವ್ ಗಾಂಧಿಯವರ ಸೂಚನೆಯ ಮೇರೆಗೆ ದೂರದರ್ಶನದಲ್ಲಿ ಪ್ರಸಿದ್ಧ ಧಾರಾವಾಹಿ ರಾಮಾಯಣವನ್ನು ಪ್ರಸಾರ ಮಾಡಲಾಯಿತು ಎಂದು ಸಂಪಾದಕೀಯದಲ್ಲಿ ಹೇಳಿದೆ. ಇನ್ನು ಉದ್ಧವ್ ಠಾಕ್ರೆ ನೇತೃತ್ವದ ಪಕ್ಷವು ಮಹಾ ವಿಕಾಸ್ ಅಘಾಡಿಯಲ್ಲಿ ಕಾಂಗ್ರೆಸ್ನ ಮಿತ್ರಪಕ್ಷವಾಗಿದೆ ಮತ್ತು ವಿರೋಧ ಪಕ್ಷಗಳ ಇಂಡಿಯಾ ಬ್ಲಾಕ್ನ ಸದಸ್ಯ ಪಕ್ಷವೂ ಆಗಿದೆ. ಜನವರಿ (January) 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ #SoniaGandhi ಮತ್ತು ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಆಹ್ವಾನಿಸಲಾಗಿದೆ.

ಆದರೆ, ಈ ಕಾರ್ಯಕ್ರಮಕ್ಕೆ ತನ್ನ ಪ್ರಮುಖ ನಾಯಕರು ಪಾಲ್ಗೊಳ್ಳುವ ಬಗ್ಗೆ ಕಾಂಗ್ರೆಸ್ ಇನ್ನೂ ತನ್ನ ಅಧಿಕೃತ ನಿಲುವನ್ನು ಸ್ಪಷ್ಟಪಡಿಸಿಲ್ಲ. ಕಳೆದ ವಾರ, ಪಕ್ಷವು “ಸೂಕ್ತ ಸಮಯದಲ್ಲಿ” ಕಾರ್ಯಕ್ರಮಕ್ಕೆ ಹಾಜರಾಗುವ ಬಗ್ಗೆ ನಿರ್ಧರಿಸುತ್ತದೆ ಎಂದು ಹೇಳಿದೆ. ಈ ಮಧ್ಯೆ ಆಮ್ ಆದ್ಮಿ ಪಕ್ಷ (Aam Aadmi Party), ತೃಣಮೂಲ ಕಾಂಗ್ರೆಸ್ ಈ ಕಾರ್ಯಕ್ರಮಕ್ಕೆ ನಾವು ಹಾಜರಾಗುವುದಿಲ್ಲ ಎಂದು ಹೇಳಿವೆ.

Exit mobile version